IAS Transfer; ಅತೀಕ್ ಎಲ್. ಕೆ. ವರ್ಗಾವಣೆಗೊಳಿಸಿದ ಸರ್ಕಾರ
ಬೆಂಗಳೂರು, ನವೆಂಬರ್ 27; ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ನವೆಂಬರ್ 30ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ ನಿವೃತ್ತಿಯಾಗುವ ಹಿನ್ನಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ನಡೆದಿದೆ.
ಸೋಮವಾರ ಕರ್ನಾಟಕ ಸರ್ಕಾರ ಅತೀಕ್ ಎಲ್. ಕೆ. (ಕೆಎ: 1991) ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ವರ್ಗಾವಣೆಗೊಳಿಸಿದೆ.

ಅತೀಕ್ ಎಲ್. ಕೆ. ಅವರನ್ನು ಕರ್ನಾಟಕದ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದ ಡಾ. ರಜನೀಶ್ ಗೋಯಲ್ ಅವರನ್ನು ಬಿಡುಗಡೆಗೊಳಿಸಲಾಗಿದೆ.
ಸರ್ಕಾರ ಅತೀಕ್ ಎಲ್. ಕೆ. ಅವರನ್ನು ಮುಂದಿನ ಆದೇಶದ ತನಕ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿಯೂ ಮುಂದುವರೆಯಬೇಕು ಎಂದು ತಿಳಿಸಿದೆ.
ಮುಖ್ಯ ಕಾರ್ಯದರ್ಶಿಯಾಗಿ ನೇಮಕ; ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಡಾ. ರಜನೀಶ್ ಗೋಯಲ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.
ಡಾ. ರಜನೀಶ್ ಗೋಯಲ್ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಡಿಸೆಂಬರ್ 1ರಿಂದ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಆದ್ದರಿಂದ ಮುಖ್ಯ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ನವೆಂಬರ್ 30ರಂದು ನಿವೃತ್ತರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಡಾ. ರಜನೀಶ್ ಗೋಯಲ್ ನೇಮಕ ಮಾಡಿದೆ.












Click it and Unblock the Notifications