ಸಿದ್ದರಾಮಯ್ಯ ನೀವೇ 5 ವರ್ಷ ಸಿಎಂ ಆಗಿರಿ, ನಿಮ್ಮ ಜೊತೆ ನಾವಿದ್ದೇವೆ ಎಂದ ಯತ್ನಾಳ್- ವಿಚಿತ್ರ ಆಟ ಶುರು ಮಾಡಿದ 'ಹಿಂದೂ ಹುಲಿ'
ಬೆಳಗಾವಿ,ಡಿಸೆಂಬರ್ 06: ರಾಜ್ಯ ಕಾಂಗ್ರೆಸ್ ನಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಗ ಗದ್ದುಗೆಗಾಗಿ ಗುದ್ದಾಟ ಸದ್ಯ ಬೂದಿ ಮುಚ್ಚಿದ ಕೆಂಡದಂತಿದ್ದು, ಪದೇ ಪದೇ ಕೈ ಪಾಳಯದಲ್ಲಿ ಸಿಎಂ ಚರ್ಚೆ ಜಾಲ್ತಿಯಲ್ಲಿರುತ್ತದೆ.
ಹೌದು, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ವಿಚಾರವಾಗಿ ಹೇಳಿಕೆಯನ್ನ ನಿಲ್ಲಿಸುವಂತೆ ಖಡಕ್ ಆದೇಶ ನೀಡಿದ್ದು, ಸದ್ಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ವಿಚಾರವಾಗಿ ಸೈಲೆಂಟ್ ಆಗಿದ್ದಾರೆ. ಆದರೆ, ರಾಯಚೂರು ನಗರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಅವರು ಮುಂದಿನ ಹತ್ತು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಲಿ ಎಂದು ಹೇಳಿದ್ರು. ಇದೀಗ ಮತ್ತೊಬ್ಬ ಬಿಜೆಪಿಯ ಹಿರಿಯ ಶಾಸಕ ಬೆಳಗಾವಿಯಲ್ಲಿ ನಡೆಯುತ್ತಿರುವ ಸದನದಲ್ಲಿಯೇ ಸಿದ್ದರಾಮಯ್ಯ ಐದು ವರ್ಷಗಳ ಮುಖ್ಯಮಂತ್ರಿಯಾಗಿರಲಿದೆ ಎಂದು ಹೇಳಿದ್ದು, ಸಾಕಷ್ಟು ಕುತೂಹಲ ಹುಟ್ಟುವಂತೆ ಮಾಡಿದೆ.

ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರನ್ನ ನೇಮಕ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿರುವ ಬಸವನಗೌಡ ಪಾಟೀಲ್ ಯತ್ನಾಳ್ ಸದನದಲ್ಲಿಯೇ ನಿಮ್ಮ ಜೊತೆಗೆ ನಾವಿದ್ದೇವೆ, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಹೇಳಿದ್ದಾರೆ.
ಮೊದಲಿನ ಸಿದ್ದರಾಮಯ್ಯ ಅಲ್ಲ ಅಂತ ಜನಸಾಮಾನ್ಯನಿಗೂ ಗೊತ್ತಾಗಿದೆ, ಅವರು ಮೊದಲಿನ ಹಾಗಿದ್ದರೆ ಆಡಳಿತ ಮತ್ತು ರಾಜ್ಯದ ಬರದ ಸ್ಥಿತಿ ಹೀಗಿರುತ್ತಿರಲಿಲ್ಲ. ಅವರು ಮಂಕಾಗಿರೋದ್ರಿಂದಲೇ ಸ್ಥಿತಿ ಬಿಗಡಾಯಿಸಿದೆ, ಸಿದ್ದರಾಮಯ್ಯ ಯಾರಿಗೂ, ಯಾವುದಕ್ಕೂ ಹೆದರುವ ಅಗತ್ಯವಿಲ್ಲ, ನಾವೆಲ್ಲ ಅವರೊಂದಿಗಿದ್ದೇವೆ ಅಂತ ಬಸನಗೌಡ ಪಾಟೀಲ್ ಯತ್ನಾಳ್ ಸದಸದಲ್ಲಿಯೇ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಬಿಸಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣ ಪೆಬ್ರವರಿ ಅಂತ್ಯಕ್ಕೆ ಹಾರಾಟಕ್ಕೆ ಸಿದ್ದ
ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೆಬ್ರವರಿ ಅಂತ್ಯದಲ್ಲಿ ಮುಕ್ತಾಯಗೊಳಿಸಿ, ವಿಮಾನ ಹಾರಾಟವನ್ನು ಆರಂಭಿಸಲಾಗುವುದು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.
ಅವರು ಇಂದು ವಿಧಾನ ಪರಿಷತ್ ನಲ್ಲಿ ಸದಸ್ಯ ಪ್ರಕಾಶ್ ಕೆ ರಾಥೋಡ್ ಕೇಳಿದ ಚುಕ್ಕೆಗುರಿತನ ಪ್ರಶ್ನೆ 134 ಕ್ಕೆ , ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃಧ್ದಿ ಸಚಿವರ ಪರವಾಗಿ ಉತ್ತರಿಸಿದರು. ವಿಜಯಪುರದಲ್ಲಿ ವಿಮಾನ ನಿಲ್ದಾಣವನ್ನು ಏರ್ ಬಸ್-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ 347.92 ಕೋಟೊ ರೂ ಗಳ ವೆಚ್ಚದಲ್ಲಿ ಅಭಿವೃದ್ದಿಪಡಿಸಲಗುತ್ತಿದ್ದು, ಈ ಕಾಮಗಾರಿಗೆ ಇದುವರೆಗೆ 347.92 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. 3 ಪ್ಯಾಕೇಕ್ ಗಳಲ್ಲಿ ನಿರ್ಮಾಣವಾಗುತ್ತಿರುವ ಈ ವಿಮಾನ ನಿಲ್ದಾಣದ ಎಲ್ಲಾ ಕಾಮಗಾರಿಗಳು ಪೆಬ್ರವರಿ 2024 ರಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು.
ಈ ವಿಮಾನ ನಿಲ್ದಾಣಕ್ಕಾಗಿ 727.01 ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಕೊಳ್ಳಲಾಗಿದ್ದು, ಇದುವರೆಗೆ 351 ಎಕರೆ ಜಮೀನಿಗೆ 31.92 ಕೋಟಿ ರೂ ಗಳ ಪರಿಹಾರವನ್ನು ಪಾವತಿಸಲಾಗಿದ್ದು, 28.08 ಎಕರೆ ಜಮೀನಿಗೆ ನ್ಯಾಯಾಲಯದಲ್ಲಿ 2.25 ಕೋಟಿ ರೂ ಗಳನ್ನು ಠೇವಣಿ ಮಾಡಲಾಗಿದೆ ಎಂದರು.
ಪರಿಷತ್ ಸದಸ್ಯ ಗೋವಿಂದರಾಜು, ಕೋಲಾರ ಜಿಲ್ಲೆಯಲ್ಲಿ ಆರು ತಾಲೂಕುಗಳಲ್ಲಿ ಬೆಳ ಹಾನಿ ಹಾಗೂ ಅದರಿಂದ ನಷ್ಟ ಉಂಟಾಗಿರುವ ಬಗ್ಗೆ ಕೃಷಿ ಸಚಿವರ ಗಮನ ಸೆಳೆದರು. ಸಿ.ಎನ್. ಮಂಜೇಗೌಡ ಹಾಗೂ ಕೆ.ಎಂ. ತಿಪ್ಪೇಸ್ವಾಮಿ ಅವರು ರಾಜ್ಯದಲ್ಲಿ ಹಂಸಧ್ವನಿ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯನ್ನು ಪ್ರಾರಂಭಿಸದಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರ ಗಮನ ಸೆಳೆದರು. ಈ ಬಗ್ಗೆ ಉತ್ತರಿಸಿದ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್, ರಾಜ್ಯದಲ್ಲಿ ಹಂಸಧ್ವನಿ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯನ್ನು ಶೀಘ್ರದಲ್ಲಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications