ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ನೋಟಿಸ್ ಕ್ರಮ: ಯತ್ನಾಳ್ ಬೆನ್ನಿಗೆ ನಿಲ್ಲುವುದಾಗಿ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಜನವರಿ 18: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಬೇಡಿಕೆಯ ಹೋರಾಟ ಮುನ್ನಡೆಸಿದ್ದ ಹಾಗೂ ಬಿಜೆಪಿ ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಬಿಜೆಪಿ ಶೋಕಾಸ್ ನೋಟಿಸ್ ನೀಡಲು ಯತ್ನಿಸಿದೆ. ಇದು ನಿಜವೇ ಆದಲ್ಲಿ ಸರ್ಕಾರ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗುತ್ತದೆ. ನಾವೆಲ್ಲರು ಅವರ ಪರ ಪ್ರತಿಭಟನೆಗೆ ಇಳಿಯಲಿದ್ದೇವೆ ಎಂದು ಕೂಡಲಸಂಗಮ ಪೀಠದ ಮಠಾಧೀಶ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ನಾಯಕರು ಶೂಕಾಸ್ ನೋಟಿಸ್ ನೀಡಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ದೆಹಲಿಗೆ ಶಾಸಕರನ್ನು ಕರೆಸಿ ಯತ್ನಾಳ್ ಅವರಿಗೆ ವಿವರಣೆ ನೀಡುವ ಬಗ್ಗೆ ವರದಿ ಆಗಿದೆ. ಆದರೆ ಇದನ್ನು ತಳ್ಳಿಹಾಕಿರುವ ಜಯಮೃತ್ಯಂಜಯ ಸ್ವಾಮೀಜಿ, ಮುರಗೇಶ್ ನಿರಾಣಿ ಅವರು ಪಂಚಮಸಾಲಿ ಸಮುದಾಯದವರೆ ಎಂದು ತಿಳಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೊಂದಿಗೆ ಪಂಚಮಸಾಲಿ ಸಮಾಜಕ್ಕೆ 2ಎ ವರ್ಗದ ಮೀಸಲಾತಿ ನೀಡುವಂತೆ ಆಗ್ರಹಿಸಿ ಸ್ವಾಮೀಜಿಗಳು ಪಂಚಮಸಾಲಿ ಲಿಂಗಾಯತ ಚಳವಳಿಯ ನೇತೃತ್ವ ವಹಿಸುತ್ತಿದ್ದರು. ಬಿಜೆಪಿ ದಂಡ ವಿಧಿಸಿದರೆ ಪಂಚಮಸಾಲಿಗಳು ಯತ್ನಾಳ್ ಅವರ ಬೆನ್ನಿಗೆ ನಿಲ್ಲುತ್ತಾರೆ. ಇದರಿಂದ ರಾಜ್ಯ ಬಿಜೆಪಿಯು ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಪುನರುಚ್ಚರಿಸಿದರು.

If BJP Issue Notice To MLA Yatnal Will Face Huge Protest By Panchamasali Community

ಯತ್ನಾಳ್‌ಗೆ ನೋಟಿಸ್ ಜಾರಿ: ತಳ್ಳಿಹಾಕಿದ ಸ್ವಾಮೀಜಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೇರಿದಂತೆ ಬಿಜೆಪಿಯ ಉನ್ನತ ಪದಾಧಿಕಾರಿಗಳು ಯತ್ನಾಳ್ ಅವರು ಏನೆಂಬುದು ಚೆನ್ನಾಗಿ ತಿಳಿದಿದೆ. ಶಾಸಕರ ಹೇಳಿಕೆಗಳು ಪಕ್ಷದ ವಿರುದ್ಧವಾಗಿ ಅಲ್ಲ ಎಂಬುದು ಗೊತ್ತಿಲ್ಲ ಕಾರಣ ಬಿಜೆಪಿಯಿಂದ ಶಾಸಕ ಯತ್ನಾಳ್ ಅವರಿಗೆ ಯಾವುದೇ ನೋಟಿಸ್ ಬಂದಿಲ್ಲ ಎನ್ನಲಾಗಿದೆ.

If BJP Issue Notice To MLA Yatnal Will Face Huge Protest By Panchamasali Community

ಇಬ್ಬರು ವ್ಯಕ್ತಿಗಳ ನಡುವೆ ಮಾತಿನ ಸಮರ ನಡೆಯುತ್ತಿದ್ದರೂ ಅದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗುವುದಿಲ್ಲ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನೋಟಿಸ್ ಜಾರಿ ಮಾಡಿರುವ ಬಗ್ಗೆ ವದಂತಿ ಹಬ್ಬಿಸುತ್ತಿವೆ. ಒಂದು ವೇಳೆ ನೋಟಿಸ್‌ನ ಕ್ರಮ ನಿಜವೇ ಆದರೆ, ಆ ನಿಟ್ಟಿನಲ್ಲಿ ಸರ್ಕಾರ ಕ್ರಮ ಮುಂದಾದರೆ ಇಡಿ ಪಂಚಮಸಾಲಿ ಸಮುದಾಯವೇ ಯತ್ನಾಳ್ ಅವರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಹೇಳಿದರು.

English summary
if BJP issue notice to MLA Basanagouda Patil Yatnal will face huge protest by Panchamasali Community, warning by Jayamruthyunjaya swamiji.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X