ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಾಕತ್ತಿದ್ದರೆ ಗೋಮಾಂಸ ರಫ್ತು ನಿಷೇಧಿಸಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು

|
Google Oneindia Kannada News

ಬೆಂಗಳೂರು, ಡಿಸೆಂಬರ್ 29: ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ವಿರೋಧಪಕ್ಷಗಳು ಮತ್ತು ವಿವಿಧ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಸೋಮವಾರ ರಾಜ್ಯ ಸಚಿವ ಸಂಪುಟ ಈ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಿದೆ. ವಿಧಾನಸಭೆಯಲ್ಲಿ ಮಸೂದೆಯ ಬಗ್ಗೆ ಚರ್ಚೆ ನಡೆಸದೆಯೇ ಸುಗ್ರೀವಾಜ್ಞೆ ಮೂಲಕ ಅದನ್ನು ಅನುಷ್ಠಾನಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ವಿಧಾನಪರಿಷತ್‌ನಲ್ಲಿ ಬೆಂಬಲ ಸಿಗದ ಕಾರಣ ಅದನ್ನು ಕಳೆದ ಅಧಿವೇಶನದಲ್ಲಿ ಮಂಡಿಸಿರಲಿಲ್ಲ. ಸುಗ್ರೀವಾಜ್ಞೆ ಮೂಲಕ ಅದನ್ನು ಅಂಗೀಕರಿಸಿರುವ ರಾಜ್ಯ ಸಚಿವ ಸಂಪುಟ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲು ತೀರ್ಮಾನಿಸಿತ್ತು.

ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅಸ್ತು!ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅಸ್ತು!

ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಬಿಜೆಪಿ

ನಾಯಕರಿಗೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮುಂದೆ ಓದಿ.

ಕರ್ನಾಟಕದ ಗೋಹತ್ಯೆ ನಿಷೇಧ ಮಸೂದೆಗೆ ಗೋವಾದ ವಿರೋಧ!ಕರ್ನಾಟಕದ ಗೋಹತ್ಯೆ ನಿಷೇಧ ಮಸೂದೆಗೆ ಗೋವಾದ ವಿರೋಧ!

ಕಾಯ್ದೆ ಹಿಂದೆ ಎರಡು ದುರುದ್ದೇಶಗಳಷ್ಟೇ

ಕಾಯ್ದೆ ಹಿಂದೆ ಎರಡು ದುರುದ್ದೇಶಗಳಷ್ಟೇ

ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ಟೀಕಿಸಿದ್ದಾರೆ.

ಗೋಮಾಂಸ ಆಮದು ಮಾಡುತ್ತೀರಾ?ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ? ಎಂದು ಪ್ರಶ್ನಿಸಿದ್ದಾರೆ.

ಗೋಮಾಂಸ ಆಮದು ಮಾಡುತ್ತೀರಾ?ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ? ಎಂದು ಪ್ರಶ್ನಿಸಿದ್ದಾರೆ.

ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ? ಎಂದು ಪ್ರಶ್ನಿಸಿದ್ದಾರೆ.

ಬೀದಿಪಾಲಾಗಲಿವೆ ಕುಟುಂಬಗಳು

ಬೀದಿಪಾಲಾಗಲಿವೆ ಕುಟುಂಬಗಳು

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು ಮಾತ್ರ ಅಲ್ಲ, ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮದ ಕೊರತೆ ಎದುರಾಗಲಿದ್ದು, ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಲಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತಾಕತ್ತಿದ್ದರೆ ರಫ್ತು ನಿಷೇಧಿಸಿ

ತಾಕತ್ತಿದ್ದರೆ ರಫ್ತು ನಿಷೇಧಿಸಿ

ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವವರು ಕನಿಷ್ಠ ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ನಿಮಗೆ ತಾಕತ್ತಿದ್ದರೆ ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ. ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಎಂದು ಸವಾಲು ಹಾಕಿದ್ದಾರೆ.

English summary
Congress leader Siddaramaiah challenges BJP to bring anti cow slaughter laws in Gao and North Eastern states also, and ban on exports.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X