IAS Officers Transfer: ಐವರು ಐಎಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

IAS Officers Transfer: ರಾಜ್ಯ ಸರ್ಕಾರವು ಆಗಾಗ ಆಡಳಿತ ಯಂತ್ರ ಸರ್ಜರಿ ಮಾಡುತ್ತಲಿರುತ್ತದೆ. ಇದೀಗ ರಾಜ್ಯದಲ್ಲಿ 5 ಮಂದಿ ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರನ್ನು ಎಲ್ಲಿಗೆ ವರ್ಗಾಹಿಸಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಸರದಿಯಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು, ಈ ಕುರಿತ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.

IAS Officers Transfer Karnataka Government Reshuffles 5 Officers Know Posting List Complete Detail

ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ಸರ್ಕಾರ ಹೊಸದಾಗಿ ಆರಂಭಿಸಿರುವ ಪ್ರಜಾ ಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿ ನೇಮಕ ಮಾಡಿದೆ. ಇದರೊಂದಿಗೆ ಅವರು ಈ ಹಿಂದೆ ನಿರ್ವಹಿಸುತ್ತಿದ್ದ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಸ್ಥಾನದ ಹೆಚ್ಚುವರಿ ಜವಾಬ್ದಾರಿಯನ್ನು ಅವರ ಬಳಿಯೇ ಉಳಿಸಲಾಗಿದೆ.

ಈ ಹಿಂದೆ ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಗೋಪಾಲ ಕೃಷ್ಣ ಅವರನ್ನು ಇದೀಗ ಕಾಲೇಜು ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಮಂಜುಶ್ರೀ ಎನ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇವರಿಗೆ ಸ್ಥಳ ನಿಯೋಜನೆ ಮಾಡಿಲ್ಲ. ಇದರೊಂದಿಗೆ ಹುದ್ದೆಯ ನಿರೀಕ್ಷೆಯಲ್ಲಿದ್ದ ಇಬ್ಬರು ಐಎಎಸ್ ಅಧಿಕಾರಿಗಳಿಗೂ ಹೊಸದಾಗಿ ಹುದ್ದೆಗಳನ್ನು ನೀಡಿ ಸ್ಥಳ ನಿಗದಿಪಡಿಸಲಾಗಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಈ ಪ್ರಮುಖ ವರ್ಗಾವಣೆ ಆದೇಶವನ್ನು ಹೊರಡಿಸಿದೆ ಎಂದು ತಿಳಿದುಬಂದಿದೆ.

ಯಾರು ಯಾವ ಇಲಾಖೆಗೆ ವರ್ಗಾವಣೆ?

* ಹರ್ಷ ಗುಪ್ತ - ಬೆಂಗಳೂರು ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಸ್ಥಾನದ ಜೊತೆಗೆ ಪ್ರಧಾನ ಕಾರ್ಯದರ್ಶಿ, ಪ್ರಜಾಸೇವಾ ಇಲಾಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ.

* ಡಾ.ರಾಗಪ್ರಿಯಾ ಆರ್: ಸ್ಥಳ ನಿರೀಕ್ಷೆಯಲ್ಲಿದ್ದ ಇವರನ್ನು ಬೆಂಗಳೂರು ಕಾರ್ಮಿಕ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

* ಡಾ.ಗೋಪಾಲ ಕೃಷ್ಣ ಎಚ್. ಎನ್.: ಕಾರ್ಮಿಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಇದೀಗ ಕಾಲೇಜು ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

* ಡಾ. ಹರೀಶ್ ಕುಮಾರ್ ಕೆ.: ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

* ಮಂಜುಶ್ರೀ ಎನ್‌: ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಇವರನ್ನು ವರ್ಗಾವಣೆ ಮಾಡಲಾಗಿದ್ದು, ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+