ರೂಪಾಗೆ ಶಾಕ್ ನೀಡಿದ ರೋಹಿಣಿ ಸಿಂಧೂರಿ! 1 ಕೋಟಿ ರೂ. ಮಾನನಷ್ಟ ಕೇಸ್ ದಾಖಲು
ರೋಹಿಣಿ ಸಿಂಧೂರಿ ಹಾಗೂ ಡಿ ರೂಪಾ ನಡುವಿನ ಜಟಾಪಟಿಗೆ ಸರ್ಕಾರ ಬ್ರೇಕ್ ಹಾಕಿದ್ದು, ಪದೇ ಪದೇ ನನ್ನ ವಿರುದ್ದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿ ರೂಪಾ ವಿರುದ್ದ ರೋಹಿಣಿ 1 ಕೋಟಿ ರೂ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.
ಬೆಂಗಳೂರು,ಮಾರ್ಚ್1: ಕಳೆದ ಕೆಲ ದಿನಗಳಿಂದ ಐಪಿಎಸ್ ರೂಪಾ ಮತ್ತು ಐಎಎಸ್ ರೋಹಿಣಿ ಸಿಂಧೂರಿ ನಡುವೆ ಜಟಾಪಟಿ ಜೋರಾಗಿದ್ದು, ಸರ್ಕಾರ ಕೊಟ್ಟ ನೋಟೀಸ್ ನಿಂದ ಇಬ್ಬರ ನಡುವಿನ ಜಗಳ ಕೊಚ್ಚ ಕಡಿಮೆಯಾಗಿದ್ದು, ಇದೀಗ ಡಿ.ರೂಪಾ ಮೌದ್ಗಿಲ್ ಗೆ ರೋಹಿಣಿ ಸಿಂಧೂರಿ ಶಾಕ್ ನೀಡಿದ್ದಾರೆ.
ಹೌದು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನನ್ನ ವಿರುದ್ದ ಫೇಸ್ ಬುಕ್,ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಸುಳ್ಳು ಆರೋಪ ಮಾಡಿವ ಮೂಲ ಮಾನಹಾನಿ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ನಗರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ಅನಗತ್ಯವಾಗಿ ನನ್ನ ವಿರುದ್ದ ಈ ರೀತಿ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ರೋಹಿಣಿ ಸಿಂಧೂರಿ ಒಂದು ಕೋಟಿ ಹಣವನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನಗರದ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಇನ್ನೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಪರವಾಗಿ ಹಾಜರಾದ ವಕೀಲ ಸಿ.ವಿ.ನಾಗೇಶ್ ಅವರು, ದೂರುದಾರರು ಈ ಹಿಂದೆ ಚಾಮರಾಜನಗರ ಹಾಗೂ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಆರೋಪಿ ಡಿ.ರೂಪಾ, ದೂರುದಾರರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನ ಮಾಡಿದ್ದಾರೆ. ಆದ್ದರಿಂದ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕು. ಆರೋಪಿಯಾಗಿರುವ ಡಿ.ರೂಪಾ ಮೌದ್ಗಿಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ರೋಹಿಣಿ ಸಿಂಧೂರಿ ಅವರ ಪರವಾಗಿ ಹಾಜರಾದ ವಕೀಲ ಸಿ.ವಿ.ನಾಗೇಶ್ ಅವರ ವಾದವನ್ನ ಪರಿಗಣಿಸಿದ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರು ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿದರು.
ಕಳೆದ ಕೆಲ ದಿನಗಳಿಂದ ಡಿ.ರೂಪ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ.ಅವರ ಹೇಳಿಕೆಯಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ನನ್ನ ವಿರುದ್ದ ಡಿ ರೂಪಾ ಅವರು ಇಲ್ಲಸಲ್ಲದ ಆರೋಪದಿಂದಾಗಿ ನನ್ನ ಖಾಸಗಿ ಹಾಗೂ ವೃತ್ತಿ ಬದುಕಿನ ಮೇಲೆ ಸಾಕಷ್ಟು ಪರಿಣಾಯ ಬೀರಿದೆ ಎಂದು ರೋಹಿಣಿ ಸಿಂಧೂರಿ ದೂರಿನಲ್ಲಿ ಹೇಳಿದ್ದಾರೆ.
ಇನ್ನೂ ಐಎಎಸ್ ನಿಯಮಗಳಿಗೆ ವಿರುದ್ಧವಾಗಿ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಟೀಕೆ ಮಾಡಿದಾರೆ. ಇದು ನನಗೆ ಮಾತ್ರವಲ್ಲದೆ ಸರ್ಕಾರಕ್ಕೂ ಮುಜುಗುರ ಉಂಟು ಮಾಡಿದೆ. ಆದ್ದರಿಂದ, ನನಗಾಗಿರುವ ಮಾನನಷ್ಟಕ್ಕೆ ಒಂದು ಕೋಟಿ ರು. ಪರಿಹಾರವಾಗಿ ಕೊಡಿಸಿಕೊಡಬೇಕು ಹಾಗೂ ಡಿ ರೂಪಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಸಿಂಧೂರಿ ಕೋರಿದ್ದಾರೆ.












Click it and Unblock the Notifications