ಮೋದಿ ರಾಜೀನಾಮೆ ಕೊಟ್ಟಿದ್ರಾ, ನಾನ್ಯಾಕೆ ಕೊಡ್ಬೇಕು ರಾಜೀನಾಮೆ ಎಂದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು ರಾಜೀನಾಮೆ ಕೊಟ್ಟಿದ್ರಾ. ಎಚ್‌.ಡಿ ಕುಮಾರಸ್ವಾಮಿ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಕೇಂದ್ರ ಸಚಿವ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇನ್ನು ಗುಜರಾತ್‌ನಲ್ಲಿ ನಡೆದ ಗೋಧ್ರಾ ಗಲಭೆಯ ವಿಚಾರದಲ್ಲಿ ಮೋದಿ ರಾಜೀನಾಮೆ ಕೊಟ್ಟಿದ್ದರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದು, ಈಗ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿವೆ. ಈ ನಡುವೆ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಅವರು ಪುನರುಚ್ಚರಿಸಿದ್ದಾರೆ. 2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ಗಲಭೆ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ರಾಜೀನಾಮೆ ಕೊಟ್ಟಿದ್ದರೆ, ಅವರು ಆಗಲೂ ಅಧಿಕಾರದ ಗದ್ದುಗೆಯಿಂದ ಕೆಳಗೆ ಇಳಿದರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

I will not resign Chief Minister Siddaramaiah said

ನಾನು ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ. ನಾನು ಏನು ತಪ್ಪು ಮಾಡಿದ್ದೇನೆ ಎಂದು ರಾಜೀನಾಮೆ ಕೊಡಬೇಕು. ಗೋಧ್ರಾ ಗಲಭೆಯಲ್ಲಿ ನೂರಾರು ಜನ ಸಾವನ್ನಪ್ಪಿದ್ದರು. ನರೇಂದ್ರ ಮೋದಿ ಅವರ ವಿರುದ್ಧ ಎಫ್‌ಐಆರ್‌ ಸಹ ದಾಖಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ಮೋದಿ ರಾಜೀನಾಮೆ ಕೊಟ್ಟಿರಲಿಲ್ಲ ಎಂದು ಹೇಳಿದ್ದಾರೆ.

ಎಚ್‌.ಡಿ ಕುಮಾರಸ್ವಾಮಿಯಿಂದ ಮುಜುಗರ ಆಗಲ್ವಾ ?

ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ, ಕೇಂದ್ರ ಸಚಿವರಾಗಿ ಮೋದಿ ನೇತೃತ್ವದ ಸರ್ಕಾರದಲ್ಲಿ ಗುರುತಿಸಿಕೊಂಡಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಟ್ಟಿದ್ದಾರಾ, ಅವರಿಂದ ಮುಜುಗರ ಆಗುತ್ತಿಲ್ಲವೇ. ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ, ಮುಜುಗರ ಆಗುವುದಿದ್ದರೆ ಅವರೇಕೆ ರಾಜೀನಾಮೆ ಕೊಡಬಾರದು ಎಂದೂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

I will not resign Chief Minister Siddaramaiah said

ಮುಡಾದಿಂದ ಕಾಂಗ್ರೆಸ್‌ಗೆ ಮುಜುಗರ, ಹಿನ್ನಡೆ: ಮುಡಾ ವಿಚಾರದಿಂದ ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ಮುಜುಗರವಾಗಿದ್ದು, ಹಿನ್ನಡೆಯೂ ಆಗಿದೆ. ದೇಶದಲ್ಲಿ ಈಗ ಸಾಲು ಸಾಲು ಚುನಾವಣೆಗಳು ನಡೆಯುತ್ತಿವೆ. ಅಲ್ಲೆಲ್ಲವೂ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಕಾಂಗ್ರೆಸ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸುತ್ತಿದೆ. ದೇಶದ ಪ್ರಮುಖ ರಾಜ್ಯಗಳ ಚುನಾವಣೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ಪಕ್ಷವನ್ನು ಕಟ್ಟಿಹಾಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹರಿಯಾಣ ಚುನಾವಣಾ ಪ್ರಚಾರದಲ್ಲಿ ಈ ವಿಷಯವನ್ನು ಪ್ರಧಾನಿ ಪ್ರಸ್ತಾಪಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯ ಮೇಲೆಯೇ ಜಮೀನು ಕಬಳಿಸಿದ ಆರೋಪ ಇದೆ. ಅವರು ಅಲ್ಲಿ ದಲಿತರ ಫಂಡ್‌ ಅನ್ನು ಸಹ ದುರುಪಯೋಗ ಪಡೆಸಿಕೊಂಡಿದ್ದಾರೆ. ಇವರಿಗೆ ಮತ್ತೊಮ್ಮೆ ಹರಿಯಾಣದಲ್ಲಿ (ಕಾಂಗ್ರೆಸ್‌) ಅವಕಾಶ ನೀಡಬೇಡಿ ಎಂದು ಮೋದಿ ಪ್ರಚಾರ ಮಾಡುತ್ತಿದ್ದಾರೆ. ಒಂದೊಮ್ಮೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಈಗ ರಾಜೀನಾಮೆ ನೀಡಿದರೆ, ಮುಂದೆ ಇದನ್ನೇ ಬಿಜೆಪಿ ಅಸ್ತ್ರ ಮಾಡಿಕೊಳ್ಳಲಿದೆ. ಮಹಾರಾಷ್ಟ್ರ ಹಾಗೂ ದೆಹಲಿಯಲ್ಲೂ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದೆ ಈ ಎಲ್ಲ ಕಾರಣಗಕ್ಕಾಗಿ ಕಾಂಗ್ರೆಸ್‌ ಹೈಕಮಾಂಡ್‌ ಎಚ್ಚರಿಕೆಯಿಂದ ಹೆಜ್ಜೆ ಇರಿಸುತ್ತಿದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+