ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ವರ್ಗಾವಣೆ

ಬೆಂಗಳೂರು, ಫೆಬ್ರವರಿ 20: 2009ನೇ ಬ್ಯಾಚ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಲಾಗಿದೆ. ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಅವರನ್ನು ನೇಮಕ ಮಾಡಲಾಗಿದೆ.

IAS Officer Rohini Sindhuri Transferred

2010ನೇ ಬ್ಯಾಚ್ ಐಎಎಸ್ ಅಧಿಕಾರಿ ಸಿ. ಪಿ. ಶೈಲಜಾರನ್ನು ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅವರು ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಹಾಗೂ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. 2019ರ ಸೆಪ್ಟೆಂಬರ್‌ನಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿತ್ತು.

ಕೆಲವು ದಿನಗಳ ಕಾಲ ಯಾವುದೇ ಹುದ್ದೆಯನ್ನು ಸರ್ಕಾರ ನೀಡಿರಲಿಲ್ಲ. ಕೊನೆಗೆ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದ ನೇಮಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+