Karnataka Rains: ಕರ್ನಾಟಕದ ವಿವಿಧ ಭಾಗದಲ್ಲಿ 3 ದಿನ ಭಾರೀ ಮಳೆ: ಐಎಂಡಿ ಮುನ್ಸೂಚನೆ
Karnataka Rains: ಬಂಗಾಳಕೊಲ್ಲಿ ಪೂರ್ವ - ಮಧ್ಯ ಭಾಗದಲ್ಲಿ ವಾಯುಭಾರ ಕುಸಿತ ಮುಂದುವರಿದಿದ್ದು, ಕರ್ನಾಟಕದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಈಶಾನ್ಯ ಮುಂಗಾರು ಮಳೆ ಚುರುಕು ಪಡೆದುಕೊಂಡಿರುವುದು ಹಾಗೂ ವಾಯುಭಾರ ಕುಸಿತ ಕಾರಣಕ್ಕೆ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನಗಳ ವರೆಗೆ ರಾಜ್ಯದಲ್ಲಿ ಸಾಧಾರಣ ಮಳೆ ಇರಲಿದೆ. ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ತಮಿಳುನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ ಎತ್ತರದಲ್ಲಿದೆ.
ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಕೊಮೊರಿನ್ ಪ್ರದೇಶದ ಮೇಲೆ ಸರಾಸರಿ ಸಮುದ್ರಮಟ್ಟಕ್ಕಿಂತ 5.8 ಕಿ. ಮೀ ಎತ್ತರದಲ್ಲಿದೆ. ಇನ್ನು ನೈಋತ್ಯ ಬಂಗಾಳಕೊಲ್ಲಿಯಿಂದ ಶ್ರೀಲಂಕಾ ಮತ್ತು ತಮಿಳುನಾಡಿನಾದ್ಯಂತ ಕೇರಳದ ವರೆಗೆ ಸರಾಸರಿ ಸಮುದ್ರಮಟ್ಟಕ್ಕಿಂತ 0.9 ಕಿ.ಮೀ ಎತ್ತರದಲ್ಲಿದೆ ಎಂದ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಭಾರೀ ಮಳೆಯಾಗಿದೆ. ಈ ಭಾಗದಲ್ಲಿ ಬರೋಬ್ಬರಿ 12 ಸೆಂ.ಮೀ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿತ್ತು ಮತ್ತು ಒಳನಾಡಿನಲ್ಲಿ ದುರ್ಬಲವಾಗಿತ್ತು.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ ?
ಇನ್ನು ಬೆಂಗಳೂರಿನಲ್ಲಿ ಸಾಧಾರಣ ಹವಾಮಾನ ಮುಂದುವರಿದಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಭಾಗದಲ್ಲಿ ಮುಂಜಾನೆ ಸಮಯದಲ್ಲಿ ಮಂಜು ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಮುಂದಿನ 48 ಗಂಟೆ ಅವಧಿಯಲ್ಲೂ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ಅಲ್ಲದೇ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಐಎಂಡಿ ತಿಳಿಸಿದೆ.












Click it and Unblock the Notifications