IAS Officers Transfer: ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಯಾರು ಎಲ್ಲಿಗೆ ತಿಳಿಯಿರಿ
IAS Officers Transfer: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ರೋಹಿಣಿ ಸಿಂಧೂರಿ ಸೇರಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊರಡಿಸಿದೆ. ಹಾಗಾದ್ರೆ, ಯಾರನ್ನು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಈ ಬಾರಿ ಇಲಾಖೆ ವ್ಯಾಪ್ತಿಯ ಇಬ್ಬರು ಹಿರಿಯ ಅಧಿಕಾರಗಳ ವರ್ಗಾವಣೆ ಮಾಡಲಾಗಿದೆ. ಆದರೆ, ಜಿಲ್ಲಾಧಿಕಾರಿಗಳ ಬದಲಾವಣೆ ಮಾಡಿಲ್ಲ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ (ಎಂಎಸ್‌ಎಂಇ ಮತ್ತು ಗಣಿ) ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಈ ಹಿಂದೆ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದ ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಸಲಾಗಿದೆ. ಅಲ್ಲದೆ, ದಿಲ್ಲಿ ಕರ್ನಾಟಕ ಭವನದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ಕೂಡ ವಹಿಸಲಾಗಿದೆ.
ಯಾರೆಲ್ಲಾ ಐಎಎಸ್ ಅಧಿಕಾರಿಗಳ ಎಲ್ಲಿಗೆ ವರ್ಗಾವಣೆ?
* ರೋಹಿಣಿ ಸಿಂಧೂರಿ: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಎಂಎಸ್‌ಎಂಇ ಮತ್ತು ಗಣಿ ವಿಭಾಗದ ಕಾರ್ಯದರ್ಶಿ.
* ಸಮೀರ್ ಶುಕ್ಲಾ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ, ದಿಲ್ಲಿಯಲ್ಲಿರುವ ಕರ್ನಾಟಕ ಭವನದ ಕಾರ್ಯದರ್ಶಿ (ಸಮನ್ವಯ) ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಕಳೆದ ಕೆಲಸ ದಿನಗಳ ಹಿಂದೆಯಷ್ಟೇ ದಿಢೀರ್ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸರ್ಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ ಅವರನ್ನು ಇಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜಾವಾಬ್ದಾರಿಯನ್ನು ವಹಿಸಲಾಗಿದೆ.
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಜಂಟಿ ಕಾರ್ಯದರ್ಶಿ ಗೋವಿಂದ ರೆಡ್ಡಿಯವನ್ನು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆಯ ಆಯುಕ್ತರನ್ನಾಗಿ ಹಾಗೂ ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಎಸ್.ಪೂವಿತಾ ಅವರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿತ್ತು.
ಯಾರು, ಎಲ್ಲಿಗೆ ವರ್ಗಾವಣೆ?
* ಮೋಹನ್ ರಾಜ್ ಕೆ.ಪಿ: ವ್ಯವಸ್ಥಾಪಕ ನಿರ್ದೇಶಕರು, ಕೃಷ್ಣಾ ಜಲ ಭಾಗ್ಯ ನಿಗಮ ಇವರಿಗೆ ಆಯುಕ್ತರು, ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ.
* ಶಿವನಗೌಡ ಪಾಟೀಲ್: ಆಯುಕ್ತರು, ಕೃಷಿ ಇಲಾಖೆ ಇವರಿಗೆ ತೋಟಗಾರಿಕೆ ಹಾಗೂ ರಾಷ್ಟ್ರೀಯ ತೋಟಗಾರಿಕಾ ಮಿಷನ್‌ನ ನಿರ್ದೇಶಕ.
* ಡಾ.ಗೋಪಾಲ ಕೃಷ್ಣ ಎಚ್.ಎನ್: ಆಯುಕ್ತರು, ಕಾರ್ಮಿಕ ಇಲಾಖೆ ಇವರಿಗೆ ಆಯುಕ್ತರು, ಇಎಸ್ಐಎಸ್ ಕಾರ್ಮಿಕ ಇಲಾಖೆ.
* ಡಾ.ರಾಜೇಂದ್ರ ಕೆ.ವಿ: ಆಯುಕ್ತರು, ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಇವರಿಗೆ ವ್ಯವಸ್ಥಾಪಕ ನಿರ್ದೇಶಕರು, ಪ್ರವಾಸೋದ್ಯ, ಅಭಿವೃದ್ಧಿ ನಿಗಮ.
* ಮುಲ್ಲೈ ಮುಗಿಲನ್: ಆಯುಕ್ತರು, ಮುದ್ರಾಂಕ ಮತ್ತು ನೋಂದಣಿ ಇಲಾಖೆ, ಇವರಿಗೆ ಕಂದಾಯ ಆಯುಕ್ತರು (ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಮತ್ತು ಸಾಮಾಜಿಕ ಭದ್ರತೆ)
* ವೆಂಕಟರಾಜ: ಜಿಲ್ಲಾಧಿಕಾರಿ ಕೊಡಗು, ಇವರಿಗೆ ಪ್ರಾದೇಶಿಕ ಆಯುಕ್ತರು ಮೈಸೂರು ವಲಯ.
* ನಳಿನ್ ಅತುಲ್: ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಇವರಿಗೆ ಹೆಚ್ಚುವರಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಕಲಬುರಗಿ.
* ಲೊಖಂಡೆ ಸ್ನೇಹಲ್ ಸುಧಾಕರ್: ಹೆಚ್ಚುವರಿ ಆಯುಕ್ತರು, ಬೆಂಗಳೂರು ಪೂರ್ವ ನಗರ ಪಾಲಿಕೆ ಇವರಿಗೆ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಕಾರ್ಖನೆ.
* ಭರತ್ ಎಸ್: ನಿರ್ದೇಶಕರು, ಪಿಯು ಶಿಕ್ಷಣ ಇಲಾಖೆ ಇವರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಹುದ್ದೆ.
* ರಾಹುಲ್ ಶರಣಪ್ಪ ಸಂಕನೂರು: ಹೆಚ್ಚುವರಿ ಆಯುಕ್ತರು, ಬೆಂಗಳೂರು ಕೇಂದ್ರ ನಗರ ಪಾಲಿಕೆ ಇವರಿಗೆ ಕೆಪಿಎಸ್‌ಸಿಯ ಪರೀಕ್ಷಾ ಜಂಟಿ ನಿರ್ದೇಶಕ ಹುದ್ದೆ.
* ದಲ್ಜೀತ್ ಕುಮಾರ್: ಉಪ ಕಾರ್ಯದರ್ಶಿ, ಐಟಿ-ಬಿಟಿ, ಇವರಿಗೆ ಪ್ರಭಾರವಾಗಿ ನಿರ್ದೇಶಕರು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications