karnataka weather: ರಾಜ್ಯದೆಲ್ಲೆಡೆ ಕನಿಷ್ಠ ತಾಪಮಾನ, ಇಂದಿನಿಂದ ಈ ಜಿಲ್ಲೆಗಳಲ್ಲಿ ಮೈ ನಡುಗಿಸುವ ಚಳಿ

ಹೊಸ ವರ್ಷಾರಂಭದ ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಿದೆ. ಇನ್ನು ಚಳಿಗಾಲದ ಅವಧಿ ಮುಂದುವರಿಯುವುದರಿಂದ ಎಲ್ಲೆಡೆ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈ ತಿಂಗಳಿಡೀ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮೈನಡುಗಿಸುವ ಚಳಿ ಕಂಡುಬರಲಿದೆ ಎಂದು ಮುನ್ಸೂಚನೆ ನೀಡಿದೆ.

ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆಯು ಕಡಿಮೆ ಪ್ರಮಾಣದಲ್ಲಿ ಗುರುತಿಸಲ್ಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಕಂಡುಬರಲಿದೆ.

IMD Forecast Cold Wave To Continue Across Karnataka Dry Weather Predicted

ಸಂಜೆಯಿಂದಲೇ ಭಾರಿ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, ಬೆಳಿಗ್ಗೆ ದೃಷ್ಟಿ ಗೋಚರಿಸದಷ್ಟು ಪ್ರಮಾಣದಲ್ಲಿ ದಟ್ಟವಾದ ಮಂಜು ಕೂಡ ಆವರಿಸಲಿದೆ. ಚಳಿಯ ಪ್ರಮಾಣ ಹೆಚ್ಚಾಗಿರುವುದರಿಂದ ಆರೋಗ್ಯ ಸಮಸ್ಯೆಗಳು ಕೂಡ ಜನರನ್ನು ಕಾಡುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರ ವಹಿಸುವುದು ಅಗತ್ಯ. ಸಾಧ್ಯವಾದಷ್ಟು ಬೆಚ್ಚನೆಯ ವಸ್ತ್ರಗಳನ್ನೇ ಧರಿಸುವಂತೆ ಸಲಹೆ ನೀಡಲಾಗಿದೆ.

ನಿನ್ನೆ ರಾಜ್ಯದಾದ್ಯಂತ ಒಣ ಹವೆ ಕಂಡು ಬಂದಿತ್ತು. ಒಳನಾಡಿನ ಹಲವು ಕಡೆಗಳಲ್ಲಿ ದಟ್ಟವಾದ ಮಂಜು ಕೂಡ ಇತ್ತು. ಇಂದಿನಿಂದ ಜನವರಿ 8ರವರೆಗೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಈ ಅವಧಿಯಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಕೂಡ ಹೆಚ್ಚಾಗಲಿದೆ. ಮುಖ್ಯವಾಗಿ ರಾಜ್ಯದ ಒಳನಾಡಿನಲ್ಲಿ ದಟ್ಟವಾದ ಮಂಜು ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

IMD Forecast Cold Wave To Continue Across Karnataka Dry Weather Predicted

ರಾಜ್ಯದ ಒಳನಾಡಿನಲ್ಲಿ ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆ ಆಗಬಹುದು. ನಂತರ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ. ಕರಾವಳಿ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರು ನಗರ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮುಖ್ಯವಾಗಿ ಮೋಡವಿಲ್ಲದ ಆಕಾಶ ಕಂಡು ಬರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಈ ವೇಳೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್‌ ಹಾಗೂ 15 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ.

ಇತ್ತೀಚೆಗೆ ಗದಗ ಹಾಗೂ ಬೀದರ್​ನಲ್ಲಿ ತಲಾ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಕಂಡುಬಂದಿತ್ತು. ಬೆಂಗಳೂರು ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿತ್ತು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಬೆಂಗಳೂರಿನ ಜಿಕೆವಿಕೆ ಭಾಗದಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+