Get Updates
Get notified of breaking news, exclusive insights, and must-see stories!

Mahantesh Bilagi Passes Away: ಭೀಕರ ರಸ್ತೆ ಅಪಘಾತ: ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ನಿಧನ

Mahantesh Bilagi Passes Away: ಕರ್ನಾಟಕದಲ್ಲಿ ಹೆಚ್ಚು ಜನ ಮನ್ನಣೆ ಗಳಿಸಿದ್ದ ಹಾಗೂ ಬಡವರಿಗೆ ಆಪ್ತರು, ಜನಪರ ಕಾಳಜಿಯಿಂದ ಹೆಸರು ಗಳಿಸಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (51) ಅವರು ಕಾರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ದಾವಣಗೆರೆ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಅವರು ಸೇವೆ ಸಲ್ಲಿಸಿದ್ದರು.

ಮಹಾಂತೇಶ್ ಬೀಳಗಿ ಅವರು ಮಂಗಳವಾರ ಸಂಜೆ ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದರು ಮಾರ್ಗ ಮಧ್ಯದ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಇನ್ನೋವಾ ಕಾರ್ ಅಪಘಾತಕ್ಕೆ ಒಳಗಾಗಿದೆ. ಈ ಅಪಘಾತ ಸಂಭವಿಸಿದ್ದ ಸ್ಥಳದಲ್ಲಿಯೇ ಜೊತೆಗಿದ್ದ ಇನ್ನಿಬ್ಬರು ಸಹ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬಿಳಗಿ ಅವರನ್ನು ಕೂಡಲೇ ಸಮೀಪದ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

IAS Officer Mahantesh Bilagi Dies in Tragic Road Accident

ಕರ್ನಾಟಕದಲ್ಲಿ ತಮ್ಮ ಸೇವೆ ಹಾಗೂ ಕಾರ್ಯವೈಖರಿಯಿಂದಲೇ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಖ್ಯಾತಿ ಗಳಿಸಿದ್ದರು. ದಾವಣಗೆರೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅವರು ಅಲ್ಲಿನ ಜನರಿಗೆ ಅಪಾರ ಆತ್ಮೀಯರಾಗಿದ್ದರು. ವಿದ್ಯಾರ್ಥಿಗಳಿಗೆ ಸಮಯ ಸಿಕ್ಕಾಗೆಲ್ಲಾ ಪ್ರೋತ್ಸಾಹ ಕೊಡುವುದು ಹಾಗೂ ಬಡವರಿಗೆ ಕೂಡಲೇ ಅವರ ಕೆಲಸಗಳನ್ನು ಮಾಡಿಕೊಡುತ್ತಿದ್ದರು. ಜನಮಾನಸದಲ್ಲಿ ಅವರ ಅಚ್ಚಳಿಯದೆ ಉಳಿದಿದ್ದರು. ಕರ್ತವ್ಯ ಪಾಲನೆ ಹಾಗೂ ಜನಪರ ಕಾಳಜಿಯ ಕೆಲಸಗಳಿಂದಲೇ ಅವರು ಖ್ಯಾತಿ ಗಳಿಸಿದ್ದರು. ಅವರ ಅಕಾಲಿಕ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ.

2012 ಕರ್ನಾಟಕ ಕೇಡರ್‌ ಐಎಎಸ್‌ ಅಧಿಕಾರಿಯಾಗಿದ್ದ ಬೀಳಗಿಯವರು ಹಲವು ಜಿಲ್ಲೆಗಳ ಸಿಇಒ, ಜಿಲ್ಲಾಧಿಕಾರಿಯಾಗಿ ಕಾರ್ಯ ಕೆಲಸ ಮಾಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಗೊಂಡು ಬೆಸ್ಕಾಂ ಎಂಡಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಈಚೆಗೆ ಅವರುಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಗೊಂಡಿದ್ದರು.

ಆಸ್ಪತ್ರೆಗೆ ಕಲಬುರಗಿ ಎಸ್‌ಪಿ ಅಡ್ಡೂರು ಶ್ರೀನಿವಾಸುಲು, ಡಿಎಚ್‌ಒ ಶರಣಬಸಪ್ಪ ಕ್ಯಾತನಾಳ್ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ.

1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಅವರು ತಮ್ಮ ಜನಸ್ನೇಹಿ ಕಾರ್ಯಗಳಿಂದ ರಾಜ್ಯದಲ್ಲಿ ಹೆಸರಾಗಿದ್ದರು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕಂಬನಿ ಮಿಡಿದ್ದಾರೆ. ಕರ್ನಾಟಕ ವಿಶೇಷ ಪುಟದಿಂದ ಗೌರವ ನಮನ ಸಲ್ಲಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು.

ಮಹಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+