Karnataka Election 2023: ಮುಂದಿನ ಚುನಾವಣೆಯಲ್ಲಿ BJP ಗೆದ್ದರೆ Veerashaiva ಲಿಂಗಾಯತರೇ ಸಿಎಂ: ಬಾಲಚಂದ್ರ ಜಾರಕಿಹೊಳಿ
ಬಿಜೆಪಿ ಗೆದ್ದರೆ ವೀರಶೈವ ಲಿಂಗಾಯತರೇ ಸಿಎಂ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಬೆಳಗಾವಿ, ಮಾರ್ಚ್ 18: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಇತ್ತ ಸಿ.ಟಿ. ರವಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವೀರಶೈವ ಲಿಂಗಾಯತ ಸಮುದಾಯ ಸಿ ಟಿ ರವಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಅಗುತ್ತಿವೆ.
ಇನ್ನೂ ಈ ಬಾರೀ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಸದ್ಯಕ್ಕೆ ಬಿಜೆಪಿ ಪಾಳಯದಲ್ಲಿ ಚರ್ಚೆಯಾಗಿಲ್ಲ. ಆದರೆ, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದಾರೆ.

ಬೆಳಗಾವಿಯ ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ನಡೆದ ಅರಭಾವಿ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ವಿಧಾನ
ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಂದಾಗಿ ಒಗ್ಗಟ್ಟಿನಿಂದ ಮತಗಳು ಬೇರೆ ಪಕ್ಷಗಳಿಗೆ ಹೋಗದಂತೆ ನೋಡಿಕೊಂಡು ಬಿಜೆಪಿಗೆ ಮತ ನೀಡಿದರೇ ನಿಮ್ಮ ಸಮುದಾಯದವರೊಬ್ಬರು ಮುಖ್ಯಮಂತ್ರಿಯಾಗುವ ಅವಕಾಶವು ಮತ್ತೊಮ್ಮೆ ಕೂಡಿ ಬರಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ವೀರಶೈವ ಲಿಂಗಾಯದವರೇ ಅಧಿಕ ಪ್ರಮಾಣದಲ್ಲಿದ್ದಾರೆ. ಇನ್ನೂ ಎರಡನೇ ಸ್ಥಾನವನ್ನ ಒಕ್ಕಲಿಗರು, ಮೂರನೇ ಸ್ಥಾನದಲ್ಲಿ ಕುರುಬ ಸಮುದಾಯವರಿದ್ದಾರೆ. ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದವರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು ಕೇವಲ ಬಿಜೆಪಿ ಮಾತ್ರ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಈ ಸಮುದಾಯಕ್ಕೆ ಸೇರಿರುವ ಯಾರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ. ಆದ್ದರಿಂದ ಏಪ್ರಿಲ್-ಮೇ ತಿಂಗಳನಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಿದರೇ ಮತ್ತೆ 5 ವರ್ಷಗಳ ಕಾಲ ನಮ್ಮ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂದು ಹೇಳಿದರು.

ಇನ್ನೂ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಯನ್ನು ಕಲ್ಪಿಸಿಕೊಡುವಂತೆ ಈಗಾಗಲೇ ಪಕ್ಷಾತೀತವಾಗಿ ಹೋರಾಟಗಳು ನಡೆಯುತ್ತಿವೆ. ಈ ಹೋರಾಟಕ್ಕೆ ನಾವು ಕೂಡಾ ಬೆಂಬಲ ನೀಡಿದ್ದೇವೆ. ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿಯನ್ನು ನೀಡುವಂತೆಯೂ ನಾನು ಕೂಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಾರೊಂದಿಗೆ ಸಾಕಷ್ಟು ಬಾರಿ ಭೇಟಿಯಾಗಿ ಮನವಿ ಮಾಡಿಕೊಂಡಿದ್ದೇನೆ.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಟ್ಟರೇ ಅದು ಬಿಜೆಪಿಯವರೇ ಕೊಡಬೇಕು. ಮುಂದಿನ ದಿನದಲ್ಲೂ ಮೀಸಲಾತಿ ಹೋರಾಟದಲ್ಲಿ ಸಕ್ರೀಯವಾಗಿ ಭಾಗಿಯಾಗುತ್ತೇನೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಸಮಾಜದ ಸ್ವಾಮಿಜಿಗಳೊಂದಿಗೆ ಹೋರಾಟಕ್ಕೂ ಸಿದ್ಧನಿದ್ದೇನೆ. ಸಮಾಜದ ಸ್ವಾಮಿಜಿಗಳು ಹಾಗೂ ಮುಖಂಡರ ನಿಯೋಗದೊಂದಿಗೆ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಚುನಾವಣೆ ನೀತಿ ಸಂಹಿತೆ ಒಳಗಾಗಿ ಭೇಟಿ ಮಾಡಿ ಅವರಲ್ಲಿ ಒತ್ತಡ ಹೇರುವ ಕೆಲಸವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇನ್ನೂ 2004ರಲ್ಲಿ ನಾನು ಶಾಸಕನಾಗಲು ನನ್ನ ಜೊತೆ ಸಾಕಷ್ಟು ಜನ ಕೈಜೋಡಿಸಿದ್ದಾರೆ, ಕಷ್ಟ ಕಾಲದಲ್ಲಿ ನಿಂತಿದ್ದಾರೆ. ಇದರ ನಡುವೆ ಕಾರಣಾಂತರಗಳಿಂದ ಈಗ ಕೆಲವರು ನನ್ನನ್ನು ಬಿಟ್ಟು ಬೇರೆ ಕಡೆ ಹೋಗಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ತೆಗಳುವದಿಲ್ಲ. ದೇವರು ಅಂತವರಿಗೆ ಒಳ್ಳೆಯದನ್ನು ಮಾಡಲಿ ಎಂದು ರಾಜಕೀಯ ವಿರೋಧಿಗಳ ಕುರಿತು ಮಾತನಾಡಿದರು.
ಈ ವೇಳೆ ಸಮಾವೇಶದ ಸಾನ್ನಿಧ್ಯವನ್ನು ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳು, ಗೋಕಾಕದ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು, ಹುಣಶ್ಯಾಳ ಪಿ.ಜಿ.ಯ ನಿಜಗುಣ ದೇವರು, ಭಾಗೋಜಿಕೊಪ್ಪದ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು ವಹಿಸಿದ್ದರು. ಅಧ್ಯಕ್ಷತೆಯನ್ನು ಘಟಪ್ರಭಾ ಜೆಜಿಕೋ ಆಸ್ಪತ್ರೆಯ ಅಧ್ಯಕ್ಷ ಬಿ.ಆರ್.ಪಾಟೀಲ ವಹಿಸಿದ್ದರು












Click it and Unblock the Notifications