ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟನೆ ಕೊಟ್ಟ ಪ್ರಕಾಶ್ ರಾಜ್
ಬೆಂಗಳೂರು, ನವೆಂಬರ್ 12 : 'ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಗೊಳ್ಳುತ್ತಿಲ್ಲ. ನಟರು ರಾಜಕಾರಣಕ್ಕೆ ಬರುವುದು ದೊಡ್ಡ ದುರಂತ' ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು.
ನಟ-ನಟಿಯರು ರಾಜಕೀಯ ಪ್ರವೇಶ ಮಾಡೋದು ದುರಂತ ಎಂದ ಪ್ರಕಾಶ್ ರೈ
ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಭಾನುವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, 'ಪ್ರಚಾರಕ್ಕಾಗಿ ನಾನು ಹೇಳಿಕೆಗಳನ್ನು ನೀಡುವುದಿಲ್ಲ. ಯಾವುದೇ ರಾಜಕೀಯ ಪಕ್ಷದ ಮೇಲೆ ನನಗೆ ನಂಬಿಕೆ ಇಲ್ಲ' ಎಂದರು.

'ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಉದ್ದೇಶ ನನಗಿಲ್ಲ. ನಾನು ಯಾವ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿಲ್ಲ' ಎಂದು ಪ್ರಕಾಶ್ ರಾಜ್ ಸ್ಪಷ್ಟಪಡಿಸಿದರು.
'ಅಭಿಮಾನಿಗಳು ಮತ್ತು ನಮ್ಮ ಕರ್ತವ್ಯದ ಕುರಿತು ನನಗೆ ಜ್ಞಾನವಿದೆ. ನಟರು ರಾಜಕೀಯಕ್ಕೆ ಸೇರ್ಪಡೆಗೊಳ್ಳುವುದು ನನಗೆ ಇಷ್ಟವಿಲ್ಲ' ಎಂದು ಪ್ರಕಾಶ್ ರಾಜ್ ಹೇಳಿದರು.
ನಟ ಕಮಲ್ ಹಾಸನ್ ಮತ್ತು ರಜನಿಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ, ಯಾವುದೇ ನಟರ ಹೆಸರನ್ನು ಪ್ರಸ್ತಾಪಿಸದೆ ಪ್ರಕಾಶ್ ರಾಜ್, ನಟರು ರಾಜಕೀಯದಿಂದ ದೂರ ಉಳಿಯಬೇಕು ಎಂದು ಹೇಳಿದರು.
ಕಳೆದ ತಿಂಗಳು ಗೌರಿ ಲಂಕೇಶ್ ಹತ್ಯೆಯ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಪ್ರಕಾಶ್ ರಾಜ್ ಟೀಕಿಸಿದ್ದರು. ಈ ಬಗ್ಗೆ ಸಾಮಾಜಿ ಜಾಲತಾಣದಲ್ಲಿ ಭಾರೀ ಚರ್ಚೆ ನಡೆದಿತ್ತು.











Click it and Unblock the Notifications