ಯಡಿಯೂರಪ್ಪ ಹೇಳಿಕೆಗೆ ಎಚ್ ಡಿ ದೇವೇಗೌಡರ ಸ್ವಾಗತ
ಬೆಂಗಳೂರು, ಜುಲೈ 27: ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ವಿಚಾರದಲ್ಲಿ ನಾನು ಮತ್ತು ಕುಮಾರಸ್ವಾಮಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ್ರು ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಗೌಡ್ರು, ಬಿಜೆಪಿಗೆ ಬೆಂಬಲ ನೀಡುವ ವಿಷಯದಲ್ಲಿ ನಮ್ಮ ಪಕ್ಷದ ಮುಖಂಡರು ತಲೆಕೆಡೆಸಿಕೊಳ್ಳುವ ಅವಶ್ಯಕತೆಯಿಲ್ಲ ಎಂದಿರುವ ಗೌಡ್ರು, ಈಗಿಂದಲೇ ಪಕ್ಷ ಸಂಘಟನೆಯ ಬಗ್ಗೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ ದೇವೇಗೌಡ್ರು, ನೂತನ ಮುಖ್ಯಮಂತ್ರಿಗಳು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಕೆಲವು ಶಾಸಕರಿಂದಾಗಿ ಸಮ್ಮಿಶ್ರ ಸರಕಾರ ಪತನಗೊಂಡಿತು. ಅವರ ವಿರುದ್ದ ನನ್ನ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿರುವ ಗೌಡ್ರು, ಕಾರ್ಯಕರ್ತರು ಮತ್ತು ಮುಖಂಡರು ಎಲ್ಲದಕ್ಕೂ ಸಜ್ಜಾಗಿರುವಂತೆ ಸೂಚಿಸಿದರು.
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ಮುಂದೆ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ ಎಂದು ಜೆಡಿಎಸ್ ಮುಖಂಡರು, ದೇವೇಗೌಡ್ರನ್ನು ಒತ್ತಾಯಿಸಿದ್ದಾರೆಂದು ಹೇಳಲಾಗುತ್ತಿದೆ.
ಅತೃಪ್ತರಿಗೆ ತಕ್ಕ ಪಾಠವನ್ನು ಕಲಿಸುತ್ತೇನೆ, ಅವರನ್ನು ನೆಮ್ಮದಿಯಾಗಿ ಇರಲು ನಾನು ಬಿಡುವುದಿಲ್ಲ ಎಂದು ದೇವೇಗೌಡ್ರು ಈ ಸಂದರ್ಭದಲ್ಲಿ ಗುಡುಗಿದ್ದಾರೆ.












Click it and Unblock the Notifications