ಅಕ್ರಮ ಆಸ್ತಿ ಕೇಸ್: ಸಿಬಿಐ ನೋಟಿಸ್‌ಗೆ ಡಿಕೆಶಿ ವಕೀಲರ ಆಕ್ಷೇಪ

ಬೆಂಗಳೂರು, ಫೆಬ್ರವರಿ 01: ಆದಾಯಕ್ಕೂ ಮೀರಿದ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದರೂ ಸಹ ಸಿಬಿಐ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪರ ವಕೀಲರು ಹೈಕೋರ್ಟ್‌ನಲ್ಲಿ ಆಕ್ಷೇಪವೆತ್ತಿದ್ದಾರೆ.

ಡಿ. ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಫೆಬ್ರವರಿ 12ಕ್ಕೆ ಮುಂದೂಡಿತು.

Illegal Assets Case DKS Counsel Objected For CBI Notice

ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ಉಮೇಶ್ ಅಡಿಗ ಅವರಿದ್ದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ದಾಖಲೆಯೇ ನೀಡಿಲ್ಲ: ಡಿ. ಕೆ. ಶಿವಕುಮಾರ್ ಪರ ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದ ಹಿರಿಯ ವಕೀಲರು, ಅರ್ಜಿಗಳ ದಾಖಲೆಗಳ ಲಭ್ಯವಾಗಿಲ್ಲ ಎಂದರು. ಅಲ್ಲದೆ, ಶಿವಕುಮಾರ್ ಅವರ ವಿರುದ್ಧದ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆ ಹಿಂಪಡೆಯಲಾಗಿದೆ. ಪ್ರಕರಣವನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಇಷ್ಟಾದರೂ ಸಿಬಿಐ ಶಿವಕುಮಾರ್ ಅವರಿಗೆ ನೊಟೀಸ್ ನೀಡುತ್ತದೆ ಎಂದು ಪೀಠಕ್ಕೆ ವಿವರಿಸಿದರು.

ಅದಕ್ಕೆ ನ್ಯಾಯಪೀಠ, ಪ್ರಕರಣದ ಎಲ್ಲ ದಾಖಲೆಗಳನ್ನು ಪ್ರತಿವಾದಿ ವಕೀಲರಿಗೆ ಒದಗಿಸುವಂತೆ ಸೂಚನೆ ನೀಡಿತು. ಜತೆಗೆ, ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಮುಂದಿನ ವಿಚಾರಣೆ ವೇಳಗೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿತು.

ಯತ್ನಾಳ್ ಪರ ವಕೀಲರು, ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದಿದ್ದು, ಲೋಕಾಯುಕ್ತರಿಗೆ ವರ್ಗಾವಣೆ ಮಾಡಲಾಗಿದೆ. ಆದ್ದರಿಂದ ಲೋಕಾಯುಕ್ತರನ್ನು ಪ್ರತಿವಾದಿ ಮಾಡಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ: 2019ರಲ್ಲಿ ಬಿಜೆಪಿ ಸರ್ಕಾರವು ಡಿ. ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣಗಳಿಕೆ ಪ್ರಕರಣದ ತನಿಖೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು.

ಆನಂತರ ಇದನ್ನು ಪ್ರಶ್ನಿಸಿ ಡಿ. ಕೆ. ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂಪಡೆದಿತ್ತು.

ಈ ಹಿನ್ನೆಲೆಯಲ್ಲಿ ಡಿ. ಕೆ. ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಸಿಬಿಐ ಸಹ ಹೈಕೋರ್ಟ್ ಮೆಟ್ಟಿಲೇರಿದೆ.

ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ತಿಳಿಸಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+