ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಆರೋಪ: ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು, ಫೆಬ್ರವರಿ 28: ರಾಜ್ಯಸಭಾ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ವಿಧಾನಸೌಧದ ಆವರಣದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications