ಬಹುಕೋಟಿ ರೂಪಾಯಿ ಐಎಂಎ ಪ್ರಕರಣ ಸಿಬಿಐ ತನಿಖೆಗೆ?

ಬೆಂಗಳೂರು, ಜೂನ್ 17 : ಬಹುಕೋಟಿ ರೂಪಾಯಿ ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ನ್ಯಾಯಾಲಯ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.

ಸೋಮವಾರ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ಐಎಂಎ ಕಂಪನಿಯಿಂದ ಹಣ ಕಳೆದುಕೊಂಡ 18 ಜನರು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ವಿಚಾರಣೆಯನ್ನು ಜೂನ್ 28ಕ್ಕೆ ಮುಂದೂಡಿದ ನ್ಯಾಯಾಲಯ ಸಿಬಿಐ, ರಾಜ್ಯ ಸರ್ಕಾರ ಮತ್ತು ಐಎಂಎ ಜ್ಯುವೆಲರ್ಸ್‌ ಕಂಪನಿಗೆ ನೋಟಿಸ್ ಜಾರಿ ಮಾಡಿತು. ಪ್ರಸ್ತುತ ಕರ್ನಾಟಕ ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ.

IMA cheating case : Karnataka High Court notice to CBI

ಐಎಂಎ ವಂಚನೆ ಕುರಿತು ತನಿಖೆ ನಡೆಸುತ್ತಿರುವ ಬಿ.ಆರ್.ರವಿಕಾಂತೇಗೌಡ ನೇತೃತ್ವದ ಎಸ್‌ಐಟಿ ರಾಜ್ಯದ ಇತರ ಜಿಲ್ಲೆಗಳಲ್ಲಿ ದಾಖಲಾಗಿರುವ ದೂರುಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡುತ್ತಿದೆ. ಮೈಸೂರು ನಗರದಲ್ಲಿ 1,475 ದೂರುಗಳು ದಾಖಲಾಗಿವೆ ಎಂದು ಪೊಲೀಸರು ಎಸ್ಐಟಿಗೆ ಮಾಹಿತಿ ನೀಡಿದ್ದಾರೆ.

ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಸರ್ಕಾರ 10 ಅಧಿಕಾರಿಗಳ ಎಸ್‌ಐಟಿ ತಂಡವನ್ನು ರಚನೆ ಮಾಡಿದೆ. ಬೆಂಗಳೂರು ನಗರದಲ್ಲಿಯೇ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಸಾವಿರಕ್ಕೂ ಅಧಿಕ ದೂರುಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+