ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಆರೋಪ, ರಾಜ್ಯಪಾಲರಿಗೆ ದೂರು

|
Google Oneindia Kannada News

ಬೆಂಗಳೂರು, ಡಿಸೆಂಬರ್ 20 : ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಮಾಡಿದೆ.

ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ನಿಯೋಗ ಬುಧವಾರ ರಾಜ್ಯಪಾಲರಿಗೆ ಈ ಕುರಿತು ಮನವಿ ಮಾಡಿದೆ. ಭೂಪಸಂದ್ರ ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲಾಗಿದೆ.

ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭವೃದ್ಧಿ ಸಚಿವ ಕೆ.ಜೆ.ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ ವಿರುದ್ಧ ದೂರು ಸಲ್ಲಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

Illegal denotification : BJP takes complaints to Governor

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಬಿ.ಜೆ.ಪುಟ್ಟಸ್ವಾಮಿ ಅವರು, 'ಭೂಪಸಂದ್ರದಲ್ಲಿ ನಡೆದ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಎಸಿಬಿಗೂ ದೂರು ಕೊಟ್ಟಿದ್ದೇವೆ' ಎಂದು ಹೇಳಿದರು.

ಬಿಎಸ್‌ವೈ ವಿರುದ್ಧ ದಾಖಲೆ ಬಿಡುಗಡೆ, ಕೆಜೆ ಜಾರ್ಜ್ ಬಾಂಬ್!ಬಿಎಸ್‌ವೈ ವಿರುದ್ಧ ದಾಖಲೆ ಬಿಡುಗಡೆ, ಕೆಜೆ ಜಾರ್ಜ್ ಬಾಂಬ್!

'ಎಸಿಬಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಗೊಂಬೆಯಾಗಿದೆ. ಯಾವುದೇ ಮಾಹಿತಿಯನ್ನು ಆರ್‌ಟಿಐ ಯಡಿ ಕೇಳಿದರೂ ನೀಡುತ್ತಿಲ್ಲ. ಪ್ರಕರಣವನ್ನು ಮುಚ್ಚಿ ಹಾಕಲಾಗುತ್ತಿದೆ' ಎಂದು ಆರೋಪಿಸಿದರು.

'ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ಮಹೇಂದ್ರ ಜೈನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದೇವೆ. ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ' ಎಂದರು.

English summary
Karnataka BJP leaders delegation complaint to Governor Vajubhai Vala and seek his permission for persecution against Chief Minister Siddaramaiah in Bhoopasandra illegal land denotification case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X