ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆ ಚುನಾವಣೆಗೆ ಸ್ಪರ್ಧೆ, ಚಲುವರಾಯಸ್ವಾಮಿ ಹೇಳಿದ್ದೇನು?

By Gururaj
|
Google Oneindia Kannada News

Recommended Video

Lok Sabha Elections 2019 : ಚುನಾವಣೆ ಸ್ಪರ್ಧೆ ಹಾಗು ಸಿದ್ದು ಬಗ್ಗೆ ಎನ್ ಚಲುವರಾಯಸ್ವಾಮಿ ಹೇಳಿದ್ದೇನು?

ಬೆಂಗಳೂರು, ಆಗಸ್ಟ್ 27 : 'ನಾನು ಯಾವುದೇ ಕಾರಣಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಜೆಡಿಎಸ್ ಕಾರ್ಯಕರ್ತರು ಟಾರ್ಗೆಟ್ ಮಾಡುತ್ತಿದ್ದಾರೆ' ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ ಹೇಳಿದರು.

ಸೋಮವಾರ ಚಲುವರಾಯಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದರು. ನಂತರ ಮಾತನಾಡಿದ ಅವರು, 'ಸಿದ್ದರಾಮಯ್ಯ ಅವರು ಒಂಟಿಯಲ್ಲ. ಅವರನ್ನು ಒಂಟಿ ಎಂದುಕೊಂಡರೆ ಅವರಷ್ಟು ದಡ್ಡರು ಮತ್ಯಾರು ಇಲ್ಲ' ಎಂದರು.

ಎಚ್.ಸಿ.ಬಾಲಕೃಷ್ಣ, ಚೆಲುವರಾಯಸ್ವಾಮಿ ಬಿಜೆಪಿಗೆ?ಎಚ್.ಸಿ.ಬಾಲಕೃಷ್ಣ, ಚೆಲುವರಾಯಸ್ವಾಮಿ ಬಿಜೆಪಿಗೆ?

I will not contest for Lok Sabha Elections 2019 says Cheluvarayaswamy

'ಎಲ್ಲಾ ಶಾಸಕರು, ಮಾಜಿ ಶಾಸಕರು, ಸಚಿವರು, ಸಂಸದರು ಸಿದ್ದರಾಮಯ್ಯ ಅವರ ಜೊತೆಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಅವರು ಒಂಟಿಯಲ್ಲ' ಎಂದು ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲ್ಲ : ಚೆಲುವರಾಯಸ್ವಾಮಿಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲ್ಲ : ಚೆಲುವರಾಯಸ್ವಾಮಿ

'ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು 2019ರ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಆದರೂ ನಾವು ಸಹಿಸಿಕೊಂಡು ಇರಬೇಕಾಗಿದೆ' ಎಂದರು.

ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುವ ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, 'ಸರ್ಕಾರದಲ್ಲಿ ಪಕ್ಷದ ಪರವಾಗಿ ಪರಮೇಶ್ವರ ಮತ್ತು ಡಿ.ಕೆ.ಶಿವಕುಮಾರ್ ಇದ್ದಾರೆ. ಅವರೇ ಆ ಬಗ್ಗೆ ಮಾತನಾಡುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಪಕ್ಷ ತೀರ್ಮಾನ ಕೈಗೊಳ್ಳಲಿದೆ' ಎಂದು ಹೇಳಿದರು.

English summary
Nagamangala Former MLA and Congress leader Cheluvarayaswamy said that I will not contest for Lok Sabha Elections 2019. Cheluvarayaswamy met Siddaramaiah on August 26, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X