Get Updates
Get notified of breaking news, exclusive insights, and must-see stories!

ಚುನಾವಣೆ 2023: ಅಕ್ರಮ ಆಸ್ತಿ ಪ್ರಕರಣ- ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು ಏಪ್ರಿಲ್ 5: ಅಕ್ರಮ ಆಸ್ತಿ ಗಳಿಕೆ ಸಂಬಂಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಎಂಪಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರು ವಜಾಗೊಳಿಸಿದರು. ಇದರಿಂದ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯಗೆ ಇನ್ನಷ್ಟು ಸಂಕಷ್ಟ ಎದುರಾಗಿದೆ.

Illegal property case: Petition filed by Renukacharya dismissed

ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿ ವಜಾ

ಶಾಸಕ ರೇಣುಕಾಚಾರ್ಯಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದ್ದು, ಯಾವುದೇ ಕ್ಷಣದಲ್ಲಿ ಅವರ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆಯಾಗಲಿದೆ. ರೇಣುಕಾಚಾರ್ಯ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯಪೀಠ ಮಂಗಳವಾರ ಈ ಆದೇಶ ನೀಡಿದೆ.

ಒಂದೇ ವಿಷಯದ ಕುರಿತು ಅನೇಕ ಎಫ್‌ಐಆರ್‌ಗಳ ರೇಣುಕಾಚಾರ್ಯ ಅವರ ವಾದವನ್ನು ತಿರಸ್ಕರಿಸಲಾಗಿದೆ. 2015ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಿದ್ಧಪಡಿಸಿದ್ದಾರೆ. ಆದರೆ, ಆರೋಪಿಯು ಜನಪ್ರತಿನಿಧಿಯಾಗಿರುವುದರಿಂದ, ವರದಿ ಸಲ್ಲಿಸಲು ಸಮಕ್ಷ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು. ಪ್ರಾಧಿಕಾರ ಅನುಮತಿ ನೀಡಿದ ಕೂಡಲೇ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ. ಇಂತಹ ಸಮಯದಲ್ಲಿ ಆರೋಪಿ ವಿರುದ್ಧದ ಎಫ್‌ಐಆರ್‌ ರದ್ದುಮಾಡಬಾರದು ಎಂದು ಮನವಿ ಮಾಡಿದ್ದರು.

ಅಕ್ರಮ ಆಸ್ತಿ ಪ್ರಕರಣ

ಶಾಸಕ ರೇಣುಕಾಚಾರ್ಯ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಮೂಲದ ಗುರುಪಾದಯ್ಯ ಮಠದ್ ಎಂಬುವರು ದಾವಣಗೆರೆಯ ಲೋಕಾಯುಕ್ತಕ್ಕೆ 2015ರ ಏಪ್ರಿಲ್‌ 28ರಂದು ಖಾಸಗಿ ದೂರು ಸಲ್ಲಿಸಿದ್ದರು. ಅವರ ದೂರಿನ ಆಧಾರ ಮೇಲೆ ರೇಣುಕಾಚಾರ್ಯ ವಿರುದ್ಧ 2015ರಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

Illegal property case: Petition filed by Renukacharya dismissed

ದೂರಿನ ಪ್ರಕಾರ, 2004ರಲ್ಲಿ ಹೊನ್ನಾಳಿಯಿಂದ ಸ್ಪರ್ಧಿಸಲು ರೇಣುಕಾಚಾರ್ಯ ನಾಮಪತ್ರ ಸಲ್ಲಿಸಿದಾಗ ತಮ್ಮ ಆಸ್ತಿ 26.07 ಲಕ್ಷ, 2008ರ ಚುನಾವಣೆಗೆ 73.97 ಲಕ್ಷ ರೂ. 2013ರಲ್ಲಿ ಅವರ ಆಸ್ತಿ 4.95 ಕೋಟಿ ರೂ. ಸಚಿವರಾಗಿದ್ದ ಅವಧಿಯಲ್ಲಿ ಆದಾಯ ಮತ್ತು ಆಸ್ತಿಯಲ್ಲಿ ಏರಿಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಲೋಕಾಯುಕ್ತರ ವಾದವೇನು?

ಲೋಕಾಯುಕ್ತ ಪರ ವಾದಿಸಿದ್ದ ವಕೀಲರು, ನಿಯಮದಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಿದ್ದು, ತನಿಖೆ ಮುಕ್ತಾಯವಾಗಿ ಅಂತಿಮ ವರದಿ ಸಿದ್ಧವಾಗಿದೆ. ಆದರೆ ಅರ್ಜಿದಾರರು ಜನಪ್ರತಿನಿಧಿಯಾಗಿರುವುದರಿಂದ ಅಂತಿಮ ವರದಿ ಸಲ್ಲಿಕೆಗಾಗಿ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರವಾದ ಸ್ಪೀಕರ್‌ ಅನುಮತಿ ನೀಡಿದ ಕೂಡಲೇ ಸಂಬಂಧಿಸಿದ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಅರ್ಜಿದಾರರ ಪರ ವಕೀಲರು, ನಿಯಮದ ಪ್ರಕಾರ ಎರಡನೇ ದೂರು ಊರ್ಜಿತವಾಗುವುದಿಲ್ಲ. ಹಾಗಾಗಿ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿದರು.

Illegal property case: Petition filed by Renukacharya dismissed

ಪ್ರಕರಣದ ಹಿನ್ನೆಲೆ ಏನು?

2015ರ ಏಪ್ರಿಲ್ 28ರಂದು ಗುರುಪಾದಯ್ಯ ಮಠದ್‌ ಎಂಬುವರು ರೇಣುಕಾಚಾರ್ಯ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಸಿದ್ದಾರೆ, ಆ ಬಗ್ಗೆ ಸಮಗ್ರ ತನಿಖೆಗೆ ಆದೇಶ ನೀಡಬೇಕೆಂದು ದಾವಣಗೆರೆಯ ವಿಶೇಷ ಲೋಕಾಯುಕ್ತ ಕೋರ್ಟ್‌ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಪ್ರಕರಣದ ಗಂಭೀರತೆಯನ್ನು ಮನಗಂಡ ಕೋರ್ಟ್‌, ದಾವಣಗೆರೆ ಲೋಕಾಯುಕ್ತ ಎಸ್‌ಪಿಗೆ ಸಿಆರ್‌ಪಿಸಿ ಸೆಕ್ಷನ್‌ 156 (3) ಅಡಿಯಲ್ಲಿಈ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದರು. ಆಗ ರೇಣುಕಾಚಾರ್ಯ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+