Lok Sabha Election: ಲೋಕಸಭಾ ಚುನಾವಣೆಗೆ ಟಿಕೆಟ್ ಮಿಸ್!? ಟಿಕೆಟ್ ನೀಡದಿದ್ದರೆ ರಾಜಕೀಯ ನಿವೃತ್ತಿ: ಸಂಗಣ್ಣ ಕರಡಿ
ಕೊಪ್ಪಳ, ಜೂನ್ 02: 2024 ರ ಲೋಕಸಭಾ ಚುನಾವಣೆಯಲ್ಲಿ ಈ ಬಾರೀ ಹಲವು ಬಿಜೆಪಿ ನಾಯಕರಿಗೆ ಟಿಕೆಟ್ ಕೈ ತಪ್ಪಿಲಿದೆ ಎನ್ನುವ ಚರ್ಚೆ ಬಿಜೆಪಿ ಪಾಳಯದಲ್ಲಿ ಜೋರಾಗಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ನೀಡುವುದಿಲ್ಲ ಎಂಬ ವರದಿಯಾಗಿದೆ.
ಮಾಧ್ಯಮಗಳಲ್ಲಿ ಬಿಜೆಪಿಯ 12 ಜನ ಹಾಲಿ ಸಂಸದರಿಗೆ ಟಿಕೆಟ್ ಇಲ್ಲ ಎಂಬ ವರದಿ ಪ್ರಸಾರವಾಗಿವೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯ ಸಂಗಣ್ಣ ಕರಡಿಗೂ ಸಹ ಟಿಕೆಟ್ ಇಲ್ಲ ಎಂಬ ವರದಿ ಇದೆ.ಇದಕ್ಕೆ ಪ್ರತಿಕ್ರಿಯಿಸಿದ ಅವರು ಪಕ್ಷದ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದನ್ನು ಸ್ವಾಗತಿಸುತ್ತೇನೆ. ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ದವಾಗಿರುತ್ತೇನೆ ಎಂದರು.

ಇತ್ತೀಚಿಗೆ ಬಿಜೆಪಿ ಸಂಸದರ ಸಭೆ ಕರೆಯಲಾಗಿತ್ತು. ಆಗಲೂ ಈ ಬಗ್ಗೆ ಚರ್ಚೆಯಾಗಿಲ್ಲ.ಪಕ್ಷದವರು ನಮ್ಮ ಬಳಿ ಅದರ ಬಗ್ಗೆ ಏನು ಚರ್ಚೆ ಮಾಡಿಲ್ಲ. ಪಕ್ಷ ಒಂದು ವೇಳೆ ಸ್ಪರ್ಧಿಸಿ ಎಂದರೆ ಸ್ಪರ್ಧಿಸುವೆ, ಬೇಡ ಎಂದರೆ ಬಿಡುವೆ ಎಂದರು.
ಈಗ ನನ್ನದು ನಿವೃತ್ತಿ ವಯಸ್ಸು ಟಿಕೆಟ್ ಇಲ್ಲ ಎಂದಾಗ ರಿಟೈರ್ಡ್ ಆಗುತ್ತೇನೆ. ಸಕ್ರೀಯ ರಾಜಕಾರಣದಲ್ಲಿದ್ದು ನಮ್ಮ ಕೈಯಿಂದ ಏನು ಕೆಲಸ ಮಾಡಲು ಆಗುವುದು ಅದನ್ನು ಮಾಡುವೆ ಎಂದರು.
ಕಳೆದ 10 ವರ್ಷಗಳಿಂದ ಕೊಪ್ಪಳದ ಸಂಸದರಾಗಿರುವ ಸಂಗಣ್ಣ ಕರಡಿಗೆ ಈಗ 72 ವಯಸ್ಸು. ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ನಿಯಮವಿದೆ. ಈ ನಿಯಮ ಪಾಲನೆಯ ಹಿನ್ನಲೆಯಲ್ಲಿ ಸಂಗಣ್ಣರಿಗೆ ಟಿಕೆಟ್ ತಪ್ಪುವ ಸಾಧ್ಯತೆ ಇದೆ.

2013 ರಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿನ ನಂತರ 2014 ರಲ್ಲಿ ಸಂಗಣ್ಣ ಕರಡಿಗೆ ಲೋಕಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಕಳೆದ 2019 ರ ಚುನಾವಣೆಯಲ್ಲಿಯೂ ಅವರು ಜಯ ಗಳಿಸಿದ್ದಾರೆ. 2019 ರಲ್ಲಿ ತಮಗೆ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿದಿದ್ದರು. ಬಿಜೆಪಿ ಸಂಗಣ್ಣರಿಗೆ ಮಣಿದು ಒಮ್ಮೆ ಮಗ ಅಮರೇಶ ಕರಡಿಗೆ . 2023 ರಲ್ಲಿ ಸೊಸೆ ಮಂಜುಳಾ ಕರಡಿಗೆ ಟಿಕೆಟ್ ಕೊಡಿಸಿದ್ದರು.
1978 ರಿಂದ ಸಕ್ರೀಯ ರಾಜಕೀಯದಲ್ಲಿರುವ ಸಂಗಣ್ಣ ಕರಡಿ ಈಗ ಚುನಾವಣಾ ನಿವೃತ್ತಿಯಾಗುವ ಹಂತಕ್ಕೆ ಬಂದಿದ್ದಾರೆ. ಪಕ್ಷ ಟಿಕೆಟ್ ನೀಡದಿದ್ದರೆ ರಾಜಕೀಯ ರಿಲೀಫ್ ಸಿಗುತ್ತದೆ ಎಂದು ಹೇಳಿದ್ದಾರೆ.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications