MP Sumalatha To Enter State Politics: ರಾಜ್ಯ ರಾಜಕಾರಣಕ್ಕೆ ಸುಮಲತಾ ಎಂಟ್ರಿ!? ವರಿಷ್ಠರೂ ಸೂಚಿಸಿದೇ ಮಂಡ್ಯದಿಂದ ಸ್ಪರ್ಧೆ
ಮಂಡ್ಯ,ಏಪ್ರಿಲ್17: ರಾಜ್ಯ ರಾಜಕೀಯದಲ್ಲಿ ಚುನಾವಣಾ ಕಾವು ಜೋರಾಗಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಘಟಾನುಘಟಿ ನಾಯಕರ ಸ್ಪರ್ಧೆಗೆ ಸಾಕ್ಷಿಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
2019 ರ ಲೋಕಸಭಾ ಚುನಾವಣೆಯಲ್ಲಿ ಇಡೀ ಇಂಡಿಯಾವೇ ಮಂಡ್ಯ ಚುನಾವಣಾ ಕಣದ ಮೇಲೆ ಕಣ್ಣು ಇಟ್ಟಿತ್ತು. ಆದರೆ ಈ ಬಾರೀ ಹಲವು ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ಸಕ್ಕರೆ ನಾಡು ಮಂಡ್ಯ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಲಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸುಮಲತಾ ವಿರುದ್ದ ತಿರುಗಿ ಬಿದ್ದಿದ್ದು, ಈಗಾಗಲೇ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದಾರೆ. ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣಕ್ಕೆ ಮಂಡ್ಯ ಸಂಸದೆ ಸುಮಲತಾ ಎಂಟ್ರಿಯಾಗುತ್ತಾರೆ ಎನ್ನುವ ಸುದ್ದಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಸ್ಥಳೀಯ ನಾಯಕರೊಂದಿಗೆ ಸಾಕಷ್ಟು ಸಭೆಗಳನ್ನ ನಡೆಸುತ್ತಿರುವ ಸುಮಲತಾ ಈಗಾಗಲೇ ಕಾರ್ಯಕರ್ತರು ಬಯಸಿದರೆ ರಾಜ್ಯ ರಾಜಕಾರಣಕ್ಕೆ ಬರುವುದಾಗಿ ಹೇಳಿದ್ದಾರೆ.
ಈಗಾಗಲೇ ಮೇ 10 ರಂದು ಚುನಾವಣೆ ಘೋಷಣೆಯಾಗಿದ್ದು, ಚುನಾವಣೆಗೆ ತಯಾರಿ ನಡೆಸುತ್ತಿರುವ ಹೊತ್ತಲಿ ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಹೌದು, ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾಧದ್ಯಮಗಳ ಜೊತೆಗೆ ಮಾತನಾಡಿದ ಸುಮಲತಾ ಅಂಬರೀಶ್, ವರಿಷ್ಠರು ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವದಂತಿ ಇದೆ. ಪಕ್ಷ ಸೂಚನೆ ನೀಡಿದರೆ ನನ್ನ ಸ್ಪರ್ಧೆ ಇರಲಿದೆ ಎಂದು ಹೇಳಿದ್ದಾರೆ.

ಇನ್ನೂ ಹೈಕಮಾಂಡ್ ನಾಯಕರು ಇದುವರೆಗೂ ನನಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ ಎಂದು ಹೇಳಿದ ಅವರು, ಮಂಡ್ಯ ಜಿಲ್ಲೆಯ ಜನರು ಬದಲಾವಣೆ ಬಯಸುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇನ್ನೂ ಮದ್ದೂರಿನಲ್ಲಿ ಅಂಬರೀಶ್ ಅಭಿಮಾನಿಗಳು ಹೆಚ್ಚು ಇದ್ದಾರೆ. ಹೀಗಾಗಿ ಅಂಬರೀಶ್ ಅಭಿಮಾನಿಗಳಿರುವುದರಿಂದ ಬಿಜೆಪಿಗೆ ಪ್ಲಸ್ ಆಗುತ್ತೆ. ಮುಂದಿನ ದಿನಗಳಲ್ಲಿ ಬಿಜೆಪಿ ಪರ ಅಭಿಷೇಕ್ ಪ್ರಚಾರ ಮಾಡುತ್ತಾರೆ ಎಂದು ತಿಳಿಸಿದರು.
ಅದು ಅಲ್ಲದೇ ಕುರಿತು ಬಿಜೆಪಿ ಪಾಳಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸುಮಲತಾ ಅವರಿಗೆ ಸಂಸದೆ ಅವಧಿ ಇನ್ನೂ ಒಂದು ವರ್ಷ ಬಾಕಿ ಇದ್ದು, ರಾಜ್ಯ ರಾಜಕೀಯಕ್ಕೆ ಎಂಟ್ರಿಯಾಗಲು ಆಸೆಯನ್ನ ಸುಮಲತಾ ಅವರು ಸಹ ಆಪ್ತರ ಜೊತೆಗೆ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರು ಬಿಜೆಪಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರಗೊಳಿಸಲು ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ಮೋದಿ ಹಾಗೂ ಅಮಿತ್ ಶಾ ಮಂಡ್ಯ ಭೇಟಿ ಕೊಟ್ಟ ಬೆನ್ನೆಲ್ಲೇ ಜೆಡಿಎಸ್ ನಾಯಕರು ಫುಲ್ ಅಲರ್ಟ್ ಆಗಿದ್ದು ಮಂಡ್ಯ ಜಿಲ್ಲೆಯ ಶಾಸಕರ ಜೊತೆಗೆ ಚರ್ಚೆ ನಡೆಸಿದ್ದಾರೆ.
ಇತ್ತ ಮಂಡ್ಯದ 7ಕ್ಕೆ 7 ಕ್ಷೇತ್ರ ಗೆಲ್ಲಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರೆ ತರಲು ಮುಂದಾಗಿದ್ದಾರೆ. ಮಂಡ್ಯದಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರೀ ಸುಮಲತಾ ಅಂಬರೀಶ್ ಬಿಜೆಪಿ ಬೆಂಬಲದ ಮೇಲೆ ಕಣಕ್ಕಿಳಿದರೇ ಜೆಡಿಎಸ್ ನಿಂದ ಮಂಡ್ಯ ಕ್ಷೇತ್ರಕ್ಕೆ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ಇನ್ನೂ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಪಡೆಯುವ ತವಕದಲ್ಲಿರುವ ಕಾಂಗ್ರೆಸ್ ಸಹ ಹಲವು ಲೆಕ್ಕಾಚಾರವನ್ನ ಹಾಕಿಕೊಂಡಿದೆ.












Click it and Unblock the Notifications