ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್‌ ನಿರ್ಧಾರ: 5 ವರ್ಷದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಮಂಗಳೂರು, ಅಕ್ಟೋಬರ್‌ 27: ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಈ ವಿಚಾರದಲ್ಲಿ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.

If The High Command Decides I Will Be The Cm For 5 Years Says Siddaramaiah

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು. ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷರ, ಸಿಎಂ ಹುದ್ದೆ ಖಾಲಿ ಇಲ್ಲ: ಈಶ್ವರ ಖಂಡ್ರೆ

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಕುರ್ಚಿಯೂ ಖಾಲಿ ಇಲ್ಲ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ವಿಧಾನಪರಿಷತ್ ಸದಸ್ಯರಾದ ಯತೀಂದ್ರ ಅವರ ಮಾತುಗಳನ್ನು ಮುಖ್ಯಮಂತ್ರಿಗಳ ಧ್ವನಿ ಎಂಬಂತೆ ಬಿಂಬಿಸುವುದು ಸರಿಯಲ್ಲ. ಈಗಾಗಲೇ ಯತೀಂದ್ರ ಅವರೇ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ತಾವು ಏನೂ ಹೇಳುವ ಅಗತ್ಯವಿಲ್ಲ ಎಂದರು.

ಯಾವುದೇ ಜಾತಿ, ಮತ, ಧರ್ಮದ ಆಧಾರದ ಮೇಲೆ ನಾಯಕತ್ವ ನಿರ್ಧಾರ ಆಗುವುದಿಲ್ಲ ಎಂದ ಈಶ್ವರ ಖಂಡ್ರೆ, ಪಕ್ಷ 2028ರಲ್ಲೂ ಮರಳಿ ಅಧಿಕಾರಕ್ಕೆ ಬರಲಿದ್ದು, ಆಗ ಪಕ್ಷದ ವರಿಷ್ಠರು, ಸೂಕ್ತ ಸಂದರ್ಭದಲ್ಲಿ, ಎಲ್ಲ ಜಾತಿ, ಸಮುದಾಯದವರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳುತ್ತಾರೆ ಎಂದರು. ನವೆಂಬರ್ ಕ್ರಾಂತಿ ಎಂಬುದು ಸಂಪೂರ್ಣ ಭ್ರಾಂತಿ, ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+