ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೇಣುಕಾಚಾರ್ಯ ವಿರುದ್ಧ ಅಕ್ರಮ ಆಸ್ತಿಗಳಿಕೆ ದೂರು

|
Google Oneindia Kannada News

ದಾವಣಗೆರೆ, ಏ. 28 : ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಅವರು ಅಕ್ರಮವಾಗಿ ಆಸ್ತಿಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ರೇಣುಕಾಚಾರ್ಯ ಅವರ ಸಂಬಂಧಿಕರು ಆಸ್ತಿಗಳಿಸಿದ್ದು ಈ ಬಗ್ಗೆ ತನಿಖೆಯಾಗಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಮಂಗಳವಾರ ಹೊನ್ನಾಳಿ ತಾಲೂಕು ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಗುರುಪಾದಯ್ಯ ಅವರು ದಾವಣಗೆರೆ ಲೋಕಾಯುಕ್ತ ನ್ಯಾಯಾಲಯಕ್ಕೆ ಈ ಕುರಿತು ದೂರು ಸಲ್ಲಿಕೆ ಮಾಡಿದ್ದಾರೆ. ದೂರು ದಾಖಲು ಮಾಡಿಕೊಂಡಿರುವ ಕೋರ್ಟ್ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿದೆ.

mp renukacharya

ದೂರಿನಲ್ಲೇನಿದೆ? : ಎಂ.ಪಿ.ರೇಣುಕಾಚಾರ್ಯ ಅವರು ಹಟ್ಟಿ ಗಣಿ ನಿಗಮದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹೊನ್ನಾಳಿ, ದಾವಣಗೆರೆ ಮತ್ತು ಶಿವಮೊಗ್ಗದಲ್ಲಿ ಸುಮಾರು 18 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿರಾಗಿದ್ದಾಗಲೂ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ. ರೇಣುಕಾಚಾರ್ಯ ಅವರ ಸಂಬಂಧಿಕರಾದ ಎಂ.ಪಿ.ರಮೇಶ್, ಎಂ.ಪಿ.ಆರಾಧ್ಯ. ಎಂ.ಪಿ.ಬಸವರಾಜ್ ಅವರು ಕೋಟ್ಯಾಂತರ ರೂ. ಆಸ್ತಿಯನ್ನು ಸಂಪಾದನೆ ಮಾಡಿದ್ದು ಈ ಕುರಿತು ತನಿಖೆಯಾಗಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಅಂದಹಾಗೆ 2013ರ ವಿಧಾನಸಭೆ ಚುನಾವಣೆಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರು ಹೊನ್ನಾಳಿ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಡಿ.ಜೆ.ಶಾಂತನಗೌಡ ಅವರು ಚುನಾವಣೆಯಲ್ಲಿ 78,789 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ರೇಣುಕಾಚಾರ್ಯ ಅವರು 60,051 ಮತಗಳನ್ನು ಗಳಿಸಿದ್ದರು. [ಚುನಾವಣೆ ಅಂಕಿ ಅಂಶ : ಇಂಡಿಯಾ ವೋಟ್ಸ್]

English summary
Davanagere : Honnali Bhrashtachar Virodhi vedike president Gurupadaiah field illegal asset case against former minister and BJP leader MP Renukacharya on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X