Janardhana Reddy: ಬಿಗ್ ಬ್ರೇಕಿಂಗ್: ಬಿಜೆಪಿ ಶಾಸಕ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ, ಯಾಕೆ ಇಲ್ಲಿದೆ ಮಾಹಿತಿ!
Janardhana Reddy: ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ಕೋರ್ಟ್ ಶಾಕ್ ನೀಡಿದೆ. ಹೊಸ ಪಕ್ಷ "ಕಲ್ಯಾಣ ರಾಜ್ಯ ಪ್ರಗತಿ" ಪಕ್ಷ ಕಟ್ಟಿ ಗೆದ್ದು ಬೀಗಿದ್ದ ಶಾಸಕ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದರು. ಇದೀಗ ಅವರಿಗೆ ಪ್ರಕರಣವೊಂದರಲ್ಲಿ ಸಿಬಿಐ ಕೋರ್ಟ್ ಜೈಲು ಶಿಕ್ಷೆ ಪ್ರಕಟಿಸಿದೆ. ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ಇದೀಗ ಪ್ರಕಟವಾಗಿದೆ. ಸಿಬಿಐ ಆದೇಶ ಮಾಡಿದೆ.
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನು ಸೃಷ್ಟಿ ಮಾಡಿದ್ದ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣವು ಇದೀಗ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದದಿದೆ. ಈ ಪ್ರಕರಣದಲ್ಲಿ ಇದೀಗ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬರೋಬ್ಬರಿ ಒಂದಲ್ಲ.. ಎರಡಲ್ಲ 7 ವರ್ಷಗಳ ಜೈಲು ಶಿಕ್ಷೆಯನ್ನು ಸಿಬಿಐ ವಿಶೇಷ ಹೈಕೋರ್ಟ್ ವಿಧಿಸಿ ಆದೇಶ ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 13 ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆದಿದ್ದು ಅಂತಿಮವಾಗಿ ಮೇ 6ರಂದು ಈ ಕೇಸ್‌ಗೆ ಸಂಬಂಧಿಸಿದಂತೆ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.

5 ಪ್ರಮುಖ ಆರೋಪಿ 7 ವರ್ಷ ಜೈಲು ಶಿಕ್ಷೆ: ಇನ್ನು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇದ್ದ ಸಂದರ್ಭದಲ್ಲಿ ಭಾರೀ ಅಕ್ರಮ ಅದಿರು ಗಣಿಗಾರಿಕೆ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದೇ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರಿಗೆ ಜೈಲು ಶಿಕ್ಷೆ ಸಹ ವಿಧಿಸಲಾಗಿತ್ತು. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರ ಹೆಸರು ಹಾಗೂ ಆಂಧ್ರ ಪ್ರದೇಶದ ಪ್ರಭಾವಿಗಳ ಹೆಸರು ಸಹ ಕೇಳಿ ಬಂದ ಮೇಲೆ ಬಿಜೆಪಿಯು ಕೇಂದ್ರ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಿತ್ತು. ಜೈಲು ಶಿಕ್ಷೆ ಹಾಗೂ ಜಡ್ಜ್‌ಗೆ ಆಮಿಷದಂತಹ ಗಂಭೀರ ಆರೋಪ ಕೇಳಿ ಬಂದ ಮೇಲೆ ಜನಾರ್ದನ ರೆಡ್ಡಿ ಅವರಿಂದ ಬಿಜೆಪಿ ಅಂತರ ಕಾಪಾಡಿಕೊಂಡಿತ್ತು.
ಇದೇ ವರ್ಷ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸ ಪಕ್ಷವನ್ನು ಸ್ಥಾಪನೆ ಮಾಡಿದ್ದ ಅವರು ಶಾಸಕರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಶಾಸಕರಾಗಿ ಆಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದು. ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆಗೂ ಅವರ ಹೆಸರು ಕೇಳಿ ಬಂದಿತ್ತು. ಈ ವಿಷಯದ ಚರ್ಚೆ ನಡೆಯುತ್ತಿರುವಾಗಲೇ ಸಿಬಿಐ ಅವರಿಗೆ ದೊಡ್ಡ ಶಾಕ್ ನೀಡಿದೆ.
ಜೈಲು ಶಿಕ್ಷೆ ಜನಾರ್ದನ ರೆಡ್ಡಿ ಹೇಳಿದ್ದೇನು ?
ಜನಾರ್ದನ ರೆಡ್ಡಿ ಅವರು ನಾನು ಸಮಾಜಸೇವಕ ಹಾಗೂ ಶಾಸಕನಾಗಿದ್ದೇನೆ. ಹೀಗಾಗಿ, ನನಗೆ ಜೈಲು ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಬೇಕು ಅಂತ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಮನವಿ ಮಾಡಿದ್ದಾರೆ. ಆದರೆ, ಈ ಮನವಿಗೆ ಸಿಬಿಐ ವಿಶೇಷ ಕೋರ್ಟ್‌ನ ಜಡ್ಜ್ ಗರಂ ಆಗಿದ್ದಾರೆ ಎಂದು ವರದಿಯಾಗಿದೆ. ಜನಾರ್ದನ ರೆಡ್ಡಿ ಅವರು ಜೀವಾವಧಿ ಶಿಕ್ಷೆಗೂ ಅರ್ಹರಾಗಿದ್ದಾರೆ ಎಂದು ಕೋರ್ಟ್ ಈ ವಿಚಾರದಲ್ಲಿ ಅಭಿಪ್ರಾಯಪಟ್ಟಿದೆ ಎಂದು ಹೇಳಲಾಗಿದೆ.
ಏನಿದು ಜನಾರ್ದನ ರೆಡ್ಡಿ ಪ್ರಕರಣ: ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಾರ್ದನ ರೆಡ್ಡಿ ಆರೋಪಿ ಎಂದು ಕೋರ್ಟ್ ತೀರ್ಪು ನೀಡಿದೆ. ಅಲ್ಲದೇ ಮುಂದೆ ಕೋರ್ಟ್ ಜಾಮೀನು ಮಂಜೂರು ಮಾಡುವ ವರೆಗೆ ಜನಾರ್ದನ ರೆಡ್ಡಿ ಜೈಲಿನಲ್ಲೇ ಇರಬೇಕು ಎಂದು ಹೇಳಲಾಗಿದೆ ಎನ್ನಲಾಗಿದೆ. ಬಿ.ವಿ.ಶ್ರೀನಿವಾಸರೆಡ್ಡಿ ಎನ್ನುವವರು ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜನಾರ್ದನ ರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದರು. ಈ ಸಂದರ್ಭದಲ್ಲಿ ಭಾರೀ ದೊಡ್ಡ ಮಟ್ಟದ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು. ಅಲ್ಲದೇ ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆಯನ್ನೂ ಅನುಭವಿಸಿದ್ದರು.
ಶಾಸಕ ಗಾಲಿ ಜನಾರ್ದನ ರೆಡ್ಡಿ ಶಾಸಕತ್ವಕ್ಕೆ ಕುತ್ತು ಸಾಧ್ಯತೆ !
ಗಾಲಿ ಜನಾರ್ದನ ರೆಡ್ಡಿ ಅವರು ರಾಜಕೀಯದಿಂದ ದೂರವಾಗಿ ಬಹಳ ದಿನಗಳಾಗಿದ್ದವು. ಗಾಲಿ ಜನಾರ್ದನ ರೆಡ್ಡಿ ಅವರು ರಾಜಕೀಯ ಸನ್ಯಾಸತ್ವವನ್ನೇ ಅನುಭವಿಸಿದ್ದರು. ಬಿಜೆಪಿ ಸಹ ಅವರಿಂದ ಒಂದು ಹಂತದವರೆಗೆ ಅಂತರವನ್ನು ಕಾಪಾಡಿಕೊಂಡಿತ್ತು. ಆದರೆ ಅವರು ಹೊಸ ಪಕ್ಷವನ್ನು ಸ್ಥಾಪನೆ ಮಾಡುವ ಮೂಲಕ ಬಿಜೆಪಿಗೇ ಸೆಡ್ಡೊಡೆದು ಹೊಸ ಪಕ್ಷವನ್ನು ಸ್ಥಾಪನೆ ಮಾಡಿ ಶಾಸಕನಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಅವರು ಮತ್ತೆ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.
ಇದೀಗ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಲಾಗಿರುವುದರಿಂದ ಅವರು ಜೈಲು ಸೇರುವುದು ಫಿಕ್ಸ್ ಅಂತಲೇ ಹೇಳಲಾಗುತ್ತಿದೆ. ಜಾಮೀನಿಗಾಗಿ ಹೈದರಾಬಾದ್ನ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬೇಕು ಎನ್ನುವ ಷರತ್ತನ್ನು ವಿಧಿಸಲಾಗಿದೆ. ಹೈಕೋರ್ಟ್ ಜಾಮೀನು ನೀಡುವವರೆಗೆ ಜೈಲಿನಲ್ಲಿರಬೇಕಾಗುತ್ತದೆ. ಇದೀಗ ಈ ಪ್ರಕರಣದಲ್ಲಿ ಅವರು ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.












Click it and Unblock the Notifications