ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ: ಸಮಗ್ರ ತನಿಖೆಗೆ ರಾಜೇಂದ್ರ ಕುಮಾರ್ ಕಟಾರಿಯಾ ನೇಮಕ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಏಪ್ರಿಲ್ 01: ರಾಜ್ಯದಲ್ಲಿ ಅರಣ್ಯ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಗೆ ಅನುಮತಿ ನೀಡಿರುವ ಕುರಿತು ಹೈಕೋರ್ಟ್ ಚಾಟಿ ಬೀಸಿದ ಬೆನ್ನೆಲ್ಲೆ ಅಂತಹ ಎಲ್ಲ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಲು ಸದ್ಯ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ಸರ್ಕಾರ ನೇಮಿಸಿದೆ.

ಈ ವಿಷಯವನ್ನು ಹೈಕೋರ್ಟ್‌ಗೆ ಸರ್ಕಾರವೇ ಗುರುವಾರ ಮಾಹಿತಿ ನೀಡಿ, ನ್ಯಾಯಾಲಯ ಫೆ.14ರಂದು ನೀಡಿದ್ದ ಆದೇಶ ಪಾಲನೆ ಮಾಡಲಾಗಿದೆ ಎಂದು ತಿಳಿಸಿದೆ. ವಾಣಿ ವಿಲಾಸ್ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಪವನ್ ರಾಮಸ್ವಾಮಿ ಸಲ್ಲಿಸಿದ್ದ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರಕಾರಿ ವಕೀಲರು, ರಾಜ್ಯದ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಪರವಾನಗಿ ನೀಡಿರುವ ಎಲ್ಲ ಪ್ರಕರಣಗಳ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು. ಅದಕ್ಕಾಗಿ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯನ್ನು ನೇಮಿಸಬೇಕು ಎಂದು 2022ರ ಫೆ.14ರಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಲು ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ರಾಜೇಂದರ್ ಕುಮಾರ್ ಕಟಾರಿಯಾ ಅವರು ಮೊದಲಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕೆಂಕೆರೆ ಗ್ರಾಮದಲ್ಲಿನ ಸರ್ವೆ ನಂ. 12 ಮತ್ತು 14ರಲ್ಲಿನ ಭೂಮಿಯು ಅರಣ್ಯ ಅಥವಾ ಕಂದಾಯ ಭೂಮಿಯೋ ಎಂಬುದಕ್ಕೆ ಸಂಬಂಧ ತನಿಖೆ ನಡೆಸಿ ಜೂನ್ ಮೊದಲ ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿತು.

Illegal mining in Forest Land: HC appoints Rajender Kataria as investing officer probe

ಆನಂತರದ ಮೂರು ತಿಂಗಳಲ್ಲಿ ರಾಜ್ಯದ ವಿವಿಧೆಡೆ ಅರಣ್ಯ ಅಥವಾ ಇನ್ಯಾವುದೇ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಗೆ ಅನುಮತಿ ನೀಡಿರುವ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಹೈಕೋರ್ಟ್ ಆದೇಶವೇನು?

ರಾಜ್ಯದಲ್ಲಿ ಎಲ್ಲೆಲ್ಲಿ ನಿಯಮಗಳನ್ನು ಉಲ್ಲಂಘಿಸಿ ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆ ಅನುಮತಿ ನೀಡಲಾಗಿದೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿತು.

Illegal mining in Forest Land: HC appoints Rajender Kataria as investing officer probe

ಹಲವು ಪ್ರಕರಣಗಳಲ್ಲಿ ನಿಯಮಬಾಹಿರವಾಗಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಯನ್ನು ಮಾಡಲು ಗಣಿ ಇಲಾಖೆ ಪರವಾನಗಿ ನೀಡಿದೆ. ಆದರೆ ಈ ವಿಚಾರ ಅರಣ್ಯ ಇಲಾಖೆಗೆ ತಿಳಿದೇ ಇಲ್ಲ. ಇದು ಅತ್ಯಂತ ಗಂಭೀರ ವಿಚಾರ, ಸರಕಾರದ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದಿರುವುದೇ ಕಾರಣ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

Recommended Video

ದಾಖಲೆ ಮಾಡಿ ಮಿಂಚುತ್ತಿರುವ ಬ್ರಾವೋ | Oneindia Kannada

ಪ್ರಕರಣದ ಹಿನ್ನೆಲೆ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕೆಂಕೆರೆ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸರ್ವೇ ನಂ. 10, 12, 13, 14, 15, 17/2, 18 ಮತ್ತು 19 ರಲ್ಲಿನ 525 ಎಕರೆ ಭೂಮಿಯನ್ನು ವಾಣಿ ವಿಲಾಸ್ ಸಿಮೆಂಟ್‌ಗೆ ಗಣಿಗಾರಿಕೆ ನಡೆಸಲು ಗುತ್ತಿಗೆ ನೀಡಿ ಸರ್ಕಾರ 2002ರ ಫೆ.4ರಂದು ಆದೇಶಿಸಿತ್ತು. 2010ರ ಜ.30ರಂದು ಚಿತ್ರದುರ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯು ಸರ್ವೇ ನಂ.12 ಮತ್ತು 14ರಲ್ಲಿನ ಭೂಮಿಯು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಗೆ ಒಳಪಡಲಿದೆ. ಅರಣ್ಯ ಇಲಾಖೆಯಿಂದ ಅನುಮತಿ ಪಡೆಯುವವರೆಗೆ ಗಣಿಗಾರಿಕೆ ನಡೆಸಬಾರದು ಎಂದು ಆದೇಶ ಮಾಡಿದ್ದರು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಕಳೆದ ಫೆ.14ರಂದು ನಡೆದ ವಿಚಾರಣೆ ವೇಳೆ ಸರ್ಕಾರಿ ವಕೀಲರು ವಾದಿಸಿ, ಅರ್ಜಿದಾರರಿಗೆ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿರುವುದು ನಿಜ. ಆದರೆ, ಆ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತಂದಿರಲಿಲ್ಲ. ಬಳಿಕ ಆ ಜಾಗ ಅರಣ್ಯ ಇಲಾಖೆಗೆ ಸೇರಿರುವ ವಿಚಾರ ತಿಳಿದು ಬಂದಿದೆ. ಪ್ರಕರಣದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡರು. ಅದನ್ನು ಪರಿಗಣಿಸಿದ್ದ ನ್ಯಾಯಪೀಠ ತನಿಖೆಗೆ ಆದೇಶಿಸಿತ್ತು.

English summary
Illegal mining in Forest Land: Karnataka High court appointed Principal secretary Rajender Kataria as investing officer to probe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X