IAS Officers Transfer: ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

IAS Officers Transffer: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸುತ್ತಲಿರುತ್ತದೆ. ಹಾಗೆಯೇ ಇದೀಗ ರಾಜ್ಯದಲ್ಲಿ ಇಬ್ಬರು ಪ್ರಮುಖ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ ವರ್ಗಾಹಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಚುರುಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ತಕ್ಷಣವೇ ಜಾರಿಗೆ ಬರುವಂತೆ ರಾಜ್ಯದ ಪ್ರಮುಖ ಐಎಎಸ್ ಅಧಿಕಾರಿಗಳು ಹಾಗೂ ಸಿಎಂ ಕಚೇರಿಗೆ ವಿಶೇಷ ಕರ್ತವ್ಯಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

IAS Officers Transfer in Karnataka Amlan Biswas Nitish K Appointed to Key Posts Know details

ಯಾರಿಗೆ ಯಾವ ಜವಾಬ್ದಾರಿ?

1997ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆಗೆ ಅವರು ಕಂದಾಯ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗದ ಪದನಿಮಿತ್ತ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಅಲ್ಲದೆ ಬಹುಕೋಟಿ ಐಎಂಎ ಹಗರಣದ ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಹೆಚ್ಚುವರಿ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ.

2015ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ನಿತೀಶ್‌ ಕೆ. ಅವರ ವರ್ಗಾವಣೆ ಆದೇಶದಲ್ಲಿ ಸರ್ಕಾರ ಬದಲಾವಣೆ ಮಾಡಿದೆ. ಈ ಹಿಂದೆ ಜೂನ್ 18ರಂದು ಅವರಿಗೆ ನೀಡಲಾಗಿದ್ದ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಹುದ್ದೆಯ ಆದೇಶವನ್ನು ಹಿಂಪಡೆಯಲಾಗಿದೆ. ಹೊಸ ಆದೇಶದಂತೆ ನಿತೀಶ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಗ್ರೇಟರ್ ಬೆಂಗಳೂರು ಅಥಾರಿಟಿಯ ವಿಶೇಷ ಆಯುಕ್ತ ಮತ್ತು ಮುಖ್ಯ ಹಣಕಾಸು ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಹರೀಶ್ ಕುಮಾರ್ ಕೆ. ಅವರನ್ನು ವರ್ಗಾವಣೆ ಮಾಡಲಾಗಿದೆ.

ಯಾರು ಯಾವ ಹುದ್ದೆಗೆ ವರ್ಗಾವಣೆ?

* ಅಮ್ಲನ್ ಆದಿತ್ಯ ಬಿಸ್ವಾಸ್: ಬೆಂಗಳೂರು ಪ್ರಾದೇಶಿಕ ಆಯುಕ್ತರು, ಐಎಂಎ ಪ್ರಕರಣದ ವಿಶೇಷ ಅಧಿಕಾರಿ.
* ನಿತೀಶ್‌ ಕೆ : ಗ್ರೇಟರ್ ಬೆಂಗಳೂರು ಅಥಾರಿಟಿ ವಿಶೇಷ ಆಯುಕ್ತರು (ಹಣಕಾಸು). ಈ ವರ್ಗಾವಣೆ ಪ್ರಕ್ರಿಯೆಯು ತಕ್ಷಣದಿಂದಲೇ ಜಾರಿಗೆ ಬರಲುದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್ ಆದೇಶ ಹೊರಡಿಸಿದ್ದಾರೆ.
* ಡಾ. ಕೆ. ವೈಷ್ಣವಿ, ಕೆ.ಎಂ.ಎ.ಎಸ್, ಪೌರಡಳಿತ ಇಲಾಖೆ, ಇವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.

ಯಾರೆಲ್ಲಾ ವರ್ಗಾವಣೆ?

* ಅಮ್ಲನ್ ಆದಿತ್ಯ ಬಿಸ್ವಾಸ್
* ನಿತೀಶ್‌ ಕೆ.
* ಡಾ. ಕೆ. ವೈಷ್ಣವಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+