ಬಿಜೆಪಿ, ಜೆಡಿಎಸ್‌ಗೆ ಮತಹಾಕಿದ್ರೆ ಗ್ಯಾರಂಟಿ ಯೋಜನೆ ರದ್ದು: ಡಿಕೆ ಶಿವಕುಮಾರ್​​ ಹೇಳಿದ್ದೇನು?

ಬೆಂಗಳೂರು, ನವೆಂಬರ್‌ 20: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್‌ ತೆಗದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬಿಜೆಪಿ ಮತ್ತು ದಳದವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು. ಅವರ ಈ ಜನವಿರೋಧಿ ಬುದ್ದಿಯನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲುಸುವುದಾಗಲಿ, ಕಡಿಮೆ ಮಾಡುವುದಾಗಲಿ ಯಾವುದನ್ನೂ ಸಹ ಕಾಂಗ್ರೆಸ್‌ ಸರ್ಕಾರ ಮಾಡುವುದಿಲ್ಲ ಎಂದು ತಿಳಿಸಿದರು.

dk-shivakumar

ಬಿಜೆಪಿಯವರು ಅಧ್ಯಕ್ಷರನ್ನಾಗಿ, ವಿರೋಧ ಪಕ್ಷದ ನಾಯಕರನ್ನಾಗಿ ಯಾರನ್ನಾದರೂ ಮಾಡಿಕೊಳ್ಳಲಿ. ಎಷ್ಟು ಜನರನ್ನು ಬೇಕಾದರೂ ಒಗ್ಗೂಡಿಸಲಿ. ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ. ನಮಗೂ ಅದಕ್ಕೂ ಸಂಬಂಧವಿಲ್ಲ.ಬ್ಲಾಕ್‌, ಜಿಲ್ಲಾ ತಾಲ್ಲೂಕು ಮಟ್ಟದ ಅಧ್ಯಕ್ಷರು, ಕಾರ್ಯಕರ್ತರು ಮತ್ತು ನಾಯಕರು ಬೂತ್‌ ಮಟ್ಟದಿಂದ ಗ್ಯಾರಂಟಿ ಯೋಜನೆಗಳ ಸಾಧಕ- ಭಾದಕಗಳನ್ನು ಕಡ್ಡಾಯವಾಗಿ ತಿಳಿದುಕೊಂಡು, ಜನರಿಗೆ ಆಗುತ್ತಿರುವ ಅನಾನುಕೂಲ ಮತ್ತು ಅನುಕೂಲ ಎರಡನ್ನೂ ಸರ್ಕಾರದ ಗಮನಕ್ಕೆ ತರಬೇಕು.

ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಇಲ್ಲವೇ ಎಂದು ಖುದ್ದಾಗಿ ತಿಳಿಯಲು ಮಂತ್ರಿಗಳಿಗೆ ಸೂಚನೆ ನೀಡಲಾಗಿದೆ. ನ. 28 ರಂದು ಕಾಂಗ್ರೆಸ್‌ ಸಂಸ್ಥಾಪಕರ ದಿನ. ಈ ದಿನದಂದೇ ಪಕ್ಷದ ವತಿಯಿಂದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಸಮೀಕ್ಷೆ ಮಾಡಲು ಸಮಿತಿ ರಚನೆ ಮಾಡಲಾಗುವುದು.

ಮುಂದಿನ ನಾಲ್ಕು ವರ್ಷಗಳಲ್ಲಿ ಯಾರು ಇರುತ್ತಾರೆ ಎನ್ನುವುದೇ ಗೊತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬವೂ ತಿಂಗಳಿಗೆ 5 ಸಾವಿರಕ್ಕೂ ಹೆಚ್ಚು ಹಣವನ್ನು ಉಳಿತಾಯ ಮಾಡುತ್ತಿದೆ. ಇಂತಹ ಚಿನ್ನದ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಜನರಿಗೆ ಕಾರ್ಯಕರ್ತರು ಮನವರಿಕೆ ಮಾಡಬೇಕು.

dk-shivakumar

ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಹೋದ ವೇಳೆ ಅವರು ʼಡಿ.ಕೆ ಈ ವರ್ಷ ಎರಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತನ್ನಿ, ಸಾಕು ಎಂದಿದ್ದರುʼ. ನಾನು ಆಯಿತು ಸಾರ್‌ ಎಂದು ನಕ್ಕು ಹೊರಬಂದಿದ್ದೆ. ಆದರೆ ಮೊದಲನೇ ಕ್ಯಾಬಿನೆಟ್‌ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಡಿಸೆಂಬರ್‌ ತಿಂಗಳಿನಲ್ಲಿ ಐದನೇ ಗ್ಯಾರಂಟಿ ಯುವನಿಧಿ ಜಾರಿಗೆ ತರಲಾಗುವುದು.

ಈ ದೇಶಕ್ಕೆ ಗ್ಯಾರಂಟಿ ಯೋಜನೆಗಳನ್ನು ಮೊದಲು ಕೊಟ್ಟವರು ಇಂದಿರಾ ಗಾಂಧಿ ಮತ್ತು ಕಾಂಗ್ರೆಸ್‌ ಪಕ್ಷ. ಬ್ಯಾಂಕ್‌ಗಳ ರಾಷ್ಟ್ರೀಕರಣವಾದ ಮೇಲೆ ಜನರ ಮನೆ ಬಾಗಿಲಿಗೆ ಬಂದು ಸಾಲ ಕೊಡುವ ವ್ಯವಸ್ಥೆ ಬಂದಿದ್ದೇ ಇಂದಿರಾ ಗಾಂಧಿ ಅವರ ಕ್ರಾಂತಿಕಾರಕ ನಿರ್ಧಾರದಿಂದ.

ಅಂಗನವಾಡಿಯಲ್ಲಿ ಬಿಸಿಯೂಟ ಸೇರಿದಂತೆ ಸಾವಿರಾರು ಜನಪರ ಯೋಜನೆಗಳು ಜಾರಿಗೆ ಬಂದಿದ್ದೇ ಇಂದಿರಾಗಾಂಧಿ ಅವರ ಕಾಲದಲ್ಲಿ. ನಾನು ಮೊದಲ ಬಾರಿಗೆ ಬೈಕ್‌ ತೆಗದುಕೊಳ್ಳಲು ಲಾಲ್‌ಬಾಗ್‌ ಬಳಿ ಇರುವ ಲೇವಾದೇವಿಗಾರರ ಬಳಿ 3 ಸಾವಿರ ಸಾಲ ಪಡೆದು ತಿಂಗಳಿಗೆ 500 ರೂಪಾಯಿ ಕಟ್ಟುತ್ತಿದ್ದೆ.

ಆಗ ಬ್ಯಾಂಕ್‌ಗಳಲ್ಲಿ ಜನಸಾಮಾನ್ಯರಿಗೆ ಸಾಲ ಕೊಡುವ ವ್ಯವಸ್ಥೆ ಇರಲಿಲ್ಲ. ಬ್ಯಾಂಕ್‌ಗಳ ರಾಷ್ಟ್ರೀಕರಣದಿಂದ ಲಕ್ಷಾಂತರ ಜನರ ಬದುಕಿನಲ್ಲಿ ಬದಲಾವಣೆ ಉಂಟಾಯಿತು.

ಆಸ್ತಿ, ಪ್ರಾಣ, ಅಧಿಕಾರ ಸೇರಿದಂತೆ ತಮ್ಮ ಜೀವನವನ್ನೆ ನೆಹರು ಕುಟುಂಬದವರ ಈ ದೇಶಕ್ಕೆ ಸಮರ್ಪಿಸಿದ್ದಾರೆ. ಇಡೀ ಪ್ರಪಂಚದಲ್ಲಿಯೇ ನೆಹರು ಕುಟುಂಬದಂತೆ ಯಾರೂ ಪಕ್ಷ ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+