IAS: ರಶ್ಮಿ ಮಹೇಶ್ ಸೇರಿ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಮಾರ್ಚ್ 26: ಕರ್ನಾಟಕ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಮುಖವಾಗಿ ಕೆಎನ್: 1996 ಬ್ಯಾಚ್‌ನ ಹಿರಿಯ ಐಎಎಸ್ ಅಧಿಕಾರಿ ವಿ. ರಶ್ಮಿ ಮಹೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಶಾಲಾ ಶಿಕ್ಷಣ ಇಲಾಖೆಗೆ ಅವರನ್ನು ನೇಮಕ ಮಾಡಲಾಗಿದ್ದು, ಕಂದಾಯ ಇಲಾಖೆಯ ಹೆಚ್ಚುವರಿ ಹೊಣೆಯನ್ನು ನೀಡಿ ಸರ್ಕಾರ ಆದೇಶವನ್ನು ಹೊರಡಿಸಿದೆ.
ಐಎಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಟಿ. ಮಹಾಂತೇಶ್ ಸರ್ಕಾರದ ಅಧೀನ ಕಾರ್ಯದರ್ಶಿ, ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ.

ವಿ. ರಶ್ಮಿ ಮಹೇಶ್ (ಕೆಎನ್: 1996) ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಹುದ್ದೆಯಲ್ಲಿದ್ದರು. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಅವರನ್ನು ವರ್ಗಾವಣೆ ಮಾಡಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೇ ವಿ. ರಶ್ಮಿ ಮಹೇಶ್ ಅವರಿಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ, ಭೂಮಿ) ಹೆಚ್ಚುವರಿ ಹುದ್ದೆಯನ್ನು ಸಹ ನೀಡಲಾಗಿದೆ.

ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು
* ಎನ್. ಎಂ. ನಾಗರಾಜ (ಕೆಎನ್: 2016) ಯೋಜನಾ ನಿರ್ದೇಶಕರು, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಕ್ಷನ್ ಸೊಸೈಟಿ, ಬೆಂಗಳೂರು. ತತ್ ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಕೌಶಲ ಅಭಿವೃದ್ಧಿ ನಿಗದಮದ ಹುದ್ದೆಗೆ ನೇಮಕ. ಈ ಹುದ್ದೆಯಲ್ಲಿದ್ದ ರಾಗಪ್ರಿಯ ಅರ್. ಐಎಎಸ್ ಅವರನ್ನು ಬಿಡುಗಡೆ ಮಾಡಲಾಗಿದೆ.
* ಯತೀಶ್ ಆರ್. ಐಎಎಸ್ (ಕೆಎನ್: 2021) ಸಾಗರ ಉಪವಿಭಾಗಾಧಿಕಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಿಪಿಆರ್‌ನ (ಇ-ಆಡಳಿತ) ಎಲೆಕ್ಟ್ರಾನಿಕ್ ಡೆಲಿವರಿ ಸಿಟಿಜನ್ ಸರ್ವೀಸಸ್ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಅಲ್ಲದೇ ಹಣಕಾಸು ಇಲಾಖೆಯ ಎಚ್‌ಆರ್‌ಎಂಎಸ್ 2.0 ಯೋಜನಾ ನಿರ್ದೇಶಕ ಹುದ್ದೆ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ.
ವರ್ಗಾವಣೆಗೆ ಸಿದ್ಧತೆ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ ತಿಂಗಳಿಗೆ 2 ವರ್ಷ ಪೂರ್ಣಗೊಳ್ಳುತ್ತದೆ. ಈ ಸಂದರ್ಭದಲ್ಲಿ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಈ ಹಿನ್ನಲೆಯಲ್ಲಿ ಹಲವು ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗುತ್ತದೆ.
ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್‌ಪಿಗಳನ್ನು ವರ್ಗಾವಣೆ ಮಾಡಿತ್ತು. ಈಗ ಅವರು ಎರಡು ವರ್ಷ ಜಿಲ್ಲೆಯಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದು, ಈಗ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ.
2024ರ ಲೋಕಸಭೆ ಚುನಾವಣೆ ಮುಗಿದ ಬಳಿಕ ಕರ್ನಾಟಕ ಸರ್ಕಾರ ಹಲವು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ. ಆದರೆ ಈ ವರ್ಗಾವಣೆಗಳು ಕೇವಲ ಇಲಾಖೆಯ ವಲಯದಲ್ಲಿದೆ. ಜಿಲ್ಲಾಧಿಕಾರಿಗಳು, ಎಸ್‌ಪಿಗಳ ವರ್ಗಾವಣೆಗೆ ಸರ್ಕಾರ ಇನ್ನೂ ಸಹ ಮುಂದಾಗಿಲ್ಲ.












Click it and Unblock the Notifications