ದಲಿತರನ್ನು ಉಪಮುಖ್ಯಮಂತ್ರಿ ಮಾಡದಿದ್ದರೆ ಕಾಂಗ್ರೆಸ್‌ಗೆ ಸಂಕಷ್ಟ: ಜಿ ಪರಮೇಶ್ವರ್ ಎಚ್ಚರಿಕೆ
ಬೆಂಗಳೂರು, ಮೇ.19: ಸಿಎಂ ಸ್ಥಾನದ ನಂತರ ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಜಿ ಪರಮೇಶ್ವರ, ದಲಿತರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡದಿದ್ದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಿ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಪಕ್ಷದ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 71 ವರ್ಷದ ದಲಿತಸಮುದಾಯದ ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿದ್ದರು. ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ ಎಂಟು ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ ಮತ್ತು ಡಿ ಕೆ ಶಿವಕುಮಾರ್ ಅವರ ಏಕೈಕ ಉಪಮುಖ್ಯಮಂತ್ರಿ ಎಂದು ಕಾಂಗ್ರೆಸ್ ಘೋಷಿಸಿದ ಕೆಲವೇ ಗಂಟೆಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

ಶಿವಕುಮಾರ್ ಅವರೊಬ್ಬರೇ ಡಿಸಿಎಂ ಆಗಬೇಕು ಎಂದು ನಾಯಕತ್ವಕ್ಕೆ ಷರತ್ತು ವಿಧಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಪರಮೇಶ್ವರ ಅವರು, ಶಿವಕುಮಾರ್ ಅವರ ದೃಷ್ಟಿಯಲ್ಲಿ ಅವರು ಹೇಳಿದ್ದು ಸರಿಯಾಗಬಹುದು, ಆದರೆ ಹೈಕಮಾಂಡ್ ದೃಷ್ಟಿಕೋನ ಬೇರೆಯಾಗಿರಬೇಕು. ಹೈಕಮಾಂಡ್ ಈ ಬಗ್ಗೆ ನಿರ್ಧರಿಸಬೇಕು. ವಿಶೇಷವಾಗಿ ದಲಿತ ಸಮುದಾಯವು ಈ ಬಗ್ಗೆ ಭಾರಿ ನಿರೀಕ್ಷೆಯನ್ನು ಹೊಂದಿದೆ ಎಂದಿದ್ದಾರೆ.
"ದಲಿತ ಸಮುದಾಯದ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು, ನಮ್ಮ ನಾಯಕತ್ವವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಅದು ನಡೆಯದಿದ್ದರೇ, ಸ್ವಾಭಾವಿಕವಾಗಿ ಅದಕ್ಕೆ ಪ್ರತಿಕ್ರಿಯೆಗಳು ಇರುತ್ತವೆ. ಅದನ್ನು ನಾನು ಹೇಳುವ ಅವಶ್ಯಕತೆ ಇಲ್ಲ. ನಂತರ ಅದನ್ನು ಸರಿಮಾಡುವ ಬದಲು ಈಗಲೇ ಸರಿಪಡಿಸಿಕೊಂಡರೆ ಒಳಿತು. ಇಲ್ಲವಾದರೆ ಪಕ್ಷಕ್ಕೆ ತೊಂದರೆಯಾಗಬಹುದು. ಅದನ್ನು ಅರ್ಥ ಮಾಡಿಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ "ಎಂದು ಜಿ ಪರಮೇಶ್ವರ ಹೇಳಿದ್ದಾರೆ.

"ನಾನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೆ. ಆದರೆ ಈಗ ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು, ಆದ್ದರಿಂದ ಮುಂದಿನ ದಿನಗಳಲ್ಲಿ ಅವರು ಏನು ಮಾಡುತ್ತಾರೆ ಎಂಬುದನ್ನು ನೋಡೋಣ. ಸದ್ಯಕ್ಕೆ ಇಬ್ಬರ ಬಗ್ಗೆ ಘೋಷಣೆ ಮಾಡಿದ್ದು, ಸಚಿವ ಸಂಪುಟ ವಿಸ್ತರಣೆ ವೇಳೆ ಯಾವ ರೀತಿ ನ್ಯಾಯ ಕೊಡಿಸುತ್ತಾರೋ ಕಾದು ನೋಡಬೇಕಿದೆ" ಎಂದಿದ್ದಾರೆ.
''ಹೈಕಮಾಂಡ್ ಸಿಎಂ ಮತ್ತು ಡಿಸಿಎಂ ಘೋಷಣೆ ಮಾಡಿದೆ. ಸಿದ್ದರಾಮಯ್ಯ ಅವರು ನಮ್ಮ ಪಕ್ಷದಿಂದ ಎರಡನೇ ಬಾರಿಗೆ ಸಿಎಂ ಆಗುತ್ತಿದ್ದಾರೆ, ಅವರು ಉತ್ತಮ ಆಡಳಿತ ನೀಡುತ್ತಾರೆ ಎಂಬ ನಿರೀಕ್ಷೆ ನಮ್ಮದು. ನಮ್ಮ ಪ್ರಣಾಳಿಕೆಯಲ್ಲಿ ಉತ್ತಮ ಆಡಳಿತದ ಭರವಸೆ ಇರುವುದರಿಂದ ನಮ್ಮ ಮೇಲೆ ಜನರ ನಿರೀಕ್ಷೆ ದೊಡ್ಡದಿದೆ. ನಾನು ನಿರ್ಧಾರವನ್ನು ಸ್ವಾಗತಿಸುತ್ತೇನೆ. ಉತ್ತಮ ಆಡಳಿತ ನೀಡುವಲ್ಲಿ ಅವರು ನಮ್ಮೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ ಎಂದು ನಿರೀಕ್ಷಿಸುತ್ತೇನೆ" ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆಯನ್ನು ಪ್ರತಿನಿಧಿಸುವ ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ 2013ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆಗ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಅವರು ಸೋತಿದ್ದರಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ (2013-2018) ಎಂಎಲ್‌ಸಿ ಮತ್ತು ಸಚಿವರಾದರು.
ಡಿಸಿಎಂ ಹುದ್ದೆ ಕೇಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, "ಕೇಳಲು ಏನಿದೆ? ಅವರು ಕೊಡಬೇಕು. ನಾನು ಮೊದಲು ಡಿಸಿಎಂ ಆಗಿದ್ದರಿಂದ ಅವರು ಕೊಡುತ್ತಾರೆ ಎಂದು ನಿರೀಕ್ಷಿಸುತ್ತೇನೆ. ನೋಡೋಣ.'' ತಾನೊಬ್ಬನೇ ಡಿಸಿಎಂ ಆಗಬೇಕು ಎಂಬ ಶಿವಕುಮಾರ್ ಬೇಡಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ''ಒಬ್ಬರೇ ಅಧಿಕಾರದಲ್ಲಿರಬೇಕು. ಇತರರು ಇರಬಾರದು ಎಂಬುದು ಸರಿಯಾದ ನಿಲುವು ಅಲ್ಲ. ಪಕ್ಷ ಅಧಿಕಾರಕ್ಕೆ ಬರಲು ಎಲ್ಲರೂ ಕೊಡುಗೆ ನೀಡಿದ್ದಾರೆ. ಎಲ್ಲಾ ಸಮುದಾಯಗಳು ಕೊಡುಗೆ ನೀಡಿವೆ. ಸಹಜವಾಗಿ, ಅವರಿಗೆ ನ್ಯಾಯವನ್ನು ನೀಡಬೇಕು. ದಲಿತರು, ಲಿಂಗಾಯತರು ಮತ್ತು ಅಲ್ಪಸಂಖ್ಯಾತರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಬಲವಾಗಿ ನಿಂತಿದ್ದಾರೆ" ಎಂದಿದ್ದಾರೆ.
224 ಸದಸ್ಯ ಬಲದ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಪ್ರಬಲ ಗೆಲುವು ಸಾಧಿಸಿದರೆ, ಆಡಳಿತಾರೂಢ ಬಿಜೆಪಿ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಜಾತ್ಯತೀತ ಜನತಾ ದಳ ಕ್ರಮವಾಗಿ 66 ಮತ್ತು 19 ಸ್ಥಾನಗಳನ್ನು ಗಳಿಸಿವೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ












Click it and Unblock the Notifications