HD Kumaraswamy: 2028ರ ವಿಧಾನಸಭಾ ಚುನಾವಣೆ; ರಾಜ್ಯ ರಾಜಕೀಯಕ್ಕೆ ಮತ್ತೆ ಎಂಟ್ರಿ: ಹೆಚ್ ಡಿ ಕುಮಾರಸ್ವಾಮಿ ಅಚ್ಚರಿ ಹೇಳಿಕೆ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ಮೇಲೆ ಈ ಹಿಂದೆಯೂ ಕಣ್ಣೀಟ್ಟಿದ್ದ ಹೆಚ್ ಡಿ ಕುಮಾರಸ್ವಾಮಿ ಅವರು ಸದ್ಯ ರಾಷ್ಟ್ರ ರಾಜಕಾರಣದ ಮೂಲಕಕ ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಬದಲಾವಣೆಗಳ ಮೇಲೆ ಕಣ್ಣೀಟ್ಟಿದ್ದಾರೆ. ಈಗಾಗಲೇ ನಾಯಕತ್ವ ಬದಲಾವಣೆ ಕುರಿತು ಕೈ ಪಾಳಯದಲ್ಲಿ ನಡೆಯುತ್ತಿರುವ ಚರ್ಚೆಗಳ ಮೇಲೆ ಅಮಿತ್ ಶಾ ಜೊತೆಗೂ ಹೆಚ್ ಡಿ ಕುಮಾರಸ್ವಾಮಿ ಚರ್ಚೆ ನಡೆಸಿದ್ದು, ಕೈ ಪಾಳಯದಲ್ಲಿನ ಬಣ ಕಿತ್ತಾಟವನ್ನ ಲಾಭ ಪಡೆಯಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ರು. ಇದೀಗ ಮತ್ತೆ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತು ಹೆಚ್ ಡಿ ಕುಮಾರಸ್ವಾಮಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ, ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು. ನಾವು ಎನ್ಡಿಎ ಮೈತ್ರಿಯಲ್ಲಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ನಮ್ಮ ಉದ್ದೇಶ ರಾಜ್ಯದಲ್ಲಿ ಉತ್ತಮ ಸರ್ಕಾರ ತರಬೇಕು ಎನ್ನುವುದು. ಇದು ನನ್ನ ವೈಯಕ್ತಿಕ ಉದ್ದೇಶ ಎಂದರು.

ರಾಜ್ಯದಲ್ಲಿ ಈಗ ಆಡಳಿತ ಹೇಗೆ ನಡೆಯುತ್ತಿದೆ ಎಂದು ನಾನು ನಿರಂತರವಾಗಿ ಗಮನಿಸುತ್ತಿದ್ದೇನೆ. ಒಳ್ಳೆಯ ಸರ್ಕಾರ ಬಂದು ಜನತೆ ನೆಮ್ಮದಿಯಿಂದ ಇರಬೇಕು. ಈ ನಿಟ್ಟಿನಲ್ಲಿ ನಾಡಿನ ಜನತೆ ನಾನು ಯಾವ ಸ್ಥಾನದಲ್ಲಿ ಇರಬೇಕು ಅಂತ ತೀರ್ಮಾನ ಮಾಡಿದರೆ ಅದರಂತೆ ನಡೆಯುತ್ತೇನೆ. ಈ ವಿಷಯ ನನ್ನ ಕೈಯಲ್ಲಿ ಇಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ನಾನು ರಾಜ್ಯ ರಾಜಕೀಯದಿಂದ ದೂರ ಸರಿಯುತ್ತೇನೆ ಅಂತ ಯಾರಾದರೂ ತಿಳಿದುಕೊಂಡಿದ್ದರೆ ತಪ್ಪು. ನಾನು ರಾಜ್ಯ ರಾಜಕಾರಣದಿಂದ ದೂರ ಸರಿಯಲ್ಲ. ರಾಜ್ಯದ ರಾಜಕಾರಣದಲ್ಲಿ ಇರುತ್ತೇನೆ. ಕೇಂದ್ರದಲ್ಲಿ ಪ್ರಧಾನಿಗಳು ಉತ್ತಮ ಜವಾಬ್ದಾರಿ ಕೊಟ್ಟಿದ್ದಾರೆ. ಎರಡು ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಅಂತ ತೀರ್ಮಾನ ಮಾಡುತ್ತೇನೆ. ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಿರಂತರವಾಗಿ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಸರಿಯಲ್ಲ, ಶಿಡ್ಲಘಟ್ಟ ಪ್ರಕರಣದ ಬಗ್ಗೆ ನಾನು ಈಗಾಗಲೇ ಮುಖ್ಯ ಕಾರ್ಯದರ್ಶಿ ಅವರಿಗೆ ತಿಳಿಸಿದ್ದೇನೆ. ಈವರೆಗೆ ಅವರು ಈ ಬಗ್ಗೆ ಯಾವ ಕ್ರಮವನ್ನು ವಹಿಸಿಲ್ಲ. ಇವತ್ತು ಸಂಕ್ರಾಂತಿ ಹಬ್ಬವಿದೆ. ಹೀಗಾಗಿ ನಾನು ಮತ್ತೆ ಅವರನ್ನು ಕೇಳಲು ಹೋಗಿಲ್ಲ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡನಿಂದ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣ ನಿಜಕ್ಕೂ ಬೇಸರ ತರಿಸಿದೆ. ನಮ್ಮ ಪಕ್ಷ ಅಂತಲ್ಲ, ಯಾವುದೇ ಪಕ್ಷದ ಕಾರ್ಯಕರ್ತರು, ಮುಖಂಡರು ಅಧಿಕಾರಿಗಳ ಜತೆ ಅನುಚಿತವಾಗಿ ವರ್ತಿಸಬಾರದು. ಒಂದೆರಡು ಪ್ರಕರಣಗಳಲ್ಲಿ ಕಠಿಣ ಕ್ರಮ ಜರುಗಿಸಿದರೆ ಅದು ಪಾಠವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಸಲಹೆ ಮಾಡಿದರು. ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸುವ ಪ್ರವೃತ್ತಿ ಸರ್ಕಾರದಲ್ಲಿ ವ್ಯಾಪಕವಾಗಿದೆ. ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಅಧಿಕಾರದಲ್ಲಿರುವ ಮೇಲಿನವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಾನೂನುಬಾಹಿರ ಕೆಲಸ ಮಾಡಿಸುತ್ತಿದ್ದಾರೆ. ಸರ್ಕಾರ ಸರಿ ಇಲ್ಲದೆ ಇಲ್ಲದಿದ್ದಾಗ ಇವೆಲ್ಲ ನಡೆಯುತ್ತವೆ. ಮೇಟಿ ಸರಿಯಾಗಿದ್ದರೆ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
-
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ











Click it and Unblock the Notifications