ಬಿಡಿಎ ಆಯುಕ್ತ ಟಿ.ಶ್ಯಾಂ ಭಟ್ ಪರಿಚಯ

By: ಒನ್ ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಜೂನ್ 07 : ಕರ್ನಾಟಕ ಸರ್ಕಾರ ಬಿಡಿಎ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಟಿ.ಶ್ಯಾಂ ಭಟ್ ಅವರ ಹೆಸರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿದೆ. ರಾಜ್ಯಪಾಲರು ಸರ್ಕಾರದ ಶಿಫಾರಸಿಗೆ ತಾತ್ಕಾಲಿಕ ತಡೆ ನೀಡಿದ್ದಾರೆ.

1992ನೇ ಬ್ಯಾಚ್ ಐಎಎಸ್ ಅಧಿಕಾರಿ ಶ್ಯಾಂ ಭಟ್ ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಮೇ ತಿಂಗಳಿನಲ್ಲಿ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿದೆ. ಕೆಪಿಎಸ್‌ಸಿ ಅಧ್ಯಕ್ಷರಾಗದಿದ್ದರೆ ಅವರು ಬೇರೆ ಇಲಾಖೆಗೆ ವರ್ಗಾವಣೆಯಾಗಲಿದ್ದಾರೆ. [KPSCಗೆ ಶ್ಯಾಂ ಭಟ್ ನೇಮಕಕ್ಕೆ ತಡೆ]

sham bhat

2002 ರಲ್ಲಿ ಸಾರಿಗೆ ಇಲಾಖೆಯಲ್ಲಿ ಅಂಡರ್ ಸೆಕ್ರೆಟರ್ ಆಗಿ ಕೆಲಸ ಆರಂಭಿಸಿದ ಶ್ಯಾಂ ಭಟ್ ಅವರು, ನಂತರ ಪಂಚಾಯತ್ ರಾಜ್, ಮುಜರಾಯಿ ಇಲಾಖೆಯಲ್ಲಿ ಉಪ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ. ಉಡುಪಿ, ಬೀದರ್ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. [KPSCಗೆ ಶ್ಯಾಂ ಭಟ್ ಅರ್ಹ ವ್ಯಕ್ತಿಯಲ್ಲ]

2012ರಲ್ಲಿ ಮುಖ್ಯಮಂತ್ರಿಯಾಗಿದ್ದ ಜಗದೀಶ್ ಶೆಟ್ಟರ್ ಅವರು ಶ್ಯಾಂ ಭಟ್ ಅವರನ್ನು ಬಿಡಿಎ ಆಯುಕ್ತರಾಗಿ ನೇಮಕ ಮಾಡಿದರು. ಅಂದಿನಿಂದಲೂ ಅವರು ಬಿಡಿಎಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ತಿಂಗಳು ಅವರಿಗೆ ಬಡ್ತಿ ಸಿಕ್ಕಿದೆ.

ಶ್ಯಾಂ ಭಟ್ ಬೆನ್ನು ಬಿಡದ ವಿವಾದ : ಶ್ಯಾಂ ಭಟ್ ಅವರು ವಿವಾದದಿಂದ ಮುಕ್ತವಾಗಿಲ್ಲ. ಅರ್ಕಾವತಿ ಬಡಾವಣೆಗೆ ಸ್ವಾಧೀನ ಪಡಿಸಿಕೊಳ್ಳಲಾದ ಭೂಮಿಯನ್ನು ರಿಯಲ್‌ ಎಸ್ಟೇಟ್ ಕಂಪೆನಿಗಳ ಪರವಾಗಿ ಡಿನೋಟಿಫಿಕೇಷನ್ ಮಾಡುವಲ್ಲಿ ಬಿಡಿಎ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಆರೋಪಿಸಿವೆ.

ಮೈಸೂರಿನ ಪ್ರಜ್ಞಾವಂತ ಮತ್ತು ಕಾಳಜಿಯುಳ್ಳ ನಾಗರಿಕರ ವೇದಿಕೆಯ (ಎಸಿಐಸಿಎಂ) ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗೆ ಶ್ಯಾಂ ಭಟ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಬಾರದು ಎಂದು ಒತ್ತಾಯಿಸಿದೆ.

ವರದಿ ಕೇಳಿದ ರಾಜ್ಯಪಾಲರು : ಸರ್ಕಾರ ಕಳಿಸಿರುವ ಶಿಫಾರಸನ್ನು ಪರಿಶೀಲಿಸಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು ಶ್ಯಾಂ ಭಟ್ ಅವರ ವಿರುದ್ಧ ಯಾವುದಾದರೂ ಆರೋಪಗಳಿವೆಯೇ? ಎಂದು ಲೋಕಾಯುಕ್ತದ ಬಳಿ ವರದಿ ಕೇಳಿದ್ದಾರೆ. ವರದಿ ಬಂದ ಬಳಿಕ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕ ಮಾಡುವ ಬಗ್ಗೆ ರಾಜ್ಯಪಾಲರು ತೀರ್ಮಾನ ಕೈಗೊಳ್ಳಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government recommended Bangalore Development Authority (BDA) commissioner is T. Sham Bhat name for the chairman of the Karnataka Public Service Commission (KPSC).
Please Wait while comments are loading...