Siddaramaiah: ಹೈಕಮಾಂಡ್ ಹೇಳುವವರಿಗು ನಾನೇ ಸಿಎಂ : ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್ 16: 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ. ಎಲ್ಲಿಯವರೆಗೂ ಹೈಕಮಾಂಡ್ ಹೇಳುತ್ತೋ ಅಲ್ಲಿಯವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುಣಿಗಲ್ ಶಾಸಕ ರಂಗನಾಥ್ ಪ್ರಶ್ನೆ ಕೇಳಿದರು ಆಕ್ರೋಶ ಭರಿತರಾದಂತೆ ಶಾಸಕ ಎಚ್ ಡಿ ರಂಗನಾಥ್ ಪ್ರಶ್ನೆ ಕೇಳಿದರು ನಂತರ ಸ್ವಲ್ಪ ಸಮಯದ ಬಳಿಕ ನನಗೇನು ಸಿಟ್ಟಿಲ್ಲ ನಾನು ಮಾತನಾಡುವುದೇ ಹೀಗೆ ಅಂತ ರಂಗನಾಥ್ ಹೇಳಿದರು ಬಳಿಕ ರಂಗನಾಥ್ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದರು.

ಗಾದೆ ಮಾತೆನಂತೆ ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.
2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕ್ಆರಕ್ಕೆ ಬರಲಿದೆ. 2013 ರಲ್ಲಿ 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ.
ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. "'ನಾನು' ಹೋದರೆ ಹೋದೇನು" ಅಂತ ಕನಕದಾಸರು ಹೇಳಿದ್ದರು. "ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ". ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications