Get Updates
Get notified of breaking news, exclusive insights, and must-see stories!

ಅಕ್ರಮ ಬಾಂಗ್ಲಾದೇಶಿಗರಿಂದ ಉಗ್ರ ಸಂಘಟನೆಗಳಿಗೆ ಪರೋಕ್ಷ ನೆರವು: ಗಡಿಪಾರು ಮಾಡುವಂತೆ ಶಾಸಕ ಯತ್ನಾಳ್‌ ಪತ್ರ

ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಇಂದು ಅಕ್ರಮ ಬಾಂಗ್ಲಾದೇಶಿ ವಾಸಿಗಳ ತವರೂರಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಬಾಂಗ್ಲಾದೇಶ ಮೂಲದವರು ಅಕ್ರಮವಾಗಿ ನೆಲೆಸಿದ್ದು, ಆಧಾರ್ ಕಾರ್ಡ್ ಸೇರಿದಂತೆ ಹಲವು ಸರ್ಕಾರಿ ಗುರುತಿನ ಚೀಟಿಗಳನ್ನು ಪಡೆದು, ಸ್ಥಳೀಯ ಭಾರತೀಯ ನಾಗರಿಕರಿಗೆ ಸೇರಬೇಕಾದ ಸಂಪನ್ಮೂಲಗಳು ಮತ್ತು ಸೌಲಭ್ಯಗಳನ್ನು ಬಳಸುತ್ತಿರುವುದು ಅತ್ಯಂತ ದುರದೃಷ್ಟಕರ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಉಗ್ರ ಸಂಘಟನೆಗಳಿಗೆ ಪರೋಕ್ಷ ನೆರವು

ಕಾಫಿ ತೋಟಗಳು, ತ್ಯಾಜ್ಯ ನಿರ್ವಹಣಾ ಘಟಕಗಳು, ಮನೆ ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಮನೆಕೆಲಸ, ಚಾಲಕ ಕೆಲಸ, ಚಿಂದಿ ಆಯುವ ಕೆಲಸಗಳ ಮೂಲಕ ಈ ಅಕ್ರಮ ವಾಸಿಗಳು ಭಾರತವನ್ನೇ ತಮ್ಮ ನೆಲೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಬಸನಗೌಡ ಪಾಟೀಲ್ ತಿಳಿಸಿದ್ದಾರೆ. ಇಂತಹವರು ಇಲ್ಲಿ ದುಡಿದ ಹಣವನ್ನು ಬಾಂಗ್ಲಾದೇಶಕ್ಕೆ ರವಾನಿಸುವುದರ ಮೂಲಕ ದೇಶದ ಭದ್ರತೆಗೆ ಧಕ್ಕೆ ಉಂಟುಮಾಡುವ ಉಗ್ರ ಸಂಘಟನೆಗಳಿಗೆ ಪರೋಕ್ಷವಾಗಿ ನೆರವು ನೀಡುತ್ತಿರುವ ಮಾಹಿತಿಯೂ ಲಭ್ಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Illegal Bangladeshi Immigrants Aiding Terror Groups Indirectly MLA Yatnal Writes to Amit Shah

ಈ ಅಕ್ರಮ ವಾಸಿಗಳ ಬಗ್ಗೆ ಮಾಧ್ಯಮಗಳು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಾಕಷ್ಟು ದಾಖಲೆಗಳು ಮತ್ತು ಮಾಹಿತಿ ಹೊರತಂದಿದ್ದರೂ, ಸರ್ಕಾರ ಅಕ್ರಮ ವಾಸಿಗಳನ್ನು ಪತ್ತೆಹಚ್ಚುವ ಬದಲು ಈ ವಿಚಾರವನ್ನು ಬಯಲಿಗೆಳೆದ ಕಾರ್ಯಕರ್ತರು ಮತ್ತು ಮಾಧ್ಯಮದವರ ಮೇಲೆಯೇ ಪ್ರಕರಣ ದಾಖಲಿಸುತ್ತಿರುವುದು ಸರ್ಕಾರ ಅವರ ಪರವಾಗಿ ನಿಂತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪ್ರತಿಯೊಬ್ಬ ಅಕ್ರಮ ಬಾಂಗ್ಲಾದೇಶಿ ವಾಸಿಯನ್ನು ಎಸ್‌ಐಆರ್‌ ಮಾದರಿಯಲ್ಲಿ Detect, Delete & Deport (ಪತ್ತೆಹಚ್ಚಿ, ದಾಖಲೆಗಳನ್ನು ರದ್ದುಪಡಿಸಿ, ಗಡಿಪಾರು ಮಾಡುವ) ಕ್ರಮದ ಮೂಲಕ ಗುರುತಿಸಿ ತಕ್ಷಣವೇ ಅವರ ದೇಶಕ್ಕೆ ಹಿಂತಿರುಗಿಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಸವಿಸ್ತಾರ ಪತ್ರ ಬರೆದಿರುವುದಾಗಿ ಬಸನಗೌಡ ಪಾಟೀಲ್ ತಿಳಿಸಿದ್ದಾರೆ. ದೇಶದ ಐಕ್ಯತೆ, ಒಗ್ಗಟ್ಟು ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಾಸಿಗಳನ್ನು ಕೂಡಲೇ ಗಡಿಪಾರುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಬಾಂಗ್ಲಾದೇಶಿಗಳ ಮೇಲೆ ಯಾಕಿಷ್ಟು ವ್ಯಾಮೋಹ?

ರಾಜ್ಯದಲ್ಲಿ ವ್ಯಾಪಕವಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ಜಾಲವನ್ನು ಬಯಲಿಗೆಳೆದಿದ್ದಕ್ಕಾಗಿ ಡಾ. ನಾಗೇಂದ್ರಪ್ಪ ಅವರಿಗೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದ್ದು, ಅವರು ವಿಧಾನಸೌಧದ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಂಗ್ರೆಸ್ ಸರ್ಕಾರ ಅಕ್ರಮ ವಲಸಿಗರಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಅಕ್ರಮ ಬಾಂಗ್ಲಾದೇಶಿಗಳ ಮೇಲೆ ಯಾಕಿಷ್ಟು ವ್ಯಾಮೋಹ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಪ್ರಶ್ನೆ ಮಾಡಿದ್ದಾರೆ.

ಒಂದೆಡೆ ದೇಶದ ಭದ್ರತೆಗೆ ಸವಾಲಾಗಿರುವ ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಮತ್ತೊಂದೆಡೆ, ಜವಾಬ್ದಾರಿಯುತ ನಾಗರೀಕರು ಈ ಅಕ್ರಮಗಳನ್ನು ಎತ್ತಿ ತೋರಿಸಿದರೆ ಅವರನ್ನು ಟಾರ್ಗೆಟ್ ಮಾಡಿ ಕಿರುಕುಳ ಕೊಟ್ಟು ಜೈಲಿಗೆ ಅಟ್ಟಲಾಗುತ್ತಿದೆ. ಪುನೀತ್ ಕೆರೆಹಳ್ಳಿಯಂತಹ ಕಾರ್ಯಕರ್ತರ ಬಂಧನವೇ ಇದಕ್ಕೆ ಸಾಕ್ಷಿ. ಕಾಂಗ್ರೆಸ್‌ ಸರ್ಕಾರಕ್ಕೆ ದೇಶದ, ರಾಜ್ಯದ ಸುರಕ್ಷತೆಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮುಖ್ಯವಾಯಿತೇ? ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಇರಾದೆ, ದಮ್ಮು-ತಾಕತ್ತು ನಿಮ್ಮ ಸರ್ಕಾರಕ್ಕಿಲ್ಲವೇ? ಎಂದು ಸವಾಲ್‌ ಹಾಕಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+