IAS Officers Promotion: ರಾಜ್ಯದಲ್ಲಿ ಏಳು ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ
IAS Officers Promotion: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಆದರೆ, ಇದೀಗ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರೆಲ್ಲಾ ಈ ಪಟ್ಟಿಯಲ್ಲಿ ಇದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್ ಸೇರಿದಂತೆ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ, ಕೃಷಿ ಇಲಾಖೆಯ ವಸಂತ್ ಕುಮಾರ್ ಪಿ., ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಶಿವಾನಂದ ಕಾಪಶಿ, ವಿಜಯನಗರದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ.
ಯಾರಿಗೆಲ್ಲಾ ಬಡ್ತಿ?
* ಕರೀಗೌಡ: ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
* ಡಾ. ಶಿವಶಂಕರ ಎನ್: ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರು
* ಬಸವರಾಜೇಂದ್ರ ಎಚ್: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರು
* ಡಾ. ಎಚ್.ಎನ್. ಗೋಪಾಲ ಕೃಷ್ಣ: ಕಾರ್ಮಿಕ ಇಲಾಖೆ ಆಯುಕ್ತರು
* ಕೃಷಿ ಇಲಾಖೆಯ ವಸಂತ್ ಕುಮಾರ್ ಪಿ
* ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಶಿವಾನಂದ ಕಾಪಶಿ
* ವಿಜಯನಗರದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಕೆಎಎಸ್ ಅಧಿಕಾರಿಗಳ ವರ್ಗಾವಣೆ: ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರ ಮೂವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಅಧಿಕಾರಿಗಳ ಹಸರು, ಹುದ್ದೆ ಹಾಗೂ ಸ್ಥಳದ ವಿವರ
* ಡಾ.ಸ್ನೇಹ ಸಿ.ವಿ. ಕೆಎಎಸ್ ಕಾರ್ಯದರ್ಶಿ, ಕರ್ನಾಟಕ ನಗರ ನೀರು ಸರಬರಾಜು ಮಂದಳಿ, ಬೆಂಗಳೂರು: ನಿರ್ದೇಶಕರು, ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
* ಕಾವ್ಯಾರಾಣಿ ಕೆ.ವಿ. ಕೆಎಎಸ್ ಉಪವಿಭಾಗಾಧಿಕಾರಿ, ಶಿರಸಿ ಉಪವಿಭಾಗ, ಉತ್ತರ ಕನ್ನಡ ಜಿಲ್ಲೆ: ಉಪವಿಭಾಗಾಧಿಕಾರಿ, ಹುಣಸೂರು ಉಪವಿಭಾಗ, ಮೈಸೂರು ಜಿಲ್ಲೆ
* ಶ್ರೀ ಚಿದಾನಂದ ಗುರುಸ್ವಾಮಿ, ಕೆಎಎಸ್, ಉಪವಿಭಾಗಾಧಿಕಾರಿ, ಹಪಪನಹಳ್ಳಿ, ಉಪವಿಭಾಗ, ವಿಜಯನಗರ ಜಿಲ್ಲೆ: ಉಪ ವಿಭಾಗಾಧಿಕಾರಿ, ಇಂಡಿ ಉಪವಿಭಾಗ, ವಿಜಯನಗರ ಜಿಲ್ಲೆ. ಇವರನ್ನು ಶ್ರೀಮತಿ ಅನುರಾಧ ವಸ್ತ್ರದ ಇವರ ಜಾಗಕ್ಕೆ ವರ್ಗಾಹಿಸಲಾಗಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications