Ilkal-Karwar Road: ರಾಷ್ಟ್ರೀಯ ಹೆದ್ದಾರಿಯಾಗಲಿದೆ ಕರ್ನಾಟಕದ ಈ ರಾಜ್ಯ ಹೆದ್ದಾರಿ?
ಬೆಂಗಳೂರು, ಜುಲೈ 04: ಕರ್ನಾಟಕದ ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಬೇಕು ಎಂಬ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ.
ಹೌದು, ಬಾಗಲಕೋಟೆ ಜಿಲ್ಲೆಯ ನಗರ ಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮನವಿ ಮಾಡಿದ್ದಾರೆ.

ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿದರು. ಈ ವೇಳೆ ರಾಜ್ಯದ ಹೆದ್ದಾರಿಗಳ ಕುರಿತು ಅವರು ಕೆಲವು ಹೊತ್ತು ಮಾತನಾಡಿದ್ದಾರೆ.
ಈ ವೇಳೆ ಕರ್ನಾಟಕದಲ್ಲಿ ರಸ್ತೆ ಹಾಗೂ ಹೆದ್ದಾರಿ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ. ಪ್ರಸ್ತುತ ಇಳಕಲ್-ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯನ್ನಾಗಿ ಪರಿವರ್ತಿಸುವುದು, ರೋಣ ತಾಲೂಕಿನ ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಸದ ಡಾ.ಸುಧಾಕರ್ ಹಾಜರಿದ್ದರು.
ಮಾಜಿ ಸಿಎಂ ಮನವಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಮ್ಮತಿಸದ್ದೇ ಆದಲ್ಲಿ, ಮುಂದಿನ ದಿನಗಳಲ್ಲಿ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನಲಾಗಿದೆ.
ಕರ್ನಾಟಕ ಹೆದ್ದಾರಿ, ರಸ್ತೆ ಯೋಜನೆಗೆ ಹಣ ಹಂಚಿಕೆ
ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಒಟ್ಟು 470 ಕಿಲೋಮೀಟರ್ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯದಿಂದ 2024-25ರ ಅವಧಿಗೆ 8006 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ಹೊಸದಾಗಿ 459 ಕಿಲೋ ಮೀಟರ್ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿಯನ್ನು (DPR) ಸಿದ್ದಪಡಿಸಲು ರೂ. 15 ಕೋಟಿಯನ್ನು ಹಂಚಿಕೆ ಮಾಡಲಾಗಿದೆ ಎಂದು ಇತ್ತೀಚೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದರು.
ನನ್ನ ಪ್ರಸ್ತಾವನೆಯ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 1-ನವಲಗುಂದ ಪಟ್ಟಣದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 52ಕ್ಕೆ 12 ಕಿಲೋಮೀಟರ್ ಉದ್ದದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ 350 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.
ಹುಬ್ಬಳ್ಳಿಯಲ್ಲಿ ಎಲಿವೇಟೆಡ್ ಕಾರಿಡಾರ್
ಇನ್ನೂ ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವರ್ತುಲದಿಂದ ಬೆಂಗಳೂರು ಮಾರ್ಗದಲ್ಲಿ ಬಂಕಾಪುರ ಚೌಕ್ ಬಿಡ್ನಾಳ ಕ್ರಾಸ್‌ವರೆಗೆ ವಿಸ್ತರಿಸುವ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯ ವಿಸ್ತೃತ ಯೋಜನಾ ವರದಿ ತಯಾರಿಗಾಗಿ 25 ಲಕ್ಷ ರೂಪಾಯಿ, ಕುಸುಗಲ್‌ನಿಂದ ನರೇಂದ್ರ ಕ್ರಾಸ್ ವರೆಗಿನ ವರ್ತುಲ ರಸ್ತೆಯ ಕಾಮಗಾರಿಯ ವಿಸ್ತೃತ ಯೋಜನಾ ವರದಿ ತಯಾರಿಗಾಗಿ 41 ಲಕ್ಷ ರೂಪಾಯಿ ಕೂಡಾ ಮಂಜೂರು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನೂ ಇತ್ತೆಚೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಶುಲ್ಕದ ಏರಿಕೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಶುಲ್ಕ ಜಾರಿಗೆ ಬಂದಿರಲಿಲ್ಲ. ಇದೀಗ ಕಳೆದ ತಿಂಗಳು ಜಾರಿಗೆ ತರಲು ಸರ್ಕಾರ ನೀರ್ಧರಿಸಿತ್ತು. ಇದಕ್ಕೆ ವಾಹನ ಸವಾರರು ವ್ಯಾಪಕ ಆಕ್ರೊಶ ವ್ಯಕ್ತಪಡಿಸಿದ್ದರು.












Click it and Unblock the Notifications