ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿ ವಿಮಾನ ನಿಲ್ದಾಣ; ಕರ್ನಾಟಕ ಸರ್ಕಾರದ ಮಹತ್ವದ ತೀರ್ಮಾನ

|
Google Oneindia Kannada News

ಬಳ್ಳಾರಿ, ಸೆಪ್ಟೆಂಬರ್ 27; ಬಳ್ಳಾರಿ ಜಿಲ್ಲೆಯ ವಿಮಾನ ನಿಲ್ದಾಣದ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 2010ರಲ್ಲಿ ಆರಂಭಿಸಲಾದ ವಿಮಾನ ನಿಲ್ದಾಣದ ಪ್ರಸ್ತಾವಿತ ಯೋಜನೆ ಇನ್ನೂ ಸಹ ಜಾರಿಗೆ ಬಂದಿಲ್ಲ.

ಕರ್ನಾಟಕ ಸರ್ಕಾರ ವಿಮಾನ ನಿಲ್ದಾಣ ಯೋಜನೆಗೆ ಚುರುಕು ನೀಡಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ (ಐಡಿಡಿ) ಚೆನ್ನೈ ಮೂಲದ ಕಂಪನಿ ಜೊತೆಗಿನ ಒಪ್ಪಂದ ರದ್ದುಗೊಳಿಸಿ ತಾನೇ ಯೋಜನೆ ಕೈಗೆತ್ತಿಕೊಳ್ಳಲಿದೆ.

ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್‌ಪ್ರೆಸ್‌ ಹೆದ್ದಾರಿ ನಿರ್ಮಾಣ; ಬಸವರಾಜ ಬೊಮ್ಮಾಯಿ ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್‌ಪ್ರೆಸ್‌ ಹೆದ್ದಾರಿ ನಿರ್ಮಾಣ; ಬಸವರಾಜ ಬೊಮ್ಮಾಯಿ

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಚೆನ್ನೈ ಮೂಲದ 'ಮಾರ್ಗ್‌' ಮಾಡಿಕೊಂಡ ಒಪ್ಪಂದದ ಬಳಿಕವೂ ನಿರೀಕ್ಷಿತ ಮಟ್ಟದಲ್ಲಿ ಕೆಲಸಗಳು ನಡೆಯುತ್ತಿಲ್ಲ. ಆದ್ದರಿಂದ ಒಪ್ಪಂದ ರದ್ದುಗೊಳಿಸುವುದು ಅನಿವಾರ್ಯವಾಗಿದೆ.

ದಾವಣಗೆರೆ ಏರ್‌ಪೋರ್ಟ್‌ ಬೇಡಿಕೆಗೆ ಮನ್ನಣೆ, ಅಧಿಕಾರಿಗಳ ಭೇಟಿದಾವಣಗೆರೆ ಏರ್‌ಪೋರ್ಟ್‌ ಬೇಡಿಕೆಗೆ ಮನ್ನಣೆ, ಅಧಿಕಾರಿಗಳ ಭೇಟಿ

IDD Has Decided To Take Up Ballari Airport Project

ಬಳ್ಳಾರಿ ವಿಮಾನ ನಿಲ್ದಾಣ; ರೈತರ ವಿರೋಧ, ಪ್ರತಿಭಟನೆಗಳ ನಡುವೆಯೂ ಸರ್ಕಾರ ಬಳ್ಳಾರಿ ಸಮೀಪದ ಚಾಗನೂರು ಗ್ರಾಮದ ಬಳಿ 987 ಎಕರೆ ಭೂಮಿಯಲ್ಲಿ 330 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ತೀರ್ಮಾನಿಸಿತ್ತು. ಇದಕ್ಕಾಗಿ ಭೂಮಿ ಸ್ವಾಧೀನಪಡಿಸಿಕೊಂಡು 2010ರಲ್ಲಿಯೇ ಚೆನ್ನೈ ಮೂಲದ 'ಮಾರ್ಗ್' ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿತ್ತು.

ನಿರ್ಮಾಣ, ನಿರ್ವಹಣೆ ಮತ್ತು ವರ್ಗಾವಣೆ ಆಧಾರದಲ್ಲಿ 30 ವರ್ಷಗಳ ಅವಧಿಗೆ ಪಿಪಿಪಿ ಮಾದರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಒಪ್ಪಂದದಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ವಿಮಾನ ನಿಲ್ದಾಣ ನಿರ್ಮಾಣ ಪ್ರಗತಿ ಬಗ್ಗೆ ಕರ್ನಾಟಕ ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ ನಿಗಮ (ಕೆಎಸ್ಐಡಿಸಿ) ಅತೃಪ್ತಿ ವ್ಯಕ್ತಪಡಿಸಿತ್ತು.

ಕೊಪ್ಪಳ ವಿಮಾನ ನಿಲ್ದಾಣ; ಸ್ಥಳ ಪರಿಶೀಲಿಸಿ ವರದಿ ತಯಾರಿಕೆಗೆ ಸೂಚನೆಕೊಪ್ಪಳ ವಿಮಾನ ನಿಲ್ದಾಣ; ಸ್ಥಳ ಪರಿಶೀಲಿಸಿ ವರದಿ ತಯಾರಿಕೆಗೆ ಸೂಚನೆ

ಸಚಿವರ ಸಭೆ; ಕಳೆದ ವಾರ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಳ್ಳಾರಿ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ನಡೆದಿದೆ.

IDD Has Decided To Take Up Ballari Airport Project

ಯೋಜನೆ ನಿರೀಕ್ಷಿತ ಯಶಸ್ಸು ಕಾಣದ ಹಿನ್ನಲೆಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ (ಐಡಿಡಿ) ಚೆನ್ನೈ ಮೂಲದ ಕಂಪನಿ ಜೊತೆಗಿನ ಒಪ್ಪಂದ ರದ್ದುಗೊಳಿಸಿ ತಾನೇ ಯೋಜನೆ ಕೈಗೆತ್ತಿಕೊಳ್ಳಲಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಅಂತಿಮ ಒಪ್ಪಿಗೆ ಪಡೆಯಲು ಸಹ ತೀರ್ಮಾನಿಸಲಾಗಿದೆ.

ಬಳ್ಳಾರಿಗೆ ವಿಮಾನ ನಿಲ್ದಾಣ ಬೇಕು ಎಂಬ ಬೇಡಿಕೆ ಹೆಚ್ಚಾಗಿದೆ. ವಿಜಯನಗರ ಜಿಲ್ಲೆಯ ತೋರಣಗಲ್ಲುವಿನಲ್ಲಿ ಜಿಂದಾಲ್‌ನ ಖಾಸಗಿ ವಿಮಾನ ನಿಲ್ದಾಣವಿದೆ. ಸದ್ಯ ಇದರ ಮೂಲಕ ವಿಮಾನದಲ್ಲಿ ಬಳ್ಳಾರಿ ತಲುಪಬಹುದು. ಆದರೆ ನಾಗರಿಕ ವಿಮಾನಯಾನ ಸೇವೆ ವಿಮಾನ ನಿಲ್ದಾಣ ಮುಕ್ತವಾಗಿಲ್ಲ.

12 ವರ್ಷಗಳ ಬಳಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚೆನ್ನೈ ಮೂಲದ ಕಂಪನಿ ಜೊತೆ ಮಾಡಿಕೊಂಡಿರುವ ಒಪ್ಪಂದ ರದ್ದುಪಡಿಸಲು ಹಸಿರು ನಿಶಾನೆ ತೋರಿದೆ. ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದಲೇ ವಿಮಾನ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಳ್ಳಲಿದೆ.

ವಿಮಾನ ನಿಲ್ದಾಣ ಕಾರ್ಯ ಪ್ರಗತಿಯಲ್ಲಿದೆ; 2010ರಲ್ಲಿ ಸರ್ಕಾರದ ಜೊತೆ ಚೆನ್ನೈ ಮೂಲದ 'ಮಾರ್ಗ್‌' ಕಂಪನಿ ಒಪ್ಪಂದ ಮಾಡಿಕೊಂಡಿತು. ಆದರೆ 'ಮಾರ್ಗ್‌ ಶ್ರೀ ಕೃಷ್ಣದೇವರಾಯ ವಿಮಾನ ನಿಲ್ದಾಣ ಕೆಲಸ ಪ್ರಗತಿಯಲ್ಲಿದೆ' ಎಂದು ಬೋರ್ಡ್‌ ಮಾತ್ರ ಹಾಕಿದ ಕಂಪನಿ ಅಕ್ಕಪಕ್ಕದ ಜಮೀನುಗಳ ರೈತರ ಜೊತೆ ಕಿರಿಕ್ ಮಾಡಿಕೊಂಡಿತು.

ಚಾಗನೂರು-ಸಿರವಾರ ಬಳಿ ಕೃಷಿ ಭೂಮಿ ಅಧಿಕವಾಗಿದೆ. ಅಲ್ಲಿ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣ ಬೇಡ ಎಂದು ರೈತರು ವಿರೋಧ ವ್ಯಕ್ತಪಡಿಸಿದರು. ಆಗ ಬಿಜೆಪಿ ಸರ್ಕಾರ ಕಾಮಗಾರಿಗೆ ತಾತ್ಕಾಲಿಕ ತಡೆ ನೀಡಿತ್ತು. ಬಳಿಕ ನಿರ್ಮಾಣ ಕಾಮಗಾರಿ ಆರಂಭವಾಗಲೇ ಇಲ್ಲ.

ಬಳ್ಳಾರಿ ವಿಮಾನ ನಿಲ್ದಾಣ ಆಗ ಸಚಿವರಾಗಿದ್ದ ಜನಾರ್ದನ ರೆಡ್ಡಿ ಕನಸು. ಆದರೆ ಕೆಲವು ರೈತರು ವಿಮಾನ ನಿಲ್ದಾಣ ವಿರೋಧಿಸಿ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠದ ಮೊರೆ ಸಹ ಹೋಗಿದ್ದರು.

English summary
Finally Ballari airport project may get kick start. The infrastructure Development Department (IDD) has decided to cancel its deal with Marg Ltd and take construction of a greenfield airport it's own.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X