Darshan: ದರ್ಶನ್ ಬಿಡುಗಡೆಯಾಗುವವರೆಗೂ ಚಪ್ಪಲಿ ಧರಿಸುವುದಿಲ್ಲ: ಅಭಿಮಾನಿ ಧನುಷ್ ಶಪಥ

ಬೆಂಗಳೂರು, ಜುಲೈ 10: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಹಲವರು ಅರೆಸ್ಟ್ ಆಗಿದ್ದಾರೆ. ಜೈಲಿನಲ್ಲಿದ್ದರು ನಟ ದರ್ಶನ್ ಅವರ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಕೆಲವರು ದರ್ಶನ್ ಅವರ ಖೈದಿ ಸಂಖ್ಯೆಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದಾರೆ. ಮತ್ತೋರ್ವ ಅಭಿಮಾನಿ ಮಗುವಿಗೆ ಖೈದಿ ಸಂಖ್ಯೆ ಹಾಕಿಸಿ ಫೋಟೋಶೂಟ್ ಮಾಡಿಸಿದ್ದಾರೆ. ಆದರೆ,ಇಲ್ಲೋಬ್ಬ ಅಭಿಮಾನಿ ಶಪಥ ಒಂದನ್ನು ಮಾಡಿದ್ದಾರೆ.

I Will Never Wear Sandals Until Darshan Release Says Fan

ಹೌದು, ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್‌ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ, ನಟ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದು, ಇದೀಗ ಮೈಸೂರಿನ ನಟ ದರ್ಶನ್ ಅವರ ಅಭಿಮಾನಿ ಧನುಷ್ ಶಪಥ ಒಂದನ್ನು ಮಾಡಿದ್ದಾರೆ.

ದರ್ಶನ್ ಬಿಡುಗಡೆಯಾಗುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದಿದ್ದಾರೆ. ಅಲ್ಲದೇ ದರ್ಶನ್‌ ಅವರು ಬೇಗ ಜೈಲಿನಿಂದ ಬಿಡುಗಡೆಯಾಗಲಿ ಎಂದು ದರ್ಶನ್‌ಗಾಗಿ ತಿರುಪತಿ ತಿಮ್ಮಪ್ಪನಲ್ಲಿ ಹರಕೆ ಹೊತ್ತಿದ್ದು, ಮುಡಿ ನೀಡಲಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಮೊರೆ ಹೋದ ನಟ ದರ್ಶನ್

ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದು, ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜೂನ್ 11ರ ಮಂಗಳವಾರ ದರ್ಶನ್ ಬಂಧಿಸಲಾಗಿತ್ತು. ಪೊಲೀಸರ ವಿಚಾರಣೆ ಬಳಿಕ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜುಲೈ 18ರ ತನಕ ಆರೋಪಿ ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.

ನಟ ದರ್ಶನ್ ಪರ ವಕೀಲರು ಜೈಲಿನಲ್ಲಿ ಮನೆ ಊಟ ಮಾಡಲು ಅನುಮತಿ ನೀಡಬೇಕು, ಹಾಸಿಗೆ ನೀಡಬೇಕು, ಪುಸ್ತಕ ಓದಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. ವಕೀಲರು ಜೈಲಿನ ಊಟ ನಟ ದರ್ಶನ್‌ಗೆ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ಮಾಡುತ್ತಿರುವುದರಿಂದ ಅವರಿಗೆ ವಾಂತಿ, ಭೇದಿ ಆಗುತ್ತಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಆದ್ದರಿಂದ ಮನೆಯ ಊಟ ಸೇವಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+