ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಸೆ.22ರಂದು ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 21 : ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಂಗಳವಾರವೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಮಳೆಯಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಅಪಾರವಾದ ನಷ್ಟವಾಗಿದೆ.

ಸೋಮವಾರ ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ 22ರ ಬೆಳಗ್ಗೆ 11.30ರ ತನಕ ಮಳೆಯಾಗಲಿದೆ ಎಂದು ತಿಳಿಸಿದೆ.

ಶನಿವಾರ, ಭಾನುವಾರ ಸುರಿದ ಮಳೆಗೆ ಉಡುಪಿ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಸೋಮವಾರ ಜಿಲ್ಲೆಯಲ್ಲಿ ಮಳೆ ಕೊಂಚ ಕಡಿಮೆಯಾಗಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ನೆರೆ ನೀರು ಕಡಿಮೆಯಾಗುತ್ತಿದೆ.

IMA Issues Heavy Rain Alert In Karavali And South Interior Karnataka

ಉಡುಪಿ ಜಿಲ್ಲೆಯ ಸ್ವರ್ಣಾನದಿ, ಸೀತಾನದಿ, ಪಾಪನಾಶಿನಿ ನದಿಗಳು ಭಾನುವಾರ ತುಂಬಿ ಹರಿದಿದ್ದವು. ಇದರಿಂದಾಗಿ ಹಲವಾರು ಗ್ರಾಮಗಳು ನೀರಿನಿಂದ ಆವೃತವಾಗಿದ್ದವು. ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿತ್ತು.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತಾಗಿದೆ. ಸ್ಥಳೀಯರು ಮಣ್ಣನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

Recommended Video

Bangalore ಇನ್ನೂ ಕೆಲವು ದಿನ ಮಳೆ ಮುಂದುವರೆಯಲಿದೆ | Oneindia Kannada

ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ಮಳೆಯಾಗಿತ್ತು. ಇನ್ನು ಎರಡು ಮೂರು ದಿನ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಕೆಲವು ಪ್ರದೇಶಗಳಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

English summary
The India Meteorological Department (IMD) issued heavy rain alert in Karnataka karavali and south interior Karnataka till September 22, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X