ಮಹಿಳೆಗೆ ಕಿರುಕುಳ, ಸರ್ಕಾರಕ್ಕೆ ಗಡುವು ಕೊಟ್ಟ ಎಚ್ಡಿಕೆ

Posted By:
Subscribe to Oneindia Kannada

ಬೆಂಗಳೂರು, ಮೇ 24 : 'ಜನತಾ ದರ್ಶನಕ್ಕೆ ಬಂದಿದ್ದ ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಮುಂದೆ ಧರಣಿ ಕೂರುತ್ತೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದರು.

ವಿಧಾನಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 'ನೊಂದವರ ಸಮಸ್ಯೆ ಕೇಳಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿಗಳು ಯಾವ ಪುರುಷಾರ್ಥಕ್ಕೆ ಜನತಾ ದರ್ಶನ ನಡೆಸಬೇಕು?' ಎಂದು ಪ್ರಶ್ನಿಸಿದರು. [ವಾಲಾ ಇಲ್ಲಿ ಇರೋದೇ ವ್ಯವಹಾರ ನಡೆಸೋಕೆ: ಎಚ್ಡಿಕೆ]

hd kumaraswamy

'ಮೇ 17ರಂದು ಹಕ್ಕುಪತ್ರದ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಬಂದ ದಲಿತ ಮಹಿಳೆ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಹಿಳೆಯ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ಸಿದ್ದರಾಮಯ್ಯ ಅವರ ಮನೆಯ ಮುಂದೆ ಧರಣಿ ಕುಳಿತುಕೊಳ್ಳುತ್ತೇನೆ' ಎಂದು ಕುಮಾರಸ್ವಾಮಿ ಹೇಳಿದರು. [ಕರ್ನಾಟಕ ಜಾತಿಗಣತಿ ವರದಿ: ಮುಸ್ಲಿಮರು ನಂ. 2?]

'ಮುಖ್ಯಮಂತ್ರಿಗಳನ್ನು ಕಾಣಲು ಬಂದ ಹೊಸಹಳ್ಳಿಯ ದಲಿತ ಮಹಿಳೆ ಸವಿತಾ ಎಂಬಾಕೆ ಜೊತೆ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ವೇಶ್ಯಾವಾಟಿಕೆ ಕೇಸ್ ದಾಖಲು ಮಾಡುವುದಾಗಿ ಬೆದರಿಸಿ ಅಮಾನುಷವಾಗಿ ನಡೆಸಿಕೊಂಡಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು' ಎಂದು ಕುಮಾರಸ್ವಾಮಿ ಒತ್ತಾಯಿಸಿದರು. [ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ ನೀಡಿದ ಸೂಚನೆಗಳೇನು?]

ಆರೋಪ ತಳ್ಳಿ ಹಾಕಿದ ಪೊಲೀಸ್ ಆಯುಕ್ತರು : ಜನತಾದರ್ಶನಕ್ಕೆ ಆಗಮಿಸಿದ್ದ ಮಹಿಳೆಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ತಳ್ಳಿ ಹಾಕಿದ್ದಾರೆ. ಗೃಹ ಕಚೇರಿ ಕೃಷ್ಣಾ ಬಳಿ ಮಂಗಳವಾರ ಬೆಳಗ್ಗೆ ಮಾತನಾಡಿದ ಆಯುಕ್ತರು, 'ಕುಮಾರಸ್ವಾಮಿ ಅವರ ಆರೋಪ ಸತ್ಯಕ್ಕೆ ದೂರವಾದದ್ದು' ಎಂದು ಸ್ಪಷ್ಟನೆ ನೀಡಿದರು. [ಪೊಲೀಸರ ಕಿವಿ ಹಿಂಡಿದ ಸಿದ್ದರಾಮಯ್ಯ]

ಆಗಿರುವುದೇನು? : ಹೊಸಹಳ್ಳಿ ನಿವಾಸಿ ಸವಿತಾ ಅವರು ಮೇ 17ರಂದು ಜನತಾ ದರ್ಶನದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಹೋಗಿದ್ದರು. ಆದರೆ, ಸಿದ್ದರಾಮಯ್ಯ ಗೃಹ ಕಚೇರಿ ಬಳಿ ಇದ್ದ ಪೊಲೀಸರು ರಾತ್ರಿ 8 ಗಂಟೆಯ ತನಕ ಆಕೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ.

ಆಕೆಯನ್ನು ಹೈಗೌಂಡ್ಸ್ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಅಮಾನವೀಯವಾಗಿ ವರ್ತಿಸಲಾಗಿದೆ. ವೇಶ್ಯಾವಾಟಿಕೆ ಕೇಸು ದಾಖಲು ಮಾಡುವುದಾಗಿ ಬೆದರಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬುದು ಮಹಿಳೆಯ ಆರೋಪವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Former CM and JDS state president H.D. Kumaraswamy set a three day deadline for the Karnataka Government to act against police officers who misbehaved with women at Janata Darshan.
Please Wait while comments are loading...