ವಿಡಿಯೋ; ನಾಯಕತ್ವ ಬದಲಾವಣೆ ಕುರಿತು ಬಿಎಸ್‌ವೈ ಮಾತು

ಬೆಂಗಳೂರು, ಜೂನ್ 06; ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಇನ್ನೂ ನಡೆಯುತ್ತಿವೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇದೇ ಮೊದಲ ಬಾರಿಗೆ ಈ ಕುರಿತು ಮಾತನಾಡಿದ್ದಾರೆ.

Recommended Video

      High Command ಹೇಳಿದ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ | BS Yadiyurappa | Oneindia Kannada

      ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, "ಎಲ್ಲಿಯವರೆಗೆ ಹೈಕಮಾಂಡ್‌ಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ನಾನು ಮುಂದುವರೆಯುತ್ತೇನೆ" ಎಂದು ಸ್ಪಷ್ಟಪಡಿಸಿದರು.

      "ಯಾವ ದಿನ ಯಡಿಯೂರಪ್ಪನವರೇ ನೀವು ಬೇಡ ಅಂತಾರೊ ಆ ದಿನ ನಾನು ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ" ಎಂದು ಯಡಿಯೂರಪ್ಪ ಹೇಳಿದರು.

       If High Command Directs I Will Submit Resignation Says Yediyurappa

      "ನಾನು ಯಾವುದೇ ಗೊಂದಲದಲ್ಲಿ ಇಲ್ಲ. ಹೈಕಮಾಂಡ್ ನಾಯಕರು ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅದನ್ನು ಶಕ್ತಮೀರಿ ಸದುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಉಳಿದಿದ್ದು ಹೈಕಮಾಂಡ್‌ಗೆ ಬಿಟ್ಟ ವಿಚಾರ" ಎಂದರು.

      ವಯೋಸಹಜ ಕಾರಣದಿಂದಾಗಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಸುದ್ದಿ ಕಳೆದ ವಾರ ಹಬ್ಬಿತ್ತು. ಕೆಲವು ಶಾಸಕರು, ಸಚಿವರು ದೆಹಲಿಗೆ ತೆರಳಿ ಈ ಕುರಿತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ ಎಂಬ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು.

      ರಾಜ್ಯ ಬಿಜೆಪಿ ಉಪಾಧ್ಯಕ್ಷ, ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಸಹ ದೆಹಲಿಗೆ ತೆರಳಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದ್ದರು.

      ನಾಯಕತ್ವ ಬದಲಾವಣೆ ಇಲ್ಲ. ಯಡಿಯೂರಪ್ಪ ನಮ್ಮ ನಾಯಕರಾಗಿ ಮುಂದುವರೆಯಲಿದ್ದಾರೆ ಎಂದು ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹಲವು ಸಚಿವರು, ಶಾಸಕರು ಸ್ಪಷ್ಟಪಡಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+