IAS; ಐಎಎಸ್ ವರ್ಗಾವಣೆ, ಬಿಎಂಟಿಸಿಗೆ ಹೊಸ ನಿರ್ದೇಶಕಿ ನೇಮಕ

ಬೆಂಗಳೂರು, ಡಿಸೆಂಬರ್ 28; ಕರ್ನಾಟಕ ಸರ್ಕಾರ ಮತ್ತೆ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. 2024 ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸರ್ಕಾರ ಅಧಿಕಾರಿಗಳ ವರ್ಗಾವಣೆಯನ್ನು ಆರಂಭಿಸಿದೆ. ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ವರ್ಗಾವಣೆಗೆ ತಡೆ ಬೀಳಲಿದೆ.

ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬುಧವಾರ ಹುದ್ದೆಯ ನಿರೀಕ್ಷೆಯಲ್ಲಿದ್ದ 8 ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಿತ್ತು.

IAS Officers Transfer Shilpa M New Director For BMTC IT

ವರ್ಗಾವಣೆಯಾದ ಅಧಿಕಾರಿಗಳು

* ಲತಾ ಕುಮಾರಿ ಕೆ. ಎಸ್. (ಕೆಎನ್:2012). ಕಾರ್ಯದರ್ಶಿ ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರನ್ನು ಹೆಚ್ಚುವರಿಯಾಗಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪರೀಕ್ಷಾ ನಿಯಂತ್ರಕರಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ. ಗಿರೀಶ್ ದಿಲೀಪ್ ಬಾಡೋಲೆ ವರ್ಗಾವಣೆ ಮಾಡಲಾಗಿದೆ.

* ಶಿಲ್ಪ ಎಂ. (ಕೆಎನ್‌:2017) ಬೀದರ್ ಜಿಲ್ಲಾ ಪಂಚಾಯಿತಿಯ ಸಿಇಒ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ನಿರ್ದೇಶಕಿ (ಐಟಿ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ.

* ಡಾ. ಗಿರೀಶ್ ದಿಲೀಪ್ ಬಾಡೋಲೆ (ಕೆಎನ್: 2018). ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರು, ಬೆಂಗಳೂರು. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಬೀದರ್ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಶಿಲ್ಪ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ.

* ಮೋಹನ್‌ ರಾಜ್ ಕೆ. ಪಿ. (ಕೆಎನ್:2007). ಹುದ್ದೆಯ ನಿರೀಕ್ಷೆಯಲ್ಲಿದ್ದ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ವ್ಯವಸ್ಥಾಪಕ ನಿರ್ದೇಶಕರು ಕೃಷ್ಣ ಭಾಗ್ಯ ಜಲ ನಿಗಮ ಲಿ. ಬೆಂಗಳೂರು ಹುದ್ದೆಗೆ ನೇಮಕ ಮಾಡಲಾಗಿದೆ.

ಬುಧವಾರ ಕರ್ನಾಟಕ ಸರ್ಕಾರ 6 ಐಎಎಸ್ ಮತ್ತು 6 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಹಲವು ಉಪ ವಿಭಾಗಾಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶವನ್ನು ಹೊರಡಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+