Karnataka Rains: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ, ಐಎಂಡಿ ಮುನ್ಸೂಚನೆ! Rain Forecast
Karnataka Rain Forecast: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಅಕ್ಟೋಬರ್ 29ರ ವರೆಗೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಸಮುದ್ರ ಭಾಗಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕು ಪಡೆದುಕೊಂಡಿದೆ. ಈ ನಡುವೆ ವಾಯುಭಾರ ಕುಸಿತವಾಗಿರುವುದು ಮಳೆ ಹೆಚ್ಚಾಗುವುದಕ್ಕೆ ಕಾರಣವಾಗಿದೆ.
ಕಳೆದ ಮೂರು ದಿನಗಳಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆಗ್ನೇಯ ಅರಬ್ಬಿ ಸಮುದ್ರ ಮತ್ತು ಅದಕ್ಕೆ ಹೊಂದಿಕೊಂಡಿರುವ ಲಕ್ಷದ್ವೀಪ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶವು ಪಶ್ಚಿಮಕ್ಕೆ ಸರಿದು ಆಗ್ನೇಯ ಅರಬ್ಬಿ ಸಮುದ್ರಕ್ಕೆ ಸರಿಯಲಿದೆ. ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಅದಕ್ಕೆ ಹೊಂದಿಕೊಂಡಿರುವ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಮೇಲ್ಮಟ್ಟದ ವಾಯು ಚಂಡಮಾರುತವು ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀ ವರೆಗೆ ಮುಂದುವರಿದು ವಿಸ್ತರಿಸಿದೆ.

ಇದರ ಪ್ರಭಾವದಿಂದಾಗಿ ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳು ಮತ್ತು ಅದಕ್ಕೆ ಹೊಂದಿಕೊಂಡಿರುವ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು. ಇದರಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕೇರಳ ಮತ್ತು ಅದಕ್ಕೆ ಹೊಂದಿಕೊಂಡಿರುವ ಕೊಮೊರಿನ್ ಪ್ರದೇಶದ ಮೇಲೆ ಮೇಲಿನ ವಾಯು ಚಂಡಮಾರುತವು ಈಗ ಕೇರಳ ಕರಾವಳಿಯಿಂದ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ಇದ್ದು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ವರೆಗೆ ವಿಸ್ತರಿಸಿದೆ ಎಂದು ಹೇಳಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಅ.29ರ ವರೆಗೆ ಉತ್ತಮ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈ ಜಿಲ್ಲೆಗಳಲ್ಲಿ ಮಳೆ: ಇನ್ನು ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮೀನುಗಾರರಿಗೆ ಎಚ್ಚರಿಕೆ: ಇನ್ನು ಮೂರು ದಿನಗಳ ಕಾಲ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯ ಉದ್ದಕ್ಕೂ ಗಾಳಿಯ ವೇಗವು ಪ್ರತಿ ಗಂಟೆಗೆ 55 ಕಿ.ಮೀ. ಇರಲಿದ್ದು, ಭಾರೀ ಮಳೆ ಆಗಲಿದೆ. ಹೀಗಾಗಿ, ಈ ಅವಧಿಯಲ್ಲಿ ಸಮುದ್ರ ಭಾಗಕ್ಕೆ ಇಳಿಯದಂತೆ ಮೀನುಗಾರರು ಎಚ್ಚರಿಕೆ ನೀಡಲಾಗಿದೆ.












Click it and Unblock the Notifications