ಸಿಎಂ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಆರೋಪ, ರಾಜ್ಯಪಾಲರಿಗೆ ದೂರು
ಬೆಂಗಳೂರು, ಡಿಸೆಂಬರ್ 20 : ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಮಾಡಿದೆ.
ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ನಿಯೋಗ ಬುಧವಾರ ರಾಜ್ಯಪಾಲರಿಗೆ ಈ ಕುರಿತು ಮನವಿ ಮಾಡಿದೆ. ಭೂಪಸಂದ್ರ ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭವೃದ್ಧಿ ಸಚಿವ ಕೆ.ಜೆ.ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ ವಿರುದ್ಧ ದೂರು ಸಲ್ಲಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಬಿ.ಜೆ.ಪುಟ್ಟಸ್ವಾಮಿ ಅವರು, 'ಭೂಪಸಂದ್ರದಲ್ಲಿ ನಡೆದ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಎಸಿಬಿಗೂ ದೂರು ಕೊಟ್ಟಿದ್ದೇವೆ' ಎಂದು ಹೇಳಿದರು.
'ಎಸಿಬಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಗೊಂಬೆಯಾಗಿದೆ. ಯಾವುದೇ ಮಾಹಿತಿಯನ್ನು ಆರ್ಟಿಐ ಯಡಿ ಕೇಳಿದರೂ ನೀಡುತ್ತಿಲ್ಲ. ಪ್ರಕರಣವನ್ನು ಮುಚ್ಚಿ ಹಾಕಲಾಗುತ್ತಿದೆ' ಎಂದು ಆರೋಪಿಸಿದರು.
'ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ಮಹೇಂದ್ರ ಜೈನ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿದ್ದೇವೆ. ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ' ಎಂದರು.
-
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ












Click it and Unblock the Notifications