ಬ್ಲೋ ಅಪ್ ಸಿಲಬಸ್ ಆಧಾರದಲ್ಲೇ ಪಿಯುಸಿ ಪರೀಕ್ಷೆ

ಬೆಂಗಳೂರು, ಜ. 7 : ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಗೆ ಸರ್ಕಾರ ಮಣಿದಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ 2015ನೇ ಸಾಲಿನಲ್ಲಿ ರಾಜ್ಯಮಟ್ಟದ 'ಬ್ಲೋ ಅಪ್ ಸಿಲಬಸ್' ಆಧಾರದಲ್ಲೇ ಪರೀಕ್ಷೆ ನಡೆಸುವುದಾಗಿ ಪಿಯು ಮಂಡಳಿ ಆದೇಶ ಹೊರಡಿಸಿದೆ.

ಡಿ.31ರಂದು ಆದೇಶ ಹೊರಡಿಸಿದ್ದ ಪಿಯುಸಿ ಮಂಡಳಿ 2015ರ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಪಠ್ಯಕ್ರಮದ ಅನುಸಾರ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಆದೇಶ ಹೊರಡಿಸಿತ್ತು. ಮಂಡಳಿಯ ಈ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತೊಂದರೆಯಾಗುತ್ತದೆ ಎಂದು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. [2015ರ ಪಿಯುಸಿ ಪರೀಕ್ಷೆ ವೇಳಾಪಟ್ಟಿ]

exam

ವಿದ್ಯಾರ್ಥಿ ಸಂಘಟನೆಗಳ ಹೋರಾಟಕ್ಕೆ ಮಣಿದಿರುವ ಮಂಡಳಿ ಜನವರಿ 6ರಂದು ಬ್ಲೋ ಅಪ್ ಸಿಲಬಸ್ ಪ್ರಕಾರವೇ ಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಉಂಟಾಗಿದ್ದ ಆತಂಕ ದೂರವಾಗಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ರಾಷ್ಟ್ರೀಯ ಪಠ್ಯಕ್ರಮದ ಅನುಸಾರದಲ್ಲೇ ಪರೀಕ್ಷೆ ನಡೆಸುವುದಾಗಿ ಹೇಳಿದೆ.

ವಿದ್ಯಾರ್ಥಿಗಳು ಹೇಳುವುದೇನು? : ವಿದ್ಯಾರ್ಥಿಗಳು ಹೇಳುವ ಪ್ರಕಾರ ಈ ಶೈಕ್ಷಣಿಕ ವರ್ಷದ ಆರಂಭದಿಂದಲೂ ರಾಜ್ಯಮಟ್ಟದ 'ಬ್ಲೋ ಅಪ್ ಸಿಲಬಸ್' ಅನ್ನು ಬೋಧಿಸಲಾಗುತ್ತಿತ್ತು. ಅದಕ್ಕೆ ಅನುಗುಣವಾಗಿಯೇ ಪ್ರಶ್ನೆ ಪತ್ರಿಕೆಗಳನ್ನು ನೀಡಬೇಕಿತ್ತು.

ಆದರೆ, ಡಿ.31ರಂದು ಹೊರಡಿಸಿದ ಆದೇಶದ ಪ್ರಕಾರ ಪಿಯು ಮಂಡಳಿಯು ರಾಷ್ಟ್ರೀಯ ಪಠ್ಯಕ್ರಮದ ಅನುಸಾರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಿತ್ತು. ಹೊಸ ನೀತಿಯನ್ನು ಜಾರಿಗೊಳಿಸಬೇಕೆಂದರೆ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಜಾರಿಗೆ ತರಬೇಕು, ಪರೀಕ್ಷೆಗೆ ಕೆಲವು ದಿನಗಳು ಇರುವಾಗ ಇಂತಹ ನೀತಿ ಜಾರಿಗೆ ತರಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದೆವು ಎಂದು ಹೇಳಿದ್ದಾರೆ.

ಅಂದಹಾಗೆ ಪದವಿಪೂರ್ವ ಶಿಕ್ಷಣ ಇಲಾಖೆ 2015ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಮಾರ್ಚ್ 12 ರಿಂದ 27ರವರೆಗೆ ಪರೀಕ್ಷೆಗಳು ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+