ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಖಚಿತ; ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರ: ಆಯನೂರು ಮಂಜುನಾಥ್
ಶಿವಮೊಗ್ಗ,ಏಪ್ರಿಲ್6: ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.
ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕುಟುಂಬ ರಾಜಕಾರಣವಿದೆ. ವಯಸ್ಸಿನ ಏರುಪೇರಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಮೋದಿಯವರು ತಮ್ಮ ಕುಟುಂಬವನ್ನೇ ಏಕೆ, ತಮ್ಮ ತಾಯಿಯವರನ್ನೇ ರಾಜಕೀಯದ ನೆರಳನ್ನೂ ಕಾಣದಂತೆ ಸಾಕಿದ್ದವರು. ಅಂತಹ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಇಲ್ಲಿ ಯಾರಿಗೂ ಇಲ್ಲ. ಹಾಗಾಗಿ ಗುಜರಾತ್ ಮಾದರಿಯ ಮೋದಿ ಮಾದರಿಯ ಚುನಾವಣೆ ಎಲ್ಲಿ ಸಾಧ್ಯ ಎಂದರು.

ಮೋದಿ ಹೆಸರು ಹೇಳುವ ಅರ್ಹತೆ ಅನೇಕರಿಗೆ ಇಲ್ಲ. ಬಿಜೆಪಿ ಎಂಬುದು ಒಳ್ಳೆಯ ಬಸ್ಸೇ ಇರಬಹುದು. ಆದರೆ ಅದನ್ನು ಓಡಿಸುವ ಡ್ರೈವರ್, ನಿರ್ವಹಣೆ ಮಾಡುವ ಕಂಡಕ್ಟರ್ ಮತ್ತು ಬಸ್‌ನಲ್ಲಿದ್ದ ಪ್ರಯಾಣಿಕರು ಕೆಟ್ಟವರಾದರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ನನ್ನ ನಿರ್ಧಾರವನ್ನು ಮಾಡಬೇಕಾಗುತ್ತದೆ ಆದರೆ ಅದೇ ಮುಖ್ಯವಲ್ಲ. ಮುಖ್ಯವಾಗಿ ಶಿವಮೊಗ್ಗದಲ್ಲಿ ಶಾಂತಿ ಬಯಸುವವನು ನಾನು. ಈಗಲೂ ಮತ್ತೆ ಮತ್ತೆ ಹೇಳುತ್ತೇನೆ. ಕೆ.ಎಸ್. ಈಶ್ವರಪ್ಪ ಅವರಾಗಲಿ, ಅಥವಾ ಅವರ ಮಗನೇ ಆಗಲಿ ಸ್ಪರ್ಧೆ ಮಾಡಬೇಕು. ಅವರ ವಿರುದ್ಧವೇ ನಾನು ಸ್ಪರ್ಧಿಸುತ್ತೇನೆ. ಹಾಗಂತ ಅವರ ಕೈಗೊಂಬೆಯಂತಿರುವವರು ಸ್ಪರ್ಧಿಸಿದರೂ ಕೂಡ ನಾನು ಅವರ ವಿರುದ್ಧ ಸ್ಪರ್ಧಿಸುತ್ತೇನೆ. ನನಗೆ ಶಾಂತಿ ಮುಖ್ಯ ಎಂದರು.

ಶಿವಮೊಗ್ಗ ಅಭ್ಯರ್ಥಿ ಈಶ್ವರಪ್ಪರನ್ನು ಬದಲಾಯಿಸಬೇಕು ಎಂದು ನಾನು ಬಲವಾಗಿ ಆಗ್ರಹಿಸಿದ್ದೇನೆ. ಈ ನಿಲುವು ಪ್ರಕಟ ಮಾಡಿದ ಮೇಲೆ ಬಿಜೆಪಿಯ ಅನೇಕರು ನನ್ನ ನಿಲುವನ್ನು ಬೆಂಬಲಿಸಿದ್ದಾರೆ. ನನ್ನ ನಡೆ ಬಿಜೆಪಿಯಲ್ಲಷ್ಟೇ ಅಲ್ಲ. ಕಾಂಗ್ರೆಸ್ ನಲ್ಲೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ನನಗೆ ಬಿಜೆಪಿಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ಖಚಿತವಾಗಿದೆ. ಹಾಗಾಗಿ ಪಕ್ಷೇತರನಾಗಿ ಸ್ಪರ್ಧಿಸುವುದು ನಿಶ್ಚಿತ ಎಂದು ಮಂಜುನಾಥ್ ತಿಳಿಸಿದರು.
ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಕುರಿತು ಮಾತನಾಡಿ, ಅವರಿಗೆ ನಿರ್ದೇಶಕರ ಕೊರತೆ ಇದೆ. ಎಂದು ಮಾರ್ಮಿಕವಾಗಿ ಮಾತನಾಡಿದ ಅವರು ನೀವು ವಿಧಾನಸಭೆ ಪ್ರವೇಶ ಮಾಡಲೇಬೇಕು ಎಂದು ಹಲವು ಗೆಳೆಯರು, ಮತದಾರರು, ಬಿಜೆಪಿ ಕಾರ್ಯಕರ್ತರು ಅಭಿಲಾಷೆ ಪಡುತ್ತಿದ್ದಾರೆ. ಕಾರ್ಮಿಕರು, ಆಟೋ ಚಾಲಕರು ಒತ್ತಾಯ ಮಾಡುತ್ತಿದ್ದಾರೆ. ಅವರ ಪ್ರೀತಿಗೆ ಹೃದಯ ತುಂಬಿ ಬಂದಿದೆ. ನನ್ನ ಎಲ್ಲಾ ನಿರ್ಧಾರಗಳನ್ನು ಎಲ್ಲರ ಸಲಹೆ ಪಡೆದೇ ತೆಗೆದುಕೊಳ್ಳುತ್ತೇನೆ ಈ ಎಲ್ಲಾ ನಿರ್ಧಾರ ತೆಗೆದುಕೊಳ್ಳಲು ಮೂರು ನಾಲ್ಕು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದರು.
ಇನ್ನೂ ನೂತನ ಕಚೇರಿ ಓಪನ್ ಮಾಡಿರುವ ಕುರಿತು ಮಾತನಾಡಿ, ಸರ್ಕಾರಿ ಕಚೇರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ನನ್ನ ಅಧಿಕೃತ ಕಚೇರಿ ಬಂದ್ ಆಗಿದೆ. ಇದರಿಂದ ನನ್ನನ್ನು ಭೇಟಿ ಮಾಡಲು ಬರುವವರಿಗೆ ತೊಂದರೆ ಆಗುತ್ತಿತ್ತು. ಕಚೇರಿ ಸ್ಥಳಾಂತರಕ್ಕೆ ಬಹಳ ಅತ್ಯುತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಚುನಾವಣೆಗೆ ಸ್ಪರ್ಧಿಸುವ ತಮ್ಮ ನಿಲುವು ಸರಿಯಿದೆ. ಶಿವಮೊಗ್ಗದಲ್ಲಿ ಶಾಂತಿ ಮಾತ್ರವಲ್ಲ. ನೆಮ್ಮದಿಯ ಅಗತ್ಯವಿದೆ ಎಂದು ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications