Illegal Bangladeshi: ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಪ್ರಜೆಗಳು: ಎಸ್.ಐ.ಟಿ. ರಚಿಸಲು ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ
Illegal Bangladeshi Migrants: ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಳವಾಗುತ್ತಿದೆ ಎನ್ನುವ ಆರೋಪಗಳ ನಡುವೆ ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಪ್ರಜೆಗಳ ಪತ್ತೆಗೆ ಎಸ್.ಐ.ಟಿ. ರಚಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.
ಅಕ್ರಮ ಬಾಂಗ್ಲಾ ಪ್ರಜೆಗಳು ಬೆಂಗಳೂರು ಸೇರಿದಂತೆ ಅನೇಕ ಕಡೆ ನೆಲಸಬಹುದು. ಅವರನ್ನು ಗಡಿಪಾರು ಮಾಡುವ ಆತುರತೆ ರಾಜ್ಯ ಸರ್ಕಾರಕ್ಕಿಲ್ಲ. ಸಣ್ಣ ಪುಟ್ಟ ಘಟನೆಗಳಿಗೆ 'ಸತ್ಯ ಶೋಧನಾ ಸಮಿತಿ' ರಚಿಸುವ ಸರ್ಕಾರ, ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲು ಎಸ್.ಐ.ಟಿ. ರಚಿಸಲು ಆಸಕ್ತಿಇಲ್ಲ. ಒಂದಷ್ಟು ನಿರುದ್ಯೋಗಿಗಳು, ಬಾಡಿಗೆ ಹೋರಾಟಗಾರರು, ಎಡಪಂಕ್ತೀಯರು ದೂರು ಕೊಟ್ಟಿದ್ದಕ್ಕೆ ಧರ್ಮಸ್ಥಳ ಪ್ರಕರಣದಲ್ಲಿ SIT ರಚಿಸಿದ ಕಾಂಗ್ರೆಸ್ ಸರ್ಕಾರಕ್ಕೆ, ರಾಷ್ಟ್ರಕ್ಕೆ ಹಾಗೂ ರಾಜ್ಯಕ್ಕೆ ಕಂಟಕವಾಗಿರುವ ಬಾಂಗ್ಲಾದೇಶದವರನ್ನು ಒದ್ದೋಡಿಸಲು ಆಗುತ್ತಿಲ್ಲ ಎಂದು ದೂರಿದ್ದಾರೆ.

ಆದರೆ, ಎಲ್ಲಿ ಹಿಂದೂಗಳು ಸಭೆ, ಸಮಾರಂಭ, ಶೋಭಾ ಯಾತ್ರೆ ನಡೆಸುತ್ತಾರೋ ಅಲ್ಲಿನ ಆಯೋಜಕರಿಗೆ ರಾತ್ರೋ ರಾತ್ರಿ ನೋಟೀಸು, ಕಿರುಕುಳ, ಮನೆಗೆ ಬಂದು ಬೆದರಿಕೆ, ಕಾನೂನು ರೀತ್ಯ ಕ್ರಮ ಆಗುತ್ತದೆ. ಅತ್ಯಂತ ಶಾಂತವಾಗಿ ನಡೆಯುವ ಹಿಂದೂ ಕಾರ್ಯಕ್ರಮ ಸರ್ಕಾರಕ್ಕೆ ಮುಜುಗುರ ತರುತ್ತದೆ, ಅದೇ ರೀತಿ ಬಾಂಗ್ಲಾದವರು ತಮ್ಮ ಸಂತತಿ ಹೆಚ್ಚು ಮಾಡಿಕೊಂಡರೆ ತಮ್ಮ 'ವೋಟ್ ಬ್ಯಾಂಕ್' ಸುಭದ್ರವಾಗುತ್ತೆ ಎಂಬ ಎಲ್ಲಿಲ್ಲದ ಸಂತೋಷ. ಹಿಂದೂ ಮುಖಂಡರಿಗೆ, ಆಯೋಜಕರಿಗೆ ನೀಡಿರುವ ನೋಟೀಸನ್ನು ಸರ್ಕಾರ ತಕ್ಷಣಕ್ಕೆ ಜಾರಿಗೆ ಬರುವಂತೆ ಹಿಂಪಡೆಯಬೇಕು ಹಾಗೂ ಅನಾವಶ್ಯಕವಾಗಿ ಕಿರುಕುಳ ನೀಡಬಾರದೆಂದು ಆಗ್ರಹಿಸುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ ಎಂದು ಈಚೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದ್ದರು.
ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ. ರಾಜ್ಯದೆಲ್ಲೆಡೆ ಬಾಂಗ್ಲಾ ನಿವಾಸಿಗಳು ಅಕ್ರಮವಾಗಿ ನೆಲೆಸಿದ್ದಲ್ಲದೆ ಆಧಾರ್ ಕಾರ್ಡ್ ಸೇರಿದಂತೆ ಅನೇಕ ಗುರುತಿನ ಚೀಟಿಯನ್ನು ಪಡೆದು ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾಗಿದ್ದ ಸಂಪನ್ಮೂಲಗಳನ್ನು ಬಳಸುತ್ತಿರುವುದು ದುರದೃಷ್ಟಕರ. ಇಲ್ಲಿ ದುಡಿಯುವ ಹಣವನ್ನು ಬಾಂಗ್ಲಾದೇಶಕ್ಕೆ ರವಾನಿಸಿ ಭಾರತವನ್ನು ಅಭದ್ರಗೊಳಿಸಲು ಉಗ್ರ ಸಂಘಟನೆಗಳಿಗೆ ನೆರವು ನೀಡುತ್ತಿರುವ ಬಗ್ಗೆಯೂ ಗೊತ್ತಾಗಿದೆ.
ಕಾಫಿ ತೋಟ, ತ್ಯಾಜ್ಯ ನಿರ್ವಹಣಾ ಘಟಕ, ಮನೆ ಹಾಗೂ ಅಪಾರ್ಟ್ಮೆಂಟ್ಗಳಲ್ಲಿ ಮನೆಗೆಲಸ, ಚಾಲಕ, ಚಿಂದಿ ಆಯುವ ಕೆಲಸವನ್ನು ಮಾಡಿಕೊಂಡು ಭಾರತವನ್ನೇ ತಮ್ಮ ನೆಲೆಯನ್ನಾಗಿ ಮಾಡಿಕೊಂಡಿರುವುದನ್ನು ಮಾಧ್ಯಮಗಳು, ಹಿಂದೂ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಯಲಿಗೆಳಿದಿದ್ದಾರೆ. ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಸಹ ಅಕ್ರಮ ಬಾಂಗ್ಲಾದೇಶಿ ವಾಸಿಗಳನ್ನು ಹುಡುಕಿಕೊಟ್ಟ ಮಾಧ್ಯಮ, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಸರ್ಕಾರ ಪರೋಕ್ಷವಾಗಿ ಅವರ ಪರವೇ ನಿಂತಿದೆ.
ರಾಜ್ಯದಲ್ಲಿರುವ ಪ್ರತಿಯೊಬ್ಬ ಬಾಂಗ್ಲಾದೇಶೀಯರನ್ನು SIR ಮಾದರಿಯಂತೆ Detect, Delete & Deport [ಪತ್ತೆ ಮಾಡುವುದು, ಅವರ ದಾಖಲಾತಿಯನ್ನು ಅಳಿಸುವುದು ಹಾಗೂ ಅವರ ದೇಶಕ್ಕೆ ಗಡಿಪಾರು ಮಾಡುವುದು] ಮಾದರಿಯಲ್ಲಿ ಹುಡುಕಿ ಅವರನ್ನು ಗಡಿಪಾರು ಮಾಡುವಂತೆ ಕೇಂದ್ರ ಗೃಹ ಮಂತ್ರಿಗಳಾದ ಶ್ರೀ ಅಮಿತ್ ಶಾ ಜಿ ಅವರಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ.
ಅಕ್ರಮ ಬಾಂಗ್ಲಾ ಪ್ರಜೆಗಳು ಬೆಂಗಳೂರು ಸೇರಿದಂತೆ ಅನೇಕ ಕಡೆ ನೆಲಸಬಹುದು. ಅವರನ್ನು ಗಡಿಪಾರು ಮಾಡುವ ಆತುರತೆ ರಾಜ್ಯ ಸರ್ಕಾರಕ್ಕಿಲ್ಲ. ಸಣ್ಣ ಪುಟ್ಟ ಘಟನೆಗಳಿಗೆ 'ಸತ್ಯ ಶೋಧನಾ ಸಮಿತಿ' ರಚಿಸುವ ಸರ್ಕಾರ, ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲು ಎಸ್.ಐ.ಟಿ. ರಚಿಸಲು ಆಸಕ್ತಿಇಲ್ಲ.
— Basanagouda R Patil (Yatnal) (@BasanagoudaBJP) January 28, 2026
ಒಂದಷ್ಟು ನಿರುದ್ಯೋಗಿಗಳು, ಬಾಡಿಗೆ ಹೋರಾಟಗಾರರು,… pic.twitter.com/Ilujr7G0Dh
ದೇಶದ ಐಕ್ಯತೆಗೆ, ಒಗ್ಗಟ್ಟಿಗೆ ಹಾಗೂ ಸಮಗ್ರತೆಗೆ ಬಾಂಗ್ಲಾ ನಿವಾಸಿಗಳನ್ನು ಕೂಡಲೇ ಗಡಿಪಾರುಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಮಾನ್ಯ ಗೃಹ ಸಚಿವರಿಗೆ ಕೋರಿದ್ದೇನೆ ಎಂದೂ ಅವರು ಹೇಳಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications