Bhavani Revanna Hassan Ticket Missed: ಜೆಡಿಎಸ್ ಅಧಿಕಾರಕ್ಕೆ ಬಂದರೆ ಉನ್ನತ ಸ್ಥಾನ: ಕುಮಾರಸ್ವಾಮಿ ಕೊಟ್ಟ ಭರವಸೆ ಏನು?
ಬೆಂಗಳೂರು,ಏಪ್ರಿಲ್15: ರಾಜ್ಯ ರಾಜಕಾರಣದಲ್ಲಿ ಎರಡು ತಿಂಗಳ ಕಾಲ ಸಾಕಷ್ಟು ಸದ್ದು ಮಾಡಿದ ಕ್ಷೇತ್ರ ಅಂದ್ರೆ ಅದು ಹಾಸನ ವಿಧಾನಸಭಾ ಕ್ಷೇತ್ರ. ಹಾಸನ ಕ್ಷೇತ್ರದ ಟಿಕೆಟ್ ಗಾಗಿ ಭವಾನಿ ರೇವಣ್ಣ ಹಾಗೂ ಸ್ವರೂಪ್ ಪ್ರಕಾಶ್ ಲಾಭಿ ನಡೆಸಿದ್ದು, ಕೊನೆಗೂ ಅಂತಿಮವಾಗಿ ಕ್ಷೇತ್ರದ ಸಮಸ್ಯೆ ಬಗೆಹರಿದಿದೆ.
ಹೌದು, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡು ಸಭೆ ನಡೆಸಿ ಅಂತಿಮವಾಗಿ ಸ್ವರೂಪ್ ಪ್ರಕಾಶ್ ಗೆ ಟಿಕೆಟ್ ನೀಡಿದ್ದಾರೆ. ಶುಕ್ರವಾರ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸುವ ಮೂಲಕ ಜೆಡಿಎಸ್ ಎರಡನೇ ಪಟ್ಟಿಯನ್ನ ಘೋಷಿಸಿದ್ದು, ಸ್ವರೂಪ್ ಗೆ ಹಾಸನ ಟಿಕೆಟ್ ನೀಡಲಾಗಿದೆ.

ತೀವ್ರ ಜಟಿಲವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಅಭ್ಯಥಿರ್ಯ ಆಯ್ಕೆಯನ್ನು ಅಂತಿಮವಾಗಿ ಯಾವುದೇ ಗೊಂದಲಗಳಿಲ್ಲದೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿ ಮನವೊಲಿಕೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಕೊನೆಗೂ ಹೇಳಿದ ಮಾತಿನಂತೆ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ದಾರೆ,.
ಸತತ ಎರಡಯ ತಿಂಗಳಿನಿಂ ಹಾಸನ ಕ್ಷೇತ್ರದ ಅಭ್ಯರ್ಥಿಯನ್ನ ಅಂತಿಮಗೊಳಿಸುವುದು ಕಷ್ಟಕರವಾಗಿತ್ತು. ಭವಾನಿ ರೇವಣ್ಣ ಅವರಿಗೆ ಟಿಕೆಟ್ ಬೇಕು ಎಂದು ಕುಟುಂಬದ ಸದಸ್ಯರು ಸಾಕಷ್ಟು ಒತ್ತಡವನ್ನ ಹಾಕಿದರು. ಆದರೆ, ಕುಮಾರಸ್ವಾಮಿ ಅವರು ಸ್ವರೂಪ್ ಅವರನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಸಜ್ಜುಗೊಳಿದ್ದರು. ಹೀಗಾಗಿ ಹಾಸನ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಲಭಿಸಲಿದೆ ಎಂಬ ತೀವ್ರ ಕುತೂಹಲ ಕೆರಳಿಸಿತ್ತು. ಇದೀಗ ಸ್ವರೂಪ್ ಅವರಿಗೆ ಅಂತಿಮವಾಗಿದ್ದು, ಕೊನೆ ಕ್ಷಣದಲ್ಲಿ ಯಾವುದೇ ಗೊಂದಲವಿಲ್ಲದೆ ಎಡೆಮಾಡಿಕೊಡಲ ಹಿನ್ನಲೆ ಭವಿಷ್ಯದಲ್ಲಿ ಉತ್ತಮ ಸ್ಥಾನ ಕಲ್ಪಿಸಿಕೊಡುವ ಭರವಸೆಯನ್ನ ಕುಮಾರಸ್ವಾಮಿ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಸ್ವರೂಪ್ ಟಿಕೆಟ್ ನೀಡಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಭವಾನಿ ರೇವಣ್ಣ ಅವರಿಗೆ ಕರೆ ಮಾಡಿದ್ದು, ಈ ಬಾರಿ ನಮ್ಮ ಸರ್ಕಾರ ಬರುವ ವಿಶ್ವಾಸವಿದೆ.
ನಾನು ಯಾವುದೇ ಕಾರಣಕ್ಕೂ ನಿಮ್ಮ ಉಪಕಾರ ಮರೆಯಲ್ಲ. ಪ್ರಜ್ವಲ್, ಸೂರಜ್ ರಂತೆ ನಿಮ್ಮನ್ನು ಕೂಡಾ ರಾಜಕೀಯವಾಗಿ ಮುನ್ನಲೆಗೆ ತರುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ, ನಿಮ್ಮ ಗೌರವಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳುತ್ತೇನೆ. ಎಂದು ಕುಮಾರಸ್ವಾಮಿ ಮಾತನಾಡಿದ್ದಾರೆ ಎನ್ನಲಾಗಿದೆ.
ಇನ್ನೂ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಭವಾನಿ ರೇವಣ್ಣ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.












Click it and Unblock the Notifications