ಐಎಂಎ ಹೂಡಿಕೆದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್: ರಂಜಾನ್ ಹಬ್ಬದೊಳಗೆ ಹಣ ವಾಪಸ್
ಬೆಂಗಳೂರು ಫೆಬ್ರವರಿ 25: ಐಎಂಎ ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು. ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, "ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಐಎಂಎ ನಲ್ಲಿ ಹಣ ಹೂಡಿ ಮೋಸ ಹೋದವರಿಗೆ ಅವರ ಹೂಡಿಕೆಯ ಅನುಪಾತದ ಆಧಾರದಲ್ಲಿ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದರು.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರ ಖಾತೆಗಳ ಮೂಲಕ 3213.58 ಕೋಟಿ ರೂ.ಗಳನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069. ಈ ಪೈಕಿ 1400 ಕೋಟಿ ರೂ.ಗಳನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರೂ.ಗಳನ್ನು 50,000 ರೂ.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್ನಲ್ಲಿ ಜಮೆ ಮಾಡಲಾಗಿತ್ತು.
66.66 ಕೋಟಿ ರೂ.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 8/11/2023 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರೂ.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 23/5/2024 ರಂದು ಜಮೆ ಮಾಡಲಾಗಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರೂ.ಗಳನ್ನು 7/11/2024 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರೂ.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಯಿತು.
ಐಎಂಎ ಕಂಪೆನಿಗೆ ಸಂಬಂಧಿಸಿದ ಹತ್ತಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ಥಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ರೂ., ನಗದು ಹಣ 11.72 ರೂ. ಹೂಡಿಕೆ ಪತ್ರ 11.06 ಕೋಟಿ ರೂ. ಸೇರಿದಂತೆ ಒಟ್ಟಾರೆ 534.5 ಕೋಟಿ ರೂ.ಗಳನ್ನು ಸರ್ಕಾರ ಮುಟ್ಟುಗೋಲು ಈಗಾಗಲೇ ಹಾಕಿದೆ. ನ್ಯಾಯಮೂರ್ತಿ ಜಸ್ಟೀಸ್ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರವೇ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದರು.
ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂತಹ ದಾಖಲಾತಿಗಳನ್ನು ಕೋರಿತ್ತು.
ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣವನ್ನು ನೀಡಲು ಕ್ರಮವಹಿಸಲಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications